ಬೆಂಗಳೂರು: ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ, ಸುದೀರ್ಘ ಚರ್ಚೆ ಬಳಿಕವೇ ನಿಗಮ-ಮಂಡಳಿಗಳಿಗೆ (Corporation Board) ನೇಮಕ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಹೇಳಿದ್ದಾರೆ.
ಕುಮಾರಪಾರ್ಕ್ ಸರ್ಕಾರಿ ನಿವಾಸದ ಬಳಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ನಿಗಮ-ಮಂಡಳಿಗಳಿಗೆ ನೇಮಕ ಪಟ್ಟಿಯಲ್ಲಿ ಕೆಲವರ ಹೆಸರು ಕೈಬಿಟ್ಟಿರುವುದಕ್ಕೆ ಅಸಮಾಧಾನ ಇದೆ. ಸಚಿವರು ತಮ್ಮ ಅಭಿಪ್ರಾಯ ಕೇಳಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ನೇಮಕದ ಬಗ್ಗೆ ಸಿದ್ದರಾಮಯ್ಯ ಅವರು, ನಾನು ಹಾಗೂ ಪ್ರಧಾನ ಕಾರ್ಯದರ್ಶಿಗಳು ಕೂತು ಚರ್ಚೆ ಮಾಡಿದ್ದೇವೆ. ಎಲ್ಲರ ಅಭಿಪ್ರಾಯ ಪಡೆದಿದ್ದೇವೆ. ಕೆಲವರು ಇಂತಹವರಿಗೆ ಸ್ಥಾನ ನೀಡಬೇಕು ಎಂಬ ಪಟ್ಟಿ ಕೊಟ್ಟಿದ್ದಾರೆ. ಆ ಪತ್ರವನ್ನು ನಿಮ್ಮ ಮುಂದೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ; ಮೊದಲ ಪಟ್ಟಿ ರಿಲೀಸ್
Advertisement
Advertisement
ಮಂತ್ರಿ ಆಗಬೇಕು, ದೊಡ್ಡ ಮಂಡಳಿಗಳು ಸಿಗಬೇಕೆಂಬ ಆಸೆ ಎಲ್ಲರಿಗೂ ಇರುತ್ತದೆ. ಎರಡು ವರ್ಷಗಳ ನಂತರ ಮತ್ತೆ ಬದಲಾವಣೆ ಆಗುತ್ತದೆ. ಅವಧಿ ಮುಗಿದ ನಂತರ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎಂದು ಸೂಚನೆ ನೀಡಿದ್ದೇವೆ. ಪಕ್ಷ ಯಾವುದೇ ಹುದ್ದೆ ಕೊಟ್ಟರೂ ಸೇವೆ ಮಾಡಬೇಕು. ಯಾರೂ ಗಾಬರಿಯಾಗುವ ಅವಶ್ಯಕತೆಯಿಲ್ಲ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಬ್ಲಾಕ್‌ನಲ್ಲಿ ದುಡಿದಂತಹ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
Advertisement
ಈಗ 39 ಜನ ಶಾಸಕರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಚುನಾವಣಾ ಸಮಯದಲ್ಲಿ ಕೆಲವರಿಗೆ ಮಾತು ಕೊಡಲಾಗಿತ್ತು. ಅದರಂತೆ ಒಂದಷ್ಟು ಜನರಿಗೆ ಹುದ್ದೆ ನೀಡಲಾಗಿದೆ. ಎಲ್ಲರನ್ನೂ ತೃಪ್ತಿಪಡಿಸಿದ್ದೇವೆ ಎಂದು ಹೇಳುವುದಿಲ್ಲ. ಪ್ರತಿ ಕ್ಷೇತ್ರದಲ್ಲಿ ಇಬ್ಬರು, ಮೂವರು ಆಕಾಂಕ್ಷಿಗಳಿದ್ದರು. ಪ್ರಸ್ತುತ ಕೆಲವರಿಗೆ ಅವಕಾಶ ನೀಡಲಾಗಿದೆ. ಮುಂದೆ ಉಳಿದವರಿಗೆ ಅವಕಾಶ ಕಲ್ಪಿಸಲಾಗುವುದು. ನಾವು ಎಲ್ಲರನ್ನೂ ಗೌರವಿಸಿ ಕೆಲಸ ಮಾಡಿದ್ದೇವೆ, ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ, ಯಾರೇ ಹೋದರೂ ಪಕ್ಷಕ್ಕೆ ನಷ್ಟವಾಗದು: ಡಿಕೆಶಿ
