ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ (Abdul Jabbar) ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಅವರು ಅಂಗೀಕರಿಸಿದ್ದಾರೆ.
‘ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನೂತನ ಸಮಿತಿ ಶೀಘ್ರ ರಚನೆಗೆ ಕ್ರಮ ವಹಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದಾವಣಗೆರೆ ಕಾಂಗ್ರೆಸ್‌ನಲ್ಲಿ ಬಿರುಗಾಳಿ – ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮುಸ್ಲಿಮರು ಬಂಡಾವೆದ್ದಿದ್ದರು. ಇವರ ತಲೆದಂಡಕ್ಕೆ ಹೈಕಮಾಂಡ್ ಕೂಡ ಸೂಚನೆ ನೀಡಿತ್ತು.
ಇಲ್ಲಿನ ದಕ್ಷಿಣ ಉಪಚಚುನಾವಣೆ (Davanagere By Election) ಮತದಾನ ಮುಗಿದಿದೆ. ಆದ್ರೆ, ಕಾಂಗ್ರೆಸ್‌ನಲ್ಲಿ ಬಂಡಾಯ, ಗೊಂದಲ ಯಾವುದೂ ಬಗೆಹರಿದಿಲ್ಲ. ಕ್ಷೇತ್ರದಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಆರಂಭವಾಗಿದ್ದ ಮುನಿಸು ಚುನಾವಣೆ ಮುಗಿದ ಬಳಿಕವೂ ಮುಂದುವರಿದಿದೆ. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿಯೂ ಆಗಿರುವ ಅಬ್ದುಲ್ ಜಬ್ಬಾರ್ ಶನಿವಾರ ರಾಜೀನಾಮೆ ಸಲ್ಲಿಸಿದ್ದರು. ಇದನ್ನೂ ಓದಿ: ಟಿಕೆಟ್ ಆಸೆ ಹುಟ್ಟಿಸಿ, ನಮ್ಮದೇ ನಾಯಕರು ಕಾಲೆಳೆಯುವ ಕೆಲಸ ಮಾಡಿದ್ದಾರೆ: ಅಬ್ದುಲ್ ಜಬ್ಬಾರ್

