ರಾಮನಗರ: ಚನ್ನಪಟ್ಟಣಕ್ಕೆ ಈಗ ಶಾಸಕರು ಇಲ್ಲ. ಹೀಗಾಗಿ ನಾನೇ ನಿಮ್ಮ ಮನೆ ಮಗ, ನಾನೇ ಸೇವಕ, ನಾನೇ ಶಾಸಕ, ನಾನೇ ಮಂತ್ರಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ಚನ್ನಪಟ್ಟಣ ತಾಲೂಕಿನ ವಿರುಪಾಕ್ಷಿಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರ ಸೇವೆ ಮಾಡಲು ಉಪಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿದ್ದೇನೆ. ಜನಸೇವೆ ಮಾಡಲು ಮೊದಲು ಅವಕಾಶ ನೀಡಿದವರು ಚನ್ನಪಟ್ಟಣದ ಮತದಾರರು. ನಾನು ಜಾತಿ ನೋಡಿ ಜನಸೇವೆ ಮಾಡಿಲ್ಲ, ನೀತಿ ನೋಡಿ ಕೆಲಸ ಮಾಡಿದ್ದೇನೆ. ನಿಮ್ಮ ಮನೆ ಬಾಗಿಲಿಗೆ ಅವಕಾಶ ಬಂದಿದೆ. ಯಾವುದೇ ಕಾರಣಕ್ಕೂ ಬಿಡಲು ಹೋಗಬೇಡಿ. ನಿಮ್ಮ ಮನೆ ಬಾಗಿಲಿಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಬಂದಿದ್ದಾರೆ. ನೀವು ನನ್ನ ಸೇವೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು ಎಂದರು.
Advertisement
Advertisement
ನಿಮ್ಮ ಸೇವೆಗೆ ನನ್ನ ಕಚೇರಿ ಸದಾ ತೆರೆದಿರುತ್ತದೆ. ನನ್ನ ಕಚೇರಿಗೆ ಬಂದು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಈ ಹಿಂದೆ ಇಂಧನ ಸಚಿವನಾಗಿದ್ದಾಗ ರೈತರಿಗೆ ಟ್ರಾನ್ಸ್‌ಫಾರ್ಮರ್ ಅಳವಡಿಕೆ ಮತ್ತು ನೀರಾವರಿ ಕೆಲಸಗಳನ್ನು ಮಾಡಿ ಅನುಕೂಲ ಮಾಡಿಕೊಡಲಾಗಿತ್ತು. ಕ್ಷೇತ್ರ ವಿಂಗಡಣೆಯಾಗಿ ನಾನು ಕನಕಪುರಕ್ಕೆ ಹೋದ ನಂತರ ಯಾರಾದರೂ ಶಾಸಕರು ಹೀಗೆ ಜನರ ಬಳಿಗೆ ಬಂದು ಕೆಲಸ ಮಾಡಿದ ಉದಾಹರಣೆಯೇ ಇಲ್ಲ. ದಳ, ಬಿಜೆಪಿ ಯಾವ ಪಕ್ಷದವರನ್ನು ಪ್ರಶ್ನೆ ಮಾಡಲು ಹೋಗುವುದಿಲ್ಲ. ನಾನು ಯಾರ ಜೊತೆಗೂ ಸ್ಪರ್ಧಿಸಲು ಇಲ್ಲಿಗೆ ಬಂದಿಲ್ಲ ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬಂದಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ನಮ್ಮ ನಿರೀಕ್ಷೆಗೂ ಮೀರಿ ಮತ ನೀಡಿದ್ದೀರಿ. ಅದಕ್ಕಾಗಿ ನಿಮಗೆ ಕೃತಜ್ಞತೆ ಸಲ್ಲಿಸಲು ಬಂದಿದ್ದೇನೆ. 80 ಸಾವಿರ ಮತಗಳನ್ನು ನೀಡಿದ್ದೀರಿ ಅದಕ್ಕೆ ನಾನು ಕೃತಜ್ಞ ಎಂದು ತಿಳಿಸಿದ್ರು. ಇದನ್ನು ಓದಿ: ಸಹೋದರ ಹಿಂದೂಗಳನ್ನು ಅವಮಾನಿಸಿಲ್ಲ- ರಾಹುಲ್ ಬೆನ್ನಿಗೆ ನಿಂತ ಪ್ರಿಯಾಂಕಾ
Advertisement
Advertisement
ಗ್ಯಾರಂಟಿಗಳಿಂದ ಅತ್ತೆ-ಸೊಸೆ ಜಗಳ ಆಗುತ್ತದೆ ಎಂದು ಸುಳ್ಳು ಹೇಳಿದರು. ಆದರೆ ಗ್ಯಾರಂಟಿಗಳಿಂದ ನಿಮ್ಮ ಬದುಕು ಬದಲಾವಣೆಯಾಗಿದೆ. ಒಂದೇ ಒಂದು ರೂಪಾಯಿ ಲಂಚ ಕೊಡದೆ 5 ಭಾಗ್ಯಗಳನ್ನು ಪಡೆಯುತ್ತಾ ಇದ್ದೀರಿ. ಅದೇ ರೀತಿ ತಾಲೂಕು ಕಚೇರಿಯಲ್ಲಿ ಒಂದೇ ಒಂದು ರೂಪಾಯಿ ಲಂಚ ಕೊಡದೆ ಸರ್ವೇ, ಪಹಣಿ, ಪೋಡಿ ಕೆಲಸ ಮಾಡಿಕೊಡಿಸುವ ಜವಾಬ್ದಾರಿ ನನ್ನದು. ಡಿ. ಕೆ.ಸುರೇಶ್ ಅವರಿಗೆ ಮತ ಹಾಕಿಲ್ಲ ಎಂದು ಮುಜುಗರ ಮಾಡಿಕೊಳ್ಳ ಬೇಡಿ. ನೀವು ನಮ್ಮ ಜಿಲ್ಲೆಯ ಜನ ನಿಮ್ಮ ಸಮಸ್ಯೆಗಳು ಬಗೆಹರಿಯಬೇಕು. ಯಾರು ಬರಲಿ ಹೋಗಲಿ ನಿಮ್ಮ ಸಹಾಯಕ್ಕೆ ನಾನು ತಯಾರಿದ್ದೇನೆ. ನನ್ನ ಕರ್ತವ್ಯ ಮರೆಯುವ ಪ್ರಶ್ನೆಯೇ ಇಲ್ಲ. ನನ್ನನ್ನು ಅತ್ಯಂತ ಚಿಕ್ಕ ವಯಸ್ಸಿಗೆ ಶಾಸಕನನ್ನಾಗಿ ಮಾಡಿದವರು ನೀವು. 1985 ರಿಂದ 2008 ರ ತನಕ ನಿಮ್ಮ ಸೇವೆ ಮಾಡಿದ್ದೇನೆ, ನಿಮ್ಮ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದರು.