– ಫೆಬ್ರವರಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ತೀರ್ಮಾನ: ಡಿಸಿಎಂ
ಬೆಂಗಳೂರು: ಜೆಡಿಎಸ್ ಸರ್ಕಾರ ಇದ್ದಾಗ ಬಾಲಗಂಗಾಧರ ಸ್ವಾಮೀಜಿಗಳ ಮೇಲೆ ಕೇಸ್ ಹಾಕಿದ್ರಲ್ಲಾ, ಆಗ ಬಿಜೆಪಿಯವರು ಎಲ್ಲೋಗಿದ್ರು? ನಿರ್ಮಲಾನಂದನಾಥ ಸ್ವಾಮೀಜಿಗಳ (Nirmalanandanatha Swamiji) ಫೋನ್ ಟ್ಯಾಪ್ ಮಾಡಿದಾಗ ಯಾಕೆ ಮಾತಾಡಲಿಲ್ಲ? ಆಗ ಅಶೋಕ್ ಎಲ್ಲಿದ್ದರು? ಶ್ರೀಗಳು ಕ್ರಿಮಿನಲ್ ತರಹ ಅವರ ನಂಬರ್ ಕೊಟ್ಟಿದ್ದರು. ಅದರ ರಿಪೋರ್ಟ್ ಬಗ್ಗೆ ಗೊತ್ತಿದ್ಯಾ? ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪ್ರಶ್ನಿಸಿದರು.
Advertisement
ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ಮತದಾನ ಇಲ್ಲದಂತೆ ಮಾಡಬೇಕು ಎಂಬ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಒಂದು ಕ್ಷಣವೂ ಯೋಚಿಸದೇ ದಾಖಲೆ, ವೀಡಿಯೋ ರಿಲೀಸ್ ಮಾಡ್ಲಿ – ಯತ್ನಾಳ್‌ಗೆ ವಿಜಯೇಂದ್ರ ಸವಾಲ್
Advertisement
ವಿಧಾನಸೌಧದಲ್ಲಿ (VidhanaSoudha) ಸಿಎಂ ಉತ್ತರ ಕೊಟ್ಟಿದ್ದಾರೆ. ನಾನು ನಮ್ಮ ಸ್ವಾಮೀಜಿಗಳಿಗೆ ಹಾಗೂ ಎಲ್ಲ ಸ್ವಾಮೀಜಿಗಳಿಗೆ ಮನವಿ ಮಾಡುತ್ತೇನೆ. ಸಂವಿಧಾನ, ಯಾರ ಹಕ್ಕುಗಳ ಬಗ್ಗೆ ಮಾತನಾಡುವುದು ಬೇಡ, ಜಾತಿಗಳ ಬಗ್ಗೆ ಮಾತನಾಡುವುದು ಬೇಡ. ನಮ್ಮದು ಮಾನವ ಧರ್ಮ, ನಮ್ಮದು ಸಂವಿಧಾನ, ಎರಡಕ್ಕೂ ನಾವು ಹೆಚ್ಚಿಗೆ ಒತ್ತು ಕೊಟ್ಟು ಹೋಗಬೇಕು. ನಾನು ಸ್ವಾಮೀಜಿಗಳು ಹಾಗೂ ಪೊಲೀಸರಿಗೆ ಹೇಳುತ್ತೇನೆ, ಯಾರು ಕೂಡ ಕಾನೂನಿಗಿಂತ ದೊಡ್ಡವರಲ್ಲ. ನಾನು ಮಾತಾಡಿದ್ರೂ ಕೇಸ್ ಹಾಕ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಶೋ ಕಂಟಿನ್ಯೂ ಮಾಡೋಕೆ ಆಗಲ್ಲ ಎಂದು ಕಣ್ಣೀರಿಟ್ಟ ಶೋಭಾ- ಕಿಚ್ಚನ ಮಾತಿಗೆ ಡೋರ್ ಓಪನ್
