ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಕೊನೆಗೂ ವೀಕೆಂಡ್ ವಿತ್ ರಮೇಶ್ (Weekend with Ramesh) ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಭಾನುವಾರ ಅಬ್ಬಾಯಿನಾಯ್ಡು ಸ್ಟುಡಿಯೋದಲ್ಲಿ ನಡೆದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಡಿಕೆಸಿ ತಮ್ಮ ಬದುಕನ್ನು ವೀಕೆಂಡ್ ಟೆಂಟ್ ನಲ್ಲಿ ರಿವೈಂಡ್ ಮಾಡಿಕೊಂಡು ನೋಡಿದ್ದಾರೆ. ಕೇವಲ ಶಿವಕುಮಾರ್ ಮಾತ್ರವಲ್ಲ, ಅವರ ಪತ್ನಿ, ಮಕ್ಕಳು, ಕುಟುಂಬದ ಸದಸ್ಯರು, ಸ್ನೇಹಿತರು, ರಾಜಕಾರಣಿಗಳು ಹೀಗೆ ಅನೇಕರು ಈ ಎಪಿಸೋಡ್ ನಲ್ಲಿ ಕಾಣಿಸಿಕೊಂಡಿದ್ದು, ಅವರೆಲ್ಲರೂ ಡಿಕೆಶಿ ಬದುಕಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.
ನಟ ರಮೇಶ್ ಅರವಿಂದ್ (Ramesh Aravind) ಜೊತೆ ಈಗಾಗಲೇ ವೀಕೆಂಡ್ ಟೆಂಟ್ ನಲ್ಲಿ ರಮ್ಯಾ, ಡಾಲಿ, ಪ್ರೇಮ್, ಜೈ ಜಗದೀಶ್, ಪ್ರಭುದೇವ ಸೇರಿದಂತೆ ಹಲವು ಗಣ್ಯರು ತಮ್ಮ ಜೀವನವನ್ನು ರಿವೈಂಡ್ ಮಾಡಿಕೊಂಡು ನೋಡಿದ್ದಾರೆ. ಇದೀಗ ಟ್ರಬಲ್ ಶೂಟರ್ ಡಿಕೆಶಿ ಅವರು ಸಾಧಕರ ಸೀಟ್ ಮೇಲೆ ಕೂರಿಸಿಕೊಂಡು ಅವರ ಕಥೆ ಕೇಳಿದ್ದಾರೆ. ಡಿಕೆಶಿ ಕಥೆಯನ್ನು ಆಪ್ತರಿಂದ ಹೇಳಿಸಿದ್ದಾರೆ. ಇದನ್ನೂ ಓದಿ:ಅಭಿಷೇಕ್ ಮದುವೆಗೆ ಬಂದು ಶುಭ ಹಾರೈಸಿದ ರಜನಿಕಾಂತ್
ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ರಾಜಕೀಯ ವ್ಯಕ್ತಿಗಳು ಬರುತ್ತಿರುವುದು ಇದೇ ಮೊದಲೇನೂ ಅಲ್ಲ. ಹಲವು ಸೀಸನ್ ಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಅವರ ಸಾಲಿಗೆ ಡಿ.ಕೆ ಶಿವಕುಮಾರ್ ಸೇರಿದ್ದಾರೆ. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಡಿಕೆ. ಶಿವಕುಮಾರ್ ಅವರ ಬಾಲ್ಯ, ಶಿಕ್ಷಣ, ರಾಜಕೀಯ ಎಂಟ್ರಿ, ಗೆಲುವು, ಜೊತೆಗೆ ಸಿಬಿಐ, ಇಡಿ, ಐಟಿ ಪ್ರಕರಣಗಳ ಬಗ್ಗೆಯೂ ಅನಾವರಣವಾಗಲಿದೆ.
ಈ ವಾರಾಂತ್ಯದಲ್ಲಿ ಡಿಕೆಶಿ ಅವರ ಎಪಿಸೋಡ್ ಅನ್ನು ಪ್ರಸಾರ ಮಾಡಲಾಗುತ್ತದೆ ಎಂಬ ಮಾಹಿತಿ ಇದ್ದು, ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಡಿಕೆಶಿ ಕಂತುಗಳನ್ನು ನೋಡಬಹುದಾಗಿದೆ. ಒಟ್ನಲ್ಲಿ ಡಿಕೆಶಿ ಅವರ ರಾಜಕೀಯ ಸಾಧನೆಯ ಕಥೆ ಕೇಳೋದ್ದಕ್ಕೆ ಡಿಕೆ ಫ್ಯಾನ್ಸ್ ಎದುರು ನೋಡ್ತಿದ್ದಾರೆ.