ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್ ನ (Engineering course) 3ನೇ ಸೆಮಿಸ್ಟರ್ ಅಥವಾ 2ನೇ ವರ್ಷಕ್ಕೆ ಪ್ರವೇಶ ಕಲ್ಪಿಸುವ ಡಿಸಿಇಟಿ ಹಾಗೂ ಎಂ.ಟೆಕ್/ಎಂಇ ಪ್ರವೇಶ ಪರೀಕ್ಷೆಗಳು ಮೇ 23 ರಂದು ನಡೆಯಲಿದ್ದು, ಸಕಲ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA0 ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಈ ಎರಡೂ ಪರೀಕ್ಷೆಗಳು ಅಂದು ಬೆಂಗಳೂರು (Bengaluru), ಬಳ್ಳಾರಿ, ಬಾಗಲಕೋಟೆ, ದಾವಣಗೆರೆ, ಧಾರವಾಡ, ಕಲ್ಬುರ್ಗಿ, ಮೈಸೂರು ಮತ್ತು ತುಮಕೂರು ಕೇಂದ್ರಗಳಲ್ಲಿ ನಡೆಯಲಿವೆ ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ: ಸಿದ್ದರಾಮಯ್ಯ

ಡಿಸಿಇಟಿ ಪರೀಕ್ಷೆಯನ್ನು 51 ಕೇಂದ್ರಗಳಲ್ಲಿ ಒಟ್ಟು 21,095 ಹಾಗೂ ಎಂ.ಟೆಕ್ ಪರೀಕ್ಷೆಯನ್ನು 26 ಕೇಂದ್ರಗಳಲ್ಲಿ ಒಟ್ಟು 12,116 ಅಭ್ಯರ್ಥಿಗಳು ಬರೆಯುತ್ತಿದ್ದಾರೆ. ಈ ಎರಡೂ ಕೋರ್ಸ್ ಗಳಿಂದ ಒಟ್ಟು 34,211 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇದಲ್ಲದೆ ಹೊರನಾಡು, ಗಡಿನಾಡು ಅಭ್ಯರ್ಥಿಗಳಿಗೆ ಕಡ್ಡಾಯ ಕನ್ನಡ ಪರೀಕ್ಷೆ ಕೂಡ ಬೆಂಗಳೂರಿನಲ್ಲಿ ಅಂದು ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ವಿಜಯ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ – 23 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

