– ಕೇಂದ್ರದ ವಿರುದ್ಧ ರಾಜ್ಯ ಬಿಜೆಪಿ ಕಾರ್ಯಕರ್ತರೇ ಹೋರಾಟ ಮಾಡುವಂತಾಗಿದೆ ಎಂದ ಡಿಸಿಎಂ
ಅಹಮದಾಬಾದ್: ಕಳೆದ ಬೆಳಗಾವಿ ಅಧಿವೇಶನದ (Belagavi Session) ವೇಳೆ ಈ ವರ್ಷವನ್ನು ಸಂಘಟನೆಯ ವರ್ಷ ಎಂದು ಸೂಚನೆ ನೀಡಲಾಗಿತ್ತು. ಬ್ಲಾಕ್, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸುವ ಬಗ್ಗೆ ಅಹಮದಾಬಾದ್ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರು ಹೇಳಿದರು.
We’re hosting a historic AICC session!
Under Congress President Shri @kharge ‘s presidency and LoP Shri @RahulGandhi ‘s leadership, we aim to revamp our organisation nationwide.
Our focus is on strengthening party cadres at district and block levels. We’ll discuss suggestions… pic.twitter.com/tB7HMlXkWR
— DK Shivakumar (@DKShivakumar) April 8, 2025
ಎಐಸಿಸಿ (AICC) ಅಧಿವೇಶನದಲ್ಲಿ ಭಾಗವಹಿಸಲು ಗುಜರಾತ್‌ನ ಅಹಮದಬಾದ್‌ಗೆ ತೆರಳಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಪಕ್ಷ ಸಂಘಟನೆಯ ವಿಚಾರದಲ್ಲಿ ಒಂದೊಂದೇ ಬದಲಾವಣೆಗಳನ್ನು ತರಲಾಗುತ್ತಿದೆ. ಕಾಂಗ್ರೆಸ್ ಪಕ್ಷ ಕಾರ್ಯಕರ್ತರ (Congress Party Workers) ಪಕ್ಷವಾಗಿ ಇನ್ನೂ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಾವೆಲ್ಲರು ಚರ್ಚೆ ನಡೆಸಿ ಒಟ್ಟಿಗೆ ಕೆಲಸ ಮಾಡುವುದಕ್ಕೆ ಈ ಸಮಾವೇಶ ಮುನ್ನುಡಿ ಎಂದು ಹೇಳಿದರು. ಇದನ್ನೂ ಓದಿ: ಶಿವಮೊಗ್ಗ ಡಿಸಿಸಿ ಬ್ಯಾಂಕ್, ಅಧ್ಯಕ್ಷ ಮಂಜುನಾಥ ಗೌಡ ನಿವಾಸದ ಮೇಲೆ ಇಡಿ ದಾಳಿ
We’re hosting a historic AICC session. Under Congress President Shri Mallikarjuna Kharge’s presidency and LoP Shri Rahul Gandhi’s leadership, we aim to revamp our organisation nationwide.
Our focus is on strengthening party cadres at district and block levels. We’ll discuss… pic.twitter.com/UVoc1GFwTG
— Congress (@INCIndia) April 8, 2025
ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹಲವಾರು ವಿಚಾರಗಳು ಸೇರಿದಂತೆ ಪಕ್ಷದ ಎಲ್ಲಾ ಘಟಕಗಳ ಬಲವರ್ಧನೆ ಬಗ್ಗೆ ಚರ್ಚೆ ಮಾಡಲಾಗುವುದು. ಕಳೆದ ವಾರ ದೆಹಲಿಯಲ್ಲಿ ಜಿಲ್ಲಾ ಮಟ್ಟದ ಅಧ್ಯಕ್ಷರ ಸಭೆ ನಡೆಸಲಾಗಿತ್ತು. 1924 ರಲ್ಲಿ ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಜವಾಬ್ದಾರಿ ತೆಗೆದುಕೊಂಡು 100 ವರ್ಷಗಳು ಸಂದಿವೆ. ಗಾಂಧಿ ಅವರು ಏಕ ನಾಯಕತ್ವದಲ್ಲಿ ನಂಬಿಕೆ ಇಟ್ಟವರಲ್ಲ. ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆಯಿಟ್ಟು ನಡೆದವರು ಎಂದು ತಿಳಿಸಿದರು.
I congratulate my BJP friends who are doing the Janakrosha Yatre against the Union BJP Govt.
May you continue to fight against #PriceHike! pic.twitter.com/LWOfdepVpN
— DK Shivakumar (@DKShivakumar) April 8, 2025
ಕಾಂಗ್ರೆಸ್ಸಿನ ಗೆಲುವು ಗುಜರಾತಿನಿಂದ ಪ್ರಾರಂಭವಾಗಲಿದೆಯೇ ಎಂದು ಕೇಳಿದಾಗ, ಹೌದು ಖಂಡಿತವಾಗಿಯೂ ಆಗಲಿದೆ. ಜೊತೆಗೂಡುವುದು ಆರಂಭ, ಜೊತೆಗೂಡಿ ನಡೆಯುವುದು ಪ್ರಗತಿ ಎನ್ನುವ ಮಾತನ್ನು ನಾನು ಪುನರುಚ್ಚರಿಸುತ್ತೇನೆ ಎಂದರು. ಇದನ್ನೂ ಓದಿ: ಶಿವಮೊಗ್ಗ ಡಿಸಿಸಿ ಬ್ಯಾಂಕ್, ಅಧ್ಯಕ್ಷ ಮಂಜುನಾಥ ಗೌಡ ನಿವಾಸದ ಮೇಲೆ ಇಡಿ ದಾಳಿ
ಬಿಜೆಪಿ ಜನಾಕ್ರೋಶ ಯಾತ್ರೆಯ ಬಗ್ಗೆ ಕೇಳಿದಾಗ, ಜೆಪಿಯವರ ಜನಾಕ್ರೋಶ ಯಾತ್ರೆಯನ್ನು ಸ್ವಾಗತಿಸುತ್ತೇನೆ. ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಜನರಿಗೆ ಇರುವ ಆಕ್ರೋಶ ಈ ಯಾತ್ರೆ ಮೂಲಕ ರಾಜ್ಯ ಬಿಜೆಪಿ ನಾಯಕರಿಗೆ ಅರ್ಥವಾಗಲಿ. ಅವರ ಸರ್ಕಾರದ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡುವಂತಾಗಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: 64 ವರ್ಷಗಳ ಬಳಿಕ ಗುಜರಾತ್‌ನಲ್ಲಿ ಎಐಸಿಸಿ ಅಧಿವೇಶನ – ಹಲವು ಮಹತ್ವದ ನಿರ್ಣಯ ಸಾಧ್ಯತೆ