ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹಿಜಬ್ ನಿಷೇಧ ಆದೇಶ ವಾಪಸ್ ಪಡೆಯುವ ಕುರಿತು ಮಾತನಾಡಿದ್ದು, ಭಾರೀ ಚರ್ಚೆಗೀಡಾಗಿತ್ತು. ಆದರೆ ಈ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ ಇಂದು ಈ ಬಗ್ಗೆ ಅವರು ಕೂಡ ಮೌನ ಮುರಿದಿದ್ದಾರೆ.
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಬ್ (Hijab) ನಿಷೇಧ ಆದೇಶ ವಾಪಸ್ ಮಾಡುವ ವಿಚಾರದ ಕುರಿತು ಇನ್ನೂ ಚರ್ಚೆಯೇ ಆಗಿಲ್ಲ. ಈ ಬಗ್ಗೆ ನಾವು ಯೋಚನೆಯನ್ನೇ ಮಾಡಿಲ್ಲ. ನೀವೇ ಅದನ್ನ ದೊಡ್ಡದು ಮಾಡುತ್ತಿದ್ದೀರಿ ಎಂದಿದ್ದಾರೆ. ಇದೇ ವೇಳೆ ಪತ್ರಕರ್ತರು ಸಿಎಂ ಹೇಳಿಕೆ ಕೊಟ್ಟಿದ್ದಾರಲ್ವಾ ಎಂದು ಪ್ರಶ್ನಿಸಿದ್ದಕ್ಕೆ, ಚರ್ಚೆಗೆ ಬರ್ತಿದೆ ಅಂತಾ ಹೇಳಿದ್ದಾರೆ ಅಷ್ಟೇ. ಅಂತಹ ಯಾವ ವಿಚಾರ ಇಲ್ಲ ಎಂದು ಡಿಕೆಶಿ ಸ್ಪಷ್ಟನೆ ಕೊಟ್ಟರು.
Advertisement
Advertisement
ಸಿಎಂ ಹೇಳಿದ್ದೇನು..?: ಮೈಸೂರಿನಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ಉಡುಪು ಅವರವರ ಇಷ್ಟ. ಹಿಜಬ್ ನಿಷೇಧ ವಾಪಸ್‍ಗೆ ಹೇಳಿದ್ದೀನಿ. ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ನಾವು ಅಂತಹ ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಹಿಜಬ್ ನಿಷೇಧದ ಆದೇಶ ವಾಪಸ್ ಪಡೆಯುತ್ತೇವೆ. ಹಿಜಬ್ ಧರಿಸಿ ಶಾಲಾ-ಕಾಲೇಜುಗಳಿಗೆ, ಪರೀಕ್ಷೆ ಬರೆಯಲು ಹೋಗಬಹುದು ಎಂದು ಹೇಳಿದ್ದರು.
Advertisement
ಸಿಎಂ ಅವರ ಈ ಹೇಳಿಕೆಗೆ ರಾಜ್ಯಾದ್ಯಂತ ಭಾರೀ ಖಂಡನೆ ವ್ಯಕ್ತವಾಗಿತ್ತು. ಸಿಎಂ ವಿರುದ್ಧ ಬಿಜೆಪಿ (BJP) ನಾಯಕರು ಮುಗಿಬಿದ್ದರು. ಹಿಜಬ್ ವಾಪಸ್‍ನಿಂದ ಮುಂದೆ ಆಗಬಹುದಾದ ಘಟನೆಗಳಿಗೆ ಸಿಎಂ ಅವರೇ ನೇರ ಕಾರಣರಾಗುತ್ತಾರೆ ಎಂದು ಬಿಜೆಪಿ ನಾಯಕರು ಕಿಡಿಕಾರಿದರು. ಈ ಬೆನ್ನಲ್ಲೇ ಸಿಎಂ ಸ್ಪಷ್ಟನೆ ನೀಡಿದ್ದರು.
ಸಿದ್ದರಾಮಯ್ಯ ಸ್ಪಷ್ಟನೆ ಏನು..?: ಹಿಜಬ್ ನಿಷೇಧ ಆದೇಶ ವಾಪಸ್ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಯಾರೋ ಪ್ರಶ್ನೆ ಕೇಳಿದ್ರು. ಆಗ ಆದೇಶ ವಾಪಸ್ಸಿಗೆ ಯೋಚನೆ ಮಾಡ್ತಿದ್ದೀವಿ ಅಂತಷ್ಟೇ ಹೇಳಿದೆ. ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡಿ ತೀರ್ಮಾನಿಸ್ತೀವಿ ಎಂದು ಹೇಳುವ ಮೂಲಕ ಸ್ಪಷ್ಟನೆ ನೀಡಿದ್ದರು.