ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ನೀಡಿರುವ ಹಿಜಬ್ (Hijab) ನಿಷೇಧ ವಾಪಸ್ ಹೇಳಿಕೆ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅಂತರ ಕಾಯ್ದುಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ಕೊಡದೆ ತೆರಳಿದ್ದಾರೆ.
ಸಿದ್ದರಾಮಯ್ಯ ಹೇಳಿಕೆ ಕೊಟ್ಟು 2 ದಿನ ಕಳೆದರೂ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಇಂದು (ಭಾನುವಾರ) ಮಾಧ್ಯಮಗಳಿಗೆ ಯಾವುದೇ ಹೇಳಿಕೆ ಕೊಡದೇ ಕಾರಿನಲ್ಲೆ ಕುಳಿತು ಮಾತನಾಡಲ್ಲ ಎಂದು ಕೈ ಸನ್ನೆ ಮಾಡಿ ತೆರಳಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರದಲ್ಲಿ ಅಂತರ ಕಾಯ್ದುಕೊಳ್ಳಲು ಡಿಸಿಎಂ ಡಿಕೆಶಿ ನಿರ್ಧರಿಸಿದಂತಿದೆ. ಇದನ್ನೂ ಓದಿ: ಕಾಂಗ್ರೆಸ್‍ನ ಮೊದಲ ಅಧ್ಯಕ್ಷರೇ ಬ್ರಿಟಿಷರು, ಹಾಗಾದ್ರೆ ಕಾಂಗ್ರೆಸ್ಸಿಗರು ಬ್ರಿಟಿಷರ ಬೂಟು ನೆಕ್ಕಿದ್ರಾ? – ಆರ್.ಅಶೋಕ್ ಕೌಂಟರ್
Advertisement
Advertisement
ಬಳಿಕ ಸಿದ್ದರಾಮಯ್ಯ ಅವರನ್ನು ಅವರ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ನಿಗಮ ಮಂಡಳಿಗೆ ಕಾರ್ಯಕರ್ತರ ಪಟ್ಟಿ ಕೊಡಬೇಕಾದ ಕಾರಣ ಆ ಸಂಬಂಧ ಪಟ್ಟಿ ಅಂತಿಮ ಪಡಿಸುವ ಬಗ್ಗೆ ಪೂರ್ವ ತಯಾರಿಯ ಮಾತುಕತೆ ನಡೆಸಿದರು. ಹಿಜಬ್ ವಿಚಾರ ಮಾತನಾಡಿದ ನಂತರ ಮೊದಲ ಬಾರಿಗೆ ಭೇಟಿ ಇದಾಗಿದ್ದು, ಹೇಳಿಕೆ ವಿಚಾರವೂ ಚರ್ಚೆಯಾಗಿದೆ ಎನ್ನಲಾಗಿದೆ.
Advertisement
Advertisement
ಈಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಸಿದ್ದರಾಮಯ್ಯ ಅವರು, ಬಿಜೆಪಿ ಸರ್ಕಾರದ ಹಿಜಬ್ ನಿಷೇಧ ಆದೇಶವನ್ನು ವಾಪಸ್ ಪಡೆಯಲಾಗುವುದು ಎಂದು ಹೇಳಿಕೆ ನೀಡಿದ್ದರು. ಇದು ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಡುವಿನ ರಾಜಕೀಯ ವಾಕ್ಸಮರಕ್ಕೆ ಕಾರಣವಾಯಿತು.
ಮಾರನೇ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ, ಹಿಜಬ್ ನಿಷೇಧ ವಾಪಸ್ ವಿಚಾರದ ಬಗ್ಗೆ ಕೂಲಂಕಷವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಸಿಎಂ ಹೇಳಿಕೆ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ನೀಡದೇ ಅಂತರ ಕಾಯ್ದುಕೊಂಡಿದ್ದಾರೆ. ಇದನ್ನೂ ಓದಿ: ಅಲ್ಲಾ ಹು ಅಕ್ಬರ್ ಎನ್ನಬೇಕಾಗಿರುವುದು ಮನೆ, ಮಸೀದಿಯಲ್ಲಿ.. ಸಮಾಜದಲ್ಲಲ್ಲ: ಕಲ್ಲಡ್ಕ ಪ್ರಭಾಕರ್ ಭಟ್