Advertisement
ನೂರಾರು ಕಾರ್ಯಕರ್ತರಿಗೆ ಅವಕಾಶ ನೀಡಲು ಹುದ್ದೆಗಳನ್ನು ಸೃಷ್ಟಿ ಮಾಡಿದ್ದೇವೆ. ಕಾರ್ಯಕರ್ತರಿಗೆ ಸ್ಥಳೀಯ ಮಟ್ಟದಲ್ಲಿ ಆಸ್ಪತ್ರೆ ಸಮಿತಿ, ಬಗರ್ ಹುಕುಂ ಸಾಗುವಳಿ ಸಮಿತಿ, ಆಶ್ರಯ ಸಮಿತಿ, ಮುನಿಸಿಪಾಲಿಟಿ ಸೇರಿದಂತೆ ವಿವಿಧ ಸಮಿತಿಗಳಲ್ಲಿ ಅವಕಾಶ ನೀಡಲಾಗುವುದು. ಈ ವಿಚಾರದಲ್ಲಿ ಮಾಧ್ಯಮಗಳು ಅನಗತ್ಯ ಗೊಂದಲ ಮೂಡಿಸುವ ಪ್ರಶ್ನೆ ಕೇಳಿದರೆ ನಾನು ಕೇಳುವುದಿಲ್ಲ. ಮುಖ್ಯಮಂತ್ರಿಗಳು ಈಗಾಗಲೇ ಉತ್ತರ ನೀಡಿದ್ದಾರೆ ಎಂದು ಹೇಳಿದ್ದಾರೆ.
ಕ್ರೀಡಾ ಪ್ರಾಧಿಕಾರಕ್ಕೆ ಸಚಿವರೇ ಅಧ್ಯಕ್ಷರಾಗಿರುತ್ತಾರೆ ಎಂದು ಬೈಲಾ ಮಾಡಲಾಗಿದೆ. ಈ ಹಿಂದೆ ಎಸ್.ಎಂ. ಕೃಷ್ಣ ಅವರ ಕಾಲದಲ್ಲಿ ಬೈಲಾ ಮಾಡಲಾಗಿತ್ತು. ಈಗ ಮತ್ತೆ ಪರಿಷ್ಕರಿಸಲಿಸಲಾಗುವುದು ಎಂದಿದ್ದಾರೆ. ಶಾಸಕ ನರೇಂದ್ರ ಸ್ವಾಮಿಯವರ ನೇಮಕ ವಿಚಾರ ಪ್ರಕರಣ ನ್ಯಾಯಲಯದಲ್ಲಿದೆ. ಪ್ರಕರಣ ಇತ್ಯರ್ಥವಾದ ತಕ್ಷಣ ನರೇಂದ್ರ ಸ್ವಾಮಿಯವರಿಗೂ ಹುದ್ದೆ ನೀಡಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ನನ್ನನ್ನು ರಾಷ್ಟ್ರೀಯ ಅಧ್ಯಕ್ಷ ಅಂತಿದ್ದಾರೆ, ಪುಣ್ಯಕ್ಕೆ ರಾಷ್ಟ್ರಪತಿ ಎಂದಿಲ್ಲ: ಪ್ರಹ್ಲಾದ್ ಜೋಶಿ
ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಅವರನ್ನು ಮರು ಆಯ್ಕೆ ಮಾಡಿ ಎಂಬ ಶಾಮನೂರು ಶಿವಶಂಕರಪ್ಪನವರ ಹೇಳಿಕೆ ಬಗ್ಗೆ ಮಾತನಾಡಿ, ಆ ವಿಚಾರ ನನಗೆ ಗೊತ್ತಿಲ್ಲ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಕ್ಷೇತ್ರದಲ್ಲಿ ಗೆಲ್ಲುತ್ತದೆ. ಶಿವಮೊಗ್ಗದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯೇ ಗೆಲ್ಲಲಿದ್ದಾರೆ. ಜಗದೀಶ್ ಶೆಟ್ಟರ್ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ, ಕಾಂಗ್ರೆಸ್ ನಿರ್ನಾಮ ಮಾಡಿ ಎಂದು ಕರೆಕೊಟ್ಟಿದ್ದರೆ. ಈ ಹಿಂದೆ ಕಾಂಗ್ರೆಸ್ ಗೆಲ್ಲಿಸಿ, ಬಿಜೆಪಿ ನಿರ್ನಾಮ ಮಾಡಿ ಎಂದು ಹೇಳಿದ್ದರು ಎಂದಿದ್ದಾರೆ.