ಬೆಂಗಳೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ (Maha Kumbh Mela) ಇದೇ ಫೆ.9, 10 ರಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಪಾಲ್ಗೊಳ್ಳಲಿದ್ದಾರೆ.
ಫೆ.9 ರ ಬೆಳಗ್ಗೆ ಡಿಕೆಶಿ ಪ್ರಯಾಗ್‌ರಾಜ್ ತಲುಪಲಿದ್ದಾರೆ. ಫೆ.10 ರ ಮಧ್ಯಾನ 1 ಗಂಟೆ ನಂತರ ಪ್ರಯಾಗ್‌ರಾಜ್‌ನಿಂದ ವಾಪಾಸ್ ಆಗಲಿದ್ದಾರೆ.
Advertisement
Advertisement
ವಿಶ್ವದ ಅತಿ ದೊಡ್ಡ ಧಾರ್ಮಿಕ ಉತ್ಸವ ಮಹಾ ಕುಂಭಮೇಳಕ್ಕೆ ದಿನದಿಂದ ದಿನಕ್ಕೆ ಭಕ್ತಸಾಗರ ಹರಿದು ಬರುತ್ತಿದೆ. ದೇಶದ ವಿವಿಧ ಕಡೆಯಿಂದ ಭಕ್ತರು ಆಗಮಿಸುತ್ತಿದ್ದು, ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಕುಂಭಮೇಳದಲ್ಲಿ ಭಾಗಿಯಾಗಲಿದ್ದಾರೆ.
Advertisement
Advertisement
ಡಿಕೆಶಿ ಕುಟುಂಬ ಸಮೇತರಾಗಿ ಕುಂಭಮೇಳದಲ್ಲಿ ಭಾಗಿಯಾಗಲಿದ್ದಾರೆ. ಈ ಬಗ್ಗೆ ಹಿಂದೆಯೇ ಡಿಕೆಶಿ ತಿಳಿಸಿದ್ದರು. ಉತ್ತರ ಪ್ರದೇಶದ ಮಂತ್ರಿಗಳು ನನಗೆ ಬಹಳಷ್ಟು ಆತ್ಮೀಯರಿದ್ದು, ಆಮಂತ್ರಣ ನೀಡಿದ್ದಾರೆ. ಹಾಗಾಗಿ ಕುಟುಂಬ ಸಮೇತರಾಗಿ ಭೇಟಿ ನೀಡುವುದಾಗಿ ಹೇಳಿದ್ದರು.