ಬೆಂಗಳೂರು: ಖಾಸಗಿ ಕ್ಷೇತ್ರದಲ್ಲೂ ಕನ್ನಡಿಗರಿಗೆ (Kannadigas) ಉದ್ಯೋಗ ಮೀಸಲಾತಿ ಜಾರಿ ಮೂಲಕ ನಾವು ಕನ್ನಡಿಗರ ಸ್ವಾಭಿಮಾನ ಎತ್ತಿ ಹಿಡಿಯುವ ಕೆಲಸ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕನ್ನಡಿಗರಿಗೆ ಮೀಸಲಾತಿ ವಿಚಾರ ಎಷ್ಟು ಪರ್ಸೆಂಟ್? ಎಷ್ಟು ಲಿಮಿಟ್? ಅದೆಲ್ಲಾ ನಾನು ಈಗ ಮಾತನಾಡಲ್ಲ. ಅಧಿವೇಶನ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ.100 ಮೀಸಲಾತಿ; ಎಕ್ಸ್‌ನಲ್ಲಿ ಪೋಸ್ಟ್ ಡಿಲೀಟ್ ಮಾಡಿದ ಸಿಎಂ
ಸರ್ಕಾರದ ನಿರ್ಧಾರಕ್ಕೆ ವಿರೋಧ ವಿಚಾರವಾಗಿ ಮಾತನಾಡಿ, ನಾವು ಟೆಕ್ನಿಕಲ್ ವಿಚಾರಗಳಿಗೆ ಕೈ ಹಾಕಲ್ಲ. ಅಲ್ಲಿ ಯಾವ ರೀತಿ ಜನ ಬೇಕು, ಅದನ್ನು ಅವರು ತೀರ್ಮಾನ ಮಾಡ್ತಾರೆ. ನಮ್ಮ ಸರ್ಕಾರ ಕನ್ನಡಿಗರ ಸ್ವಾಭಿಮಾನ ಎತ್ತಿ ಹಿಡಿಯುವ ಕೆಲಸ ಮಾಡಿದೆ. ಹಿಂದೆ ಕನ್ನಡದ ಬೋರ್ಡ್ ಅಳವಡಿಕೆ ವಿಚಾರದಲ್ಲೂ ತೀರ್ಮಾನ ಕೈಗೊಂಡಿದ್ದೆವು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಸ್ವಾಭಿಮಾನ ಎತ್ತಿ ಹಿಡಿಯಬೇಕು ಅಂತ ಬಂದಿದೆ ಎಂದು ಹೇಳಿದ್ದಾರೆ.
ಕನ್ನಡ ಬೋರ್ಡ್, ಭಾಷೆ, ಧ್ವಜ ಬಳಕೆ, ನಮ್ಮ ಸಂಸ್ಕೃತಿ, ಕಡತಗಳಲ್ಲಿ ಕನ್ನಡ ಬಳಕೆ ಮುಂದೆ ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಇರಬಹುದು. ಕಡ್ಡಾಯವಾಗಿ ಕನ್ನಡಿಗರಿಗೆ ಇಷ್ಟು ಪರ್ಸೆಂಟ್ ಇರಬೇಕು. ಇದರ ಬಗ್ಗೆ ತೀರ್ಮಾನ ನಾವು ಮಾಡಿದ್ದೇವೆ. ಬಿಲ್ ತರ್ತಾ ಇದ್ದೇವೆ. ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ವಿರೋಧ ಮಾಡಿದ್ರೆ. ಟಕ್ನಿಕಲ್ ಇದ್ದ ಕಡೆ ಏನು ಮಾಡಲು ಆಗಲ್ಲ. ನಾವು ಕೂಡ ಅರ್ಥ ಮಾಡಿಕೊಳ್ಳುತ್ತೇವೆ ಎಂದು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ; ವಿಧಾನಸಭೆ ಅಧಿವೇಶನದಲ್ಲಿ ಬಿಲ್ ಮಂಡನೆಗೆ ಗ್ರೀನ್ ಸಿಗ್ನಲ್
ಅವರು ಕೂಡ ರಾಜ್ಯದಿಂದಲೇ ಬೆಳದಿರುವವರು. ಟೆಕ್ನಿಕಲ್ ಬೇಕಾಗುವ ಕಡೆ ರಿಯಾಯಿತಿ ಕೋಡುತ್ತೇವೆ. ಸರ್ಕಾರದ ಗಮನಕ್ಕೆ ಅವರು ತರಬೇಕು. ಸದನ ಇರುವುದರಿಂದ ಸಂಪೂರ್ಣ ಮಾಹಿತಿ ಹೇಳಲು ಆಗಲ್ಲ ಎಂದಿದ್ದಾರೆ.