ಪ್ರಯಾಗ್‌ರಾಜ್: ಇಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ (Maha Kumbh Mela) ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ದಂಪತಿ ಪಾಲ್ಗೊಂಡು ಭಕ್ತಿಭಾವದಲ್ಲಿ ಮಿಂದೆದ್ದಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಪತ್ನಿ ಉಷಾ ಅವರ ಜೊತೆ ಕುಂಭಮೇಳದಲ್ಲಿ ಭಾಗವಹಿಸಿದ್ದಾರೆ. ಉತ್ತರ ಪ್ರದೇಶ ಕೈಗಾರಿಕಾ ಸಚಿವ ನಂದಗೋಪಾಲ ಗುಪ್ತಾ ಅವರು ಡಿಕೆಶಿ ದಂಪತಿಗೆ ಭವ್ಯ ಸ್ವಾಗತ ಕೋರಿದ್ದಾರೆ. ಇದನ್ನೂ ಓದಿ: ಮೈಸೂರು | ಫೆ.10ರಿಂದ ಮೂರು ದಿನ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ
ತ್ರಿವೇಣಿ ಸಂಗಮದಲ್ಲಿ ಡಿಕೆಶಿ ದಂಪತಿ ಪುಣ್ಯಸ್ನಾನ ಮಾಡಿದರು. ಬಳಿಕ ನೊಣವಿಕೆರೆ ಅಜ್ಜಯ್ಯ ಆಶೀರ್ವಾದ ಪಡೆದರು. ಇದೇ ವೇಳೆ ಕುಂಭಮೇಳದಲ್ಲಿದ್ದ ಸಾಧು-ಸಂತರ ಆಶೀರ್ವಾದವನ್ನು ಡಿಕೆಶಿ ಪಡೆದುಕೊಂಡರು. ಅಧ್ಯಾತ್ಮದ ಕುರಿತು ಸಂತರೊಟ್ಟಿಗೆ ಚರ್ಚೆ ನಡೆಸಿದರು.
144 ವರ್ಷಗಳ ಬಳಿಕ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ. 45 ದಿನಗಳ ಕಾಲ ಕುಂಭಮೇಳ ಜರುಗಲಿದೆ. ಡಿಕೆಶಿ ದಂಪತಿ ಇಂದು ಮತ್ತು ನಾಳೆ ಕುಂಭಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಮೋದಿ ಅಮೆರಿಕ ಪ್ರವಾಸದ ಬಳಿಕವೇ ದೆಹಲಿಯಲ್ಲಿ ಸರ್ಕಾರ ರಚನೆ?
ಇದಕ್ಕೂ ಮುನ್ನ ಡಿಕೆಶಿ ಪುತ್ರಿ ಐಶ್ವರ್ಯಾ ಅವರು ಕುಂಭಮೇಳದಲ್ಲಿ ಪಾಲ್ಗೊಂಡಿದ್ದರು. ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ, ಸಾಧು-ಸಂತರ ಆಶೀರ್ವಾದ ಪಡೆದಿದ್ದರು.