Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ರೀಡೆಗೆ ರಾಜಕಾರಣಿಗಳು ಅಪಾಯಕಾರಿ, ಕ್ರಿಕೆಟ್ ಆಟವನ್ನ ರಾಜಕಾರಣಿಗಳಿಂದ ದೂರವಿಡಿ – ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕ್ರೀಡೆಗೆ ರಾಜಕಾರಣಿಗಳು ಅಪಾಯಕಾರಿ, ಕ್ರಿಕೆಟ್ ಆಟವನ್ನ ರಾಜಕಾರಣಿಗಳಿಂದ ದೂರವಿಡಿ – ಡಿಕೆಶಿ

Bengaluru City

ಕ್ರೀಡೆಗೆ ರಾಜಕಾರಣಿಗಳು ಅಪಾಯಕಾರಿ, ಕ್ರಿಕೆಟ್ ಆಟವನ್ನ ರಾಜಕಾರಣಿಗಳಿಂದ ದೂರವಿಡಿ – ಡಿಕೆಶಿ

Public TV
Last updated: December 29, 2024 6:23 pm
Public TV
Share
4 Min Read
DK Shivakumar 2 1
SHARE

ಭಾರತ – ಪಾಕಿಸ್ತಾನ ಪಂದ್ಯ ನಡೆಯುವಾಗ ಟಿಕೆಟ್‌ ಖರೀದಿಸಿ ನೋಡ್ತಿದ್ದೆ; ಡಿಸಿಎಂ ಮೆಲುಕು

ಬೆಂಗಳೂರು: ಕ್ರಿಕೆಟ್ (Cricket) ಆಟವನ್ನು ರಾಜಕಾರಣಿಗಳಿಂದ ದೂರವಿಡಬೇಕು. ಈ ಕ್ರೀಡೆಯನ್ನು ಆಟಗಾರರೇ ಮುನ್ನಡೆಸಿಕೊಂಡು ಹೋಗಬೇಕು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರು ಅಭಿಪ್ರಾಯಪಟ್ಟರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಭಾರತ ತಂಡದ ಮಾಜಿ ಆಟಗಾರ ಸಯ್ಯದ್ ಕಿರ್ಮಾನಿ (Syed Kirmani) ಅವರ 75ನೇ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಆತ್ಮಚರಿತ್ರೆ ʻಸ್ಟಂಪಡ್ – ಲೈಫ್ ಬಿಯಾಂಡ್ ಅಂಡ್ ಬಿಯಾಂಡ್ ದಿ ಟ್ವೆಂಟಿ ಟು ಯಾರ್ಡ್ಸ್ʼ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಕಲಬುರಗಿಯ ನಿಜಾಮ ಅಲ್ಲ, ಅನುಯಾಯಿಗಳು ರಜಾಕರಲ್ಲ, ರಾಜೀನಾಮೆ ಕೊಡಲಿ: ಅಶೋಕ್‌

DK Shivakumar 7

ಕ್ರೀಡೆಗೆ ರಾಜಕಾರಣಿಗಳು ಅಪಾಯಕಾರಿ, ಹೀಗಾಗಿ ಕ್ರೀಡಾ ಚಟುವಟಿಕೆಗಳಿಂದ ಅವರನ್ನು ದೂರ ಇಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ನಾನೊಬ್ಬ ರಾಜಕಾರಣಿ, ಆದರೂ ಕಿರ್ಮಾನಿ ಅವರು ಈ ಕಾರ್ಯಕ್ರಮಕ್ಕೆ ನನಗೆ ಏಕೆ ಆಹ್ವಾನ ನೀಡಿದರೋ ಗೊತ್ತಿಲ್ಲ ಎಂದರು. ಇದನ್ನೂ ಓದಿ: ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮುಖಂಡನಿಂದ ಅನ್ನಸಂತರ್ಪಣೆ: ಭಾವೈಕ್ಯತೆ ಮೆರೆದ ಕರೀಂಸಾಬ್

