ಬೆಂಗಳೂರು: ಡಿಸಿಇಟಿ-25ಗೆ (DCET) ಅರ್ಜಿ ಸಲ್ಲಿಸಲು ಇದ್ದ ಕೊನೆ ದಿನಾಂಕವನ್ನು ಮೇ 13ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 11ರವರೆಗೆ ಅರ್ಜಿ ಸಲ್ಲಿಸಿ, ಅಂದೇ ಸಂಜೆ 6 ಗಂಟೆ ಒಳಗೆ ಶುಲ್ಕ ಪಾವತಿಸಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್ ಕದನ ವಿರಾಮ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ
ಡಿಪ್ಲೊಮಾ ಮಾಡಿದವರಿಗೆ ಎಂಜಿನಿಯರಿಂಗ್ ಕೋರ್ಸ್‌ಗೆ 3ನೇ ಸೆಮಿಸ್ಟರ್ ಅಥವಾ ಎರಡನೇ ವರ್ಷಕ್ಕೆ ನೇರ ಪ್ರವೇಶ ನೀಡಲು ಡಿಸಿಇಟಿ ನಡೆಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ಭೂ, ಜಲ, ವಾಯು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಿ ಕದನ ವಿರಾಮಕ್ಕೆ ಭಾರತ-ಪಾಕ್ ಒಪ್ಪಿಗೆ