ಬೆಂಗಳೂರು: ಡಿಪ್ಲೊಮಾ ಅಭ್ಯರ್ಥಿಗಳಿಗೆ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್ನ ಕೋರ್ಸ್ಗಳಿಗೆ ಪ್ರವೇಶಕ್ಕೆ ಜೂ.22 ಕ್ಕೆ ನಿಗದಿಯಾಗಿರುವ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ-2024 (DCET) ಆನ್ಲೈನ್ ಬದಲು ಆಪ್ಲೈನ್ ಮಾದರಿಯಲ್ಲಿ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತಿಳಿಸಿದೆ.
ಈ ಪರೀಕ್ಷೆ (ಡಿಸಿಇಟಿ-2024) ಯನ್ನು ಆನ್ಲೈನ್ ಮೂಲಕ ನಡೆಸಲಾಗುವುದೆಂದು ಈ ಮುಂಚೆ ತಿಳಿಸಲಾಗಿತ್ತು. ಆದರೆ, ವಿವಿಧ ಕಾರಣಗಳಿಂದಾಗಿ ಪರೀಕ್ಷೆಯನ್ನು ಆಫ್ಲೈನ್ ಸ್ವರೂಪದಲ್ಲಿ ಹಿಂದಿನ ವರ್ಷಗಳಲ್ಲಿ ನಡೆಸಿದಂತೆಯೇ ಓಎಂಆರ್ ಉತ್ತರ ಪತ್ರಿಕೆಯ ಮಾದರಿಯಲ್ಲಿ ನಡೆಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಬುಧವಾರ ಪತಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ವಿಚಾರಣೆಗೆ ಬನ್ನಿ – ಹರೀಶ್ ಪೂಂಜಾ ಬಂಧನ ಮಾಡದೇ ತೆರಳಿದ ಪೊಲೀಸರು
Advertisement
Advertisement
ಪರೀಕ್ಷೆಯನ್ನು ಬಾಗಲಕೋಟೆ, ಬಳ್ಳಾರಿ, ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರ್ಗಿ, ಉಡುಪಿ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಾತ್ರ ನಡೆಸಲಾಗುವುದು. ಡಿಸಿಇಟಿ-2024ಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಈ ಮೇಲಿನ ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಜಿಲ್ಲೆಗಳನ್ನು ಪರೀಕ್ಷಾ ಸ್ಥಳವನ್ನಾಗಿ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳು ಈ ಮೇಲಿನ ಜಿಲ್ಲೆಗಳಲ್ಲಿ ಒಂದನ್ನು ಆಯ್ಕೆ ಮಾಡಿ ಡಿಸಿಇಟಿ-2024 ಪರೀಕ್ಷೆಗೆ ಹಾಜರಾಗಬೇಕು ಎಂದು ಅವರು ಸೂಚಿಸಿದ್ದಾರೆ.
Advertisement
ಈ ಮೇಲಿನ ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಜಿಲ್ಲೆಗಳನ್ನು ಪರೀಕ್ಷಾ ಸ್ಥಳವನ್ನಾಗಿ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟಿನಲ್ಲಿ ನಿಗದಿತ ಲಿಂಕ್ ಮೂಲಕ ಮೇ 24ರ ಬೆಳಗ್ಗೆ 11:00 ರಿಂದ 27 ರ ರಾತ್ರಿ 11:59 ರೊಳಗೆ ಬದಲಿ ಪರೀಕ್ಷಾ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ರಸ್ತೆ ಗುಂಡಿ ಮುಚ್ಚಲು ವಿಶೇಷ ನಿರ್ವಹಣೆ ವ್ಯವಸ್ಥೆ: ಸಿದ್ದರಾಮಯ್ಯ
Advertisement
ಈ ಮೇಲೆ ತಿಳಿಸಿರುವ ಜಿಲ್ಲೆಗಳ ಪೈಕಿ ಯಾವುದಾದರೂ ಒಂದು ಜಿಲ್ಲೆಯನ್ನು ಪರೀಕ್ಷಾ ಕೇಂದ್ರವನ್ನಾಗಿ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳು ಮತ್ತೊಮ್ಮೆ ಪರೀಕ್ಷಾ ಕೇಂದ್ರದ ಜಿಲ್ಲೆಯನ್ನು ಆಯ್ಕೆ ಮಾಡುವ ಅಗತ್ಯ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.