Advertisement
Advertisement
ನಮ್ಮ ಕಾಂಗ್ರೆಸ್ ಆಫೀಸ್ ಹುಡುಗರ ಮೇಲೆ ಕೇಸ್ ಬಿಜೆಪಿ ಸರ್ಕಾರ ಇದ್ದಾಗ ಹಾಕಿದ್ದಾರೆ. ಸ್ವಾಮೀಜಿಗಳ ವಿಚಾರಕ್ಕೆ ಉಗ್ರ ಹೋರಾಟ ಮಾಡ್ತಿನಿ ಅಂತ ಅಶೋಕ್ ಹೇಳ್ತಾರೆ. ಜೆಡಿಎಸ್ ಸರ್ಕಾರ ಇದ್ದಾಗ ಬಾಲಗಂಗಾಧರ ಸ್ವಾಮೀಜಿಗಳ ಮೇಲೆ ಕೇಸ್ ಹಾಕಿದ್ರಲ್ಲಾ, ಆಗ ಎಲ್ಲೋಗಿದ್ರು? ಎಲ್ಲಿ ಹೋಗಿದ್ದರು ಬಿಜೆಪಿಯವರು? ನಿರ್ಮಲಾನಂದ ಸ್ವಾಮೀಜಿಗಳ ಫೋನ್ ಟ್ಯಾಪ್ ಮಾಡಿದಾಗ ಯಾಕೆ ಮಾತಾಡಲಿಲ್ಲ, ಆಗ ಅಶೋಕ್ ಎಲ್ಲೋಗಿದ್ರು? ಶ್ರೀಗಳು ಕ್ರಿಮಿನಲ್ ತರಹ ಅವರ ನಂಬರ್ ಕೊಟ್ಟಿದ್ದರು. ಅದರ ರಿಪೋರ್ಟ್ ಬಗ್ಗೆ ಗೊತ್ತಿದ್ಯಾ? ಸುಮ್ಮನೆ ಒಣ ರಾಜಕಾರಣ ಬಿಟ್ಟು ಬಿಡಿ, ಬೆಂಕಿ ಹಚ್ಚಿ ಅದರಲ್ಲಿ ಬಿಡಿ ಸೇದ್ಕೊಂಡು ಕೂತಿದ್ದಾನೆ ಅಶೋಕ್ ಎಂದು ಲೇವಡಿ ಮಾಡಿದರು.
ಸಮಾವೇಶದಿಂದ ಸ್ಥಳೀಯ ಚುನಾವಣೆಗಳಿಗೆ ಸಹಾಯಕ ಎಂಬ ವಿಚಾರಕ್ಕೆ ಉತ್ತರಿಸಿ, ಏನಾದ್ರೂ ಒಂದು ಉದ್ದೇಶ ಇರಬೇಕು ಅಲ್ವಾ? ಎಲೆಕ್ಷನ್ ಬರುತ್ತಲೇ ಇರುತ್ತದೆ. ನಾವು ಕೂಡ ತಯಾರಿ ಮಾಡಿಕೊಳ್ಳಬೇಕಲ್ವಾ? ಮುಂದಿನ ಫ್ರಬವರಿಯಲ್ಲಿ ಚುನಾವಣೆ ಮಾಡಬೇಕೆಂದು ತೀರ್ಮಾನ ಆಗಿದೆ. ಎಲ್ಲಾ ಕಂಪ್ಲೀಟ್ ಆಗಿ ಎಲೆಕ್ಟರೋಲ್ ವರ್ಕ್ಸ್ ಆಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಎಸ್‌ವೈ ಕುಟುಂಬ ದೇಶದಲ್ಲಿಯೇ ಪ್ರಾಮಾಣಿಕ ಕುಟುಂಬ, ವಿಜಯೇಂದ್ರ ಅಪ್ಪಟ ಚಿನ್ನ – ಯತ್ನಾಳ್ ವ್ಯಂಗ್ಯ
ಇದೇ ವೇಳೆ ಸಚಿವ ಸಂಪುಟ ಪುನಾರಚನೆ ಬಗ್ಗೆ ಮಾತನಾಡಿದ ಡಿಕೆಶಿ, ನಾನು ಮುಖ್ಯಮಂತ್ರಿ ಅಲ್ಲ ಡಿಸಿಎಂ. ಆದ್ರೆ ಪಾರ್ಟಿ ಅಧ್ಯಕ್ಷ ಸದ್ಯಕ್ಕೆ ಇದರ ಬಗ್ಗೆ ಚರ್ಚೆ ಇಲ್ಲ, ಅದರ ಅವಶ್ಯಕತೆಯೂ ಇಲ್ಲ. ಇನ್ನೂ ವಿಧಾನಸಭೆಯಲ್ಲಿ ಯಾವ ಸ್ಥಾನವೂ ಖಾಲಿ ಇಲ್ಲ. ನಾನು ಪಾರ್ಟಿ ಪ್ರೆಸಿಡೆಂಟ್ ಆದ್ರೆ ನಾನೇನು ಹೇಳಬೇಕಿಲ್ಲ ಎಂದರು.