ಬೆಂಗಳೂರು: ಡಿಸಿಇಟಿ-24 ಕ್ಯಾಶುಯಲ್ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಸೆಪ್ಟೆಂಬರ್ 18ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಸೀಟುಗಳ ಲಭ್ಯತೆಯನ್ನು ಸೆ.18ರ ಮಧ್ಯಾಹ್ನ 2ಗಂಟೆಗೆ ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಸೆ.18ರ 4ಗಂಟೆಯಿಂದ ಸೆ.20ರವರೆಗೆ ಹೊಸದಾಗಿ ಆಯ್ಕೆ ದಾಖಲಿಸಬಹುದು. ಸೆ.21ರಂದು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುವುದು. ಸೆ.23ರಿಂದ 25ರವರೆಗೆ ಶುಲ್ಕ ಪಾವತಿ ಮತ್ತು ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಸೆ.25ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕಾಗುತ್ತದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಕೇಸ್ – ಡಿಕೆಶಿ, ಸಿಬಿಐಗೆ ಸುಪ್ರೀಂ ನೋಟಿಸ್
Advertisement
ಜುಲೈನಲ್ಲಿ ನಡೆದ ಮೇಕ್ ಅಪ್ ಪರೀಕ್ಷೆಯಲ್ಲಿ ಅರ್ಹತೆ ಪಡೆದು, ಡಿಸಿಇಟಿ (DCET) ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳ ರ‍್ಯಾಂಕ್ ಅನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿ, ದಾಖಲೆಗಳ ಪರಿಶೀಲನೆ ಪೂರ್ಣಗೊಂಡಿರುವ ಅಭ್ಯರ್ಥಿಗಳು ಕೂಡ ಹೊಸದಾಗಿ ಆಯ್ಕೆ ದಾಖಲಿಸಬಹುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದರ್ಶನ್‌ಗೆ ರಾಜಾತಿಥ್ಯ – ಕಲಬುರಗಿ ಜೈಲಿಗೆ ವಿಲ್ಸನ್ ಗಾರ್ಡನ್ ನಾಗ ಶಿಫ್ಟ್
Advertisement
Advertisement
ಅಲ್ಲದೆ, ಮೊದಲ ಮತ್ತು ಎರಡನೇ ಸುತ್ತಿನಲ್ಲಿ ಯಾವುದೇ ಸೀಟು ಪಡೆಯದ ಮತ್ತು ಹಂಚಿಕೆಯಾದ ಸೀಟಿಗೆ ಶುಲ್ಕ ಪಾವತಿಸದೇ ಇರುವ ಅಭ್ಯರ್ಥಿಗಳೂ ಈ ಸುತ್ತಿನಲ್ಲಿ ಹೊಸದಾಗಿ ಆಯ್ಕೆ ದಾಖಲಿಸಬಹುದು ಎಂದು ಹೇಳಿದರು. ಇದನ್ನೂ ಓದಿ: 2030 ರ ವೇಳೆಗೆ 32.5 ಲಕ್ಷ ಕೋಟಿ ರೂ. ಮೌಲ್ಯದ ಸಾಲ ನೀಡಲು ಬ್ಯಾಂಕ್‌ಗಳ ಬದ್ಧ