ತುಮಕೂರು: ಜಿಲ್ಲೆಯ ಗೋ ಶಾಲೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಎಂದು ಜಿಲ್ಲಾಧಿಕಾರಿ ಕೆಪಿ ಮೋಹನ್ ರಾಜ್ ಸರ್ಕಾರಕ್ಕೆ ವರದಿ ನೀಡಿದ್ದಾರೆ.
ಅಕ್ರಮ ನಡದಿದೆ ಎಂಬ ಹಿನ್ನಲೆಯಲ್ಲಿ ಅಧಿಕಾರಿಗಳಿಗೆ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ನೀಡಲಾಗಿದೆ ಎಂಬ ವಿಚಾರವೂ ಸುಳ್ಳು ಎಂದು ಜಿಲ್ಲಾಧಿಕಾರಿ ತಾವು ನೀಡಿದ ವರದಿಯಲ್ಲಿ ಹೇಳಿದ್ದಾರೆ. ಅಲ್ಲದೆ ಜಿಲ್ಲೆಯ 8 ತಾಲೂಕುಗಳಲ್ಲಿ 33 ಗೋ ಶಾಲೆ ಹಾಗೂ 2 ಮೇವು ಬ್ಯಾಂಕ್ ತೆರೆಯಲಾಗಿದೆ. ಟೆಂಡರ್ ಮೂಲಕವೇ ಮೇವು ಖರೀದಿ ಮಾಡಲಾಗಿದೆ. ಇಲ್ಲಿವರೆಗೆ 34 ಕೋಟಿ ರೂ. ಮಾತ್ರ ಖರ್ಚಾಗಿದ್ದು ಜಿಲ್ಲಾಡಳಿತ 15.75 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಟೆಂಡರ್‍ದಾರರಿಗೆ ಇನ್ನೂ 18.25 ಕೋಟಿ ರೂ. ಬಾಕಿ ನೀಡಬೇಕಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ವರದಿ ನೀಡಿದ್ದಾರೆ.
Advertisement
ಈ ಮೂಲಕ ಜಿಲ್ಲೆಯೊಂದರಲ್ಲೇ ಗೋ ಶಾಲೆಯಲ್ಲಿ ಮೇವು ಖರೀದಿಯಲ್ಲಿ 22 ಕೋಟಿ ರೂ. ಅವ್ಯವಹಾರವಾಗಿದೆ ಎಂದು ದೃಢಪಡಿಸಿದ ಉಪಲೋಕಾಯುಕ್ತರ ವರದಿಯೇ ಸುಳ್ಳು ಅಂತ ಜಿಲ್ಲಾಧಿಕಾರಿಗಳು ಹೇಳಿದ್ದಾರೆ.
Advertisement
Advertisement
ಏನಿದು ಪ್ರಕರಣ?: ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರು ನಿವಾಸಿ ಮಲ್ಲಿಕಾರ್ಜುನ್ ಎನ್ನುವವರು ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿದ ಉಪಲೋಕಾಯುಕ್ತ ನ್ಯಾ. ಅಡಿಯವರು ಬರಗಾಲದ ಹಿನ್ನಲೆಯಲ್ಲಿ ಪ್ರಾರಂಭಿಸಿದ ಗೋ ಶಾಲೆಗಳಿಗೆ ಖುದ್ದು ಭೆಟಿ ನೀಡಿ ಪರಿಶೀಲಿಸಿದ್ದರು. ಇಲ್ಲಿ ಭಾರಿ ಅಕ್ರಮ ನಡೆದಿರುವುದು ಪತ್ತೆಯಾಗಿತ್ತು. ಮೇವು ಖರಿದಿಸಿರುವ ರಸೀದಿಗಳಿಗೂ, ದಾಸ್ತಾನು ನಿರ್ವಹಣೆ ಪುಸ್ತಕದಲ್ಲಿರುವ ಮಾಹಿತಿಗೂ ವ್ಯತ್ಯಾಸ ಕಂಡುಬಂದಿತ್ತು.
Advertisement
ತುಮಕೂರು ಜಿಲ್ಲೆಯ 7 ತಾಲೂಕುಗಳ ಗೋಶಾಲೆ ನಿರ್ವಹಣೆಗೆ ಬಿಡುಗಡೆ ಮಾಡಿದ 33.96 ಲಕ್ಷ ರೂ. ಅಕ್ರಮ ನಡೆದಿದೆ. ಅದೇ ರೀತಿ ಮೇವು ಖರೀದಿಯಲ್ಲೂ 21.98 ಕೋಟಿ ರೂ ದುರ್ಬಳಕೆ ಅಗಿದೆ. ಕಾನೂನು ಸಚಿವ ಟಿ.ಬಿ.ಜಯಚಂದ್ರರ ಸ್ವಕ್ಷೇತ್ರ ಶಿರಾದಲ್ಲಿ ಬರೋಬ್ಬರಿ 6.55 ಕೋಟಿ ರೂ. ಅಕ್ರಮವಾಗಿದೆ. ಉಳಿದಂತೆ ಗುಬ್ಬಿಯಲ್ಲಿ 1 ಕೋಟಿ, ಗೃಹಸಚಿವರ ಕ್ಷೇತ್ರ ಕೊರಟಗೆರೆಯಲ್ಲಿ 1.55 ಕೋಟಿ, ತಿಪಟೂರಲ್ಲಿ 2.99 ಕೋಟಿ, ತುರುವೇಕೆರೆಯಲ್ಲಿ 1.49 ಕೋಟಿ, ಪಾವಗಡದಲ್ಲಿ 3.10 ಕೋಟಿ, ಚಿಕ್ಕನಾಯಕನ ಹಳ್ಳಿಯಲ್ಲಿ 4.92 ಕೋಟಿ ರೂ ಅವ್ಯವಹಾರ ನಡೆದಿದೆ ಎಂದು ಉಪಲೋಕಾಯುಕ್ತರ ವರದಿಯಲ್ಲಿ ಹೇಳಲಾಗಿದೆ.