ಬೆಂಗಳೂರು/ಕೊಲಂಬೊ: ಟೀಂ ಇಂಡಿಯಾದ (Team India) ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ (Mohammed Siraj) 2023ರ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಪ್ರಚಂಡ ಬೌಲಿಂಗ್ ಪ್ರದರ್ಶನ ತೋರಿದ್ದಾರೆ. ಶ್ರೀಲಂಕಾ ವಿರುದ್ಧ 7 ಓವರ್‌ಗಳಲ್ಲಿ 21 ರನ್ ಬಿಟ್ಟುಕೊಟ್ಟು 6 ವಿಕೆಟ್ ಪಡೆಯುವ ಮೂಲಕ ಹಲವು ದಾಖಲೆಗಳನ್ನ ನಿರ್ಮಿಸಿದರು. ಈ ಮೂಲಕ ಭಾರತ 10 ವಿಕೆಟ್‌ಗಳ ಜಯ ಸಾಧಿಸಲು ನೆರವಾದರು.
ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಬೆಂಕಿ ಚೆಂಡು…
ಏಷ್ಯಾಕಪ್ ಫೈನಲ್ಸ್ ನಲ್ಲಿ ಶ್ರೀಲಂಕಾ ಪಡೆ ವಿರುದ್ಧ ಪ್ರಚಂಡ ಗೆಲುವು ದಾಖಲಿಸಿದ ಟೀಂ ಇಂಡಿಯಾಗೆ ಹೃದಯಪೂರ್ವಕ ಶುಭಾಶಯಗಳು.
6 ವಿಕೆಟ್ ಗಳಿಸಿದ ಮೊಹಮ್ಮದ್ ಸಿರಾಜ್ ಅವರ ಬೌಲಿಂಗ್ ದಾಳಿ ಕಂಡು ಬೆರಗಾದೆ. ಟೀಂ ಇಂಡಿಯಾ ಕಲಿಗಳ ಗೆಲುವಿನ ನಾಗಾಲೋಟ ಹೀಗೇ ಮುಂದುವರಿಯಲಿ.
ಜೈಹೋ ಟೀಂ ಇಂಡಿಯಾ!… pic.twitter.com/k8L5pNAZIO
— DK Shivakumar (@DKShivakumar) September 17, 2023
ಈ ಕುರಿತು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ಮೊಹಮ್ಮದ್ ಸಿರಾಜ್ ಹಾಗೂ ಟೀಂ ಇಂಡಿಯಾವನ್ನ ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ಸಿರಾಜ್ ಬೆಂಕಿ ಬೌಲಿಂಗ್, 50 ರನ್‌ಗಳಿಗೆ ಆಲೌಟ್ – 39 ವರ್ಷಗಳ ಬಳಿಕ ಕೆಟ್ಟ ದಾಖಲೆ ಬರೆದ ಲಂಕಾ
ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಬೆಂಕಿ ಚೆಂಡು… ಏಷ್ಯಾಕಪ್ ಫೈನಲ್ಸ್‌ನಲ್ಲಿ (Asia Cup Finals) ಶ್ರೀಲಂಕಾ ಪಡೆ ವಿರುದ್ಧ ಪ್ರಚಂಡ ಗೆಲುವು ದಾಖಲಿಸಿದ ಟೀಂ ಇಂಡಿಯಾಗೆ ಹೃದಯಪೂರ್ವಕ ಶುಭಾಶಯಗಳು. 6 ವಿಕೆಟ್ ಗಳಿಸಿದ ಮೊಹಮ್ಮದ್ ಸಿರಾಜ್ ಅವರ ಬೌಲಿಂಗ್ ದಾಳಿ ಕಂಡು ಬೆರಗಾದೆ. ಟೀಂ ಇಂಡಿಯಾ ಕಲಿಗಳ ಗೆಲುವಿನ ನಾಗಾಲೋಟ ಹೀಗೇ ಮುಂದುವರಿಯಲಿ. ಜೈಹೋ ಟೀಂ ಇಂಡಿಯಾ ಎಂದು ಶುಭಕೋರಿದ್ದಾರೆ.
ನಿನ್ನೆ ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಶ್ರೀಲಂಕಾ ತಂಡದ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ 8ನೇ ಬಾರಿಗೆ ಏಷ್ಯಾಕಪ್ ಕಿರೀಟವನ್ನ ಮುಡಿಗೇರಿಸಿಕೊಂಡಿತು. 1984, 1988, 1991, 1995, 2010, 2016, 2018ರಲ್ಲಿ ಏಷ್ಯಾಕಪ್ ಚಾಂಪಿಯನ್ ಆಗಿದ್ದ ಭಾರತ 8ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು. ಇದನ್ನೂ ಓದಿ: Asia Cup 2023 Final: ಲಂಕಾ ದಹನ – ಭಾರತಕ್ಕೆ 8ನೇ ಬಾರಿಗೆ ಚಾಂಪಿಯನ್ ಕಿರೀಟ
ಜೊತೆಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆದ್ದ 2ನೇ ಏಕದಿನ ಏಷ್ಯಾಕಪ್ ಚಾಂಪಿಯನ್ ಪಟ್ಟವೂ ಇದಾಗಿದೆ. ಇನ್ನೂ 6 ಬಾರಿ ಚಾಂಪಿಯನ್ ಹಾಗೂ 6 ಬಾರಿ ರನ್ನರ್ ಅಪ್ ಪ್ರಶಸ್ತಿ ಗೆದ್ದುಕೊಂಡಿದ್ದ ಶ್ರೀಲಂಕಾ 7ನೇ ಬಾರಿಗೆ ರನ್ನರ್ ಅಪ್ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ ಅಗ್ರಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದ 15.2 ಓವರ್‌ಗಳಲ್ಲಿ ಕೇವಲ 50 ರನ್‌ಗಳಿಗೆ ಆಲೌಟ್ ಆಯಿತು. 51 ರನ್‌ಗಳ ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಭಾರತ ಕೇವಲ 6.1 ಓವರ್‌ಗಳಲ್ಲೇ 51 ರನ್ ಚಚ್ಚಿ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಇದನ್ನೂ ಓದಿ: ಸಿರಾಜ್ ಬೆಂಕಿ ಬೌಲಿಂಗ್, 50 ರನ್‌ಗಳಿಗೆ ಆಲೌಟ್ – 39 ವರ್ಷಗಳ ಬಳಿಕ ಕೆಟ್ಟ ದಾಖಲೆ ಬರೆದ ಲಂಕಾ
ಲಂಕಾ ವಿರುದ್ಧ ಮಾರಕ ಬೌಲಿಂಗ್ ದಾಳಿ ನಡೆಸಿದ ಮೊಹಮ್ಮದ್ ಸಿರಾಜ್, 7 ಓವರ್‌ಗಳಲ್ಲಿ 21 ರನ್ ಬಿಟ್ಟುಕೊಟ್ಟು 6 ವಿಕೆಟ್ ಕಿತ್ತರೆ, ಹಾರ್ದಿಕ್ ಪಾಂಡ್ಯ 2.2 ಓವರ್‌ಗಳಲ್ಲಿ 3 ರನ್ ನೀಡಿ 3 ವಿಕೆಟ್ ಕಿತ್ತರು. ಜಸ್ಪ್ರೀತ್ ಬುಮ್ರಾ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]