ಕಿರ್ಮಾನಿ ಹೃದಯವಂತ
ಕ್ರೀಡೆ ಪ್ರತಿಭೆ ನಿಮ್ಮನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ. ಆ ಉನ್ನತ ಸ್ಥಾನವನ್ನು ಉಳಿಸಿಕೊಳ್ಳಲು ಒಳ್ಳೆಯ ಗುಣ ಕಲಿಸಲು ಸಹಾಯ ಮಾಡುತ್ತದೆ. ಕಿರ್ಮಾನಿ ಅವರು ಈ ಎರಡೂ ಗುಣಗಳನ್ನು ಹೊಂದಿದ್ದಾರೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ಸ್ಕಿಡ್‌ ಆದ ಏರ್‌ ಕೆನಡಾ ಫ್ಲೈಟ್‌ – ಲ್ಯಾಂಡಿಂಗ್‌ ವೇಳೆ ವಿಮಾನದಲ್ಲಿ ಬೆಂಕಿ

DK Shivakumar 3 1

ಕಿರ್ಮಾನಿ ಅವರು ಕೇವಲ ಕ್ರಿಕೆಟ್ ಪ್ರತಿಭೆಯಷ್ಟೇ ಅಲ್ಲ, ಅತ್ಯುತ್ತಮ ವ್ಯಕ್ತಿತ್ವ ಇರುವವರು. ಕರ್ನಾಟಕ ಪ್ರತಿನಿಧಿಸುವ ಆಟಗಾರನಾಗಿ ಭಾರತೀಯ ಕ್ರಿಕೆಟ್‌ ಜಗತ್ತಿಗೆ ದೊಡ್ಡ ಕೊಡುಗೆ ನೀಡಿದವರು. ಶುದ್ಧ ಹೃದಯ ವಿಶ್ವದ ಶ್ರೇಷ್ಠ ದೇವಾಲಯ ಎಂದು ಹೇಳುತ್ತಾರೆ. ಕಿರ್ಮಾನಿ ಅವರು ಇಂತಹ ಶುದ್ಧ ಹೃದಯ ಹಾಗೂ ಮುಗುಳ್ನಗೆ ಹೊಂದಿರುವ ಹೃದಯವಂತ. ಇಂತವರು ಜಗತ್ತಿನಲ್ಲಿ ಬಹಳ ಅಪರೂಪ ಎಂದು ಗುಣಗಾನ ಮಾಡಿದರು.

ನಾನು ಕಿರ್ಮಾನಿ ಅವರ ಅಭಿಮಾನಿ
ನಾನಿಲ್ಲಿ ಡಿಸಿಎಂ ಆಗಿ ಬಂದಿಲ್ಲ. ಕಿರ್ಮಾನಿ ಅವರ ಅಭಿಮಾನಿಯಾಗಿ ಬಂದಿದ್ದೇನೆ. ನಾನು ಶಾಲೆಯಲ್ಲಿದ್ದಾಗ, ಚಂದ್ರಶೇಖರ್, ಜಿ.ಆರ್ ವಿಶ್ವನಾಥ್ ಹಾಗೂ ಕಿರ್ಮಾನಿ ಅವರ ಅಭಿಮಾನಿಯಾಗಿದ್ದೆ. ನೀವೆಲ್ಲರೂ ಸೇರಿ ನಮ್ಮ ರಾಜ್ಯ ಹಾಗೂ ದೇಶ ಹೆಮ್ಮೆಪಡುವಂತೆ ಸಾಧನೆ ಮಾಡಿದ್ದೀರಿ. ಇವರ ಜತೆಗೆ ಚಂದ್ರಶೇಖರ್, ಬ್ರಿಜೇಶ್ ಪಟೇಲ್, ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಸೇರಿದಂತೆ ಅನೇಕರು ಅತ್ಯುತ್ತಮ ಸಾಧನೆ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಕೆಎಸ್‌ಸಿಎ ಕಾರ್ಯದರ್ಶಿಯಾಗಿದ್ದ ನಾಗರಾಜ್ ಅವರ ಪುತ್ರ ಹಾಗೂ ನಾನು ಒಂದೇ ಶಾಲೆಯಲ್ಲಿ ಓದುತ್ತಿದ್ದೆವು. ಭಾರತ – ಪಾಕಿಸ್ತಾನ ಪಂದ್ಯಗಳ ಟಿಕೆಟ್ ಪಡೆಯುತ್ತಿದ್ದೆ. ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ ಕೆಎಸ್‌ಸಿಎಗೆ ಪತ್ರ ಬರೆದು ನೂರಾರು ಟಿಕೆಟ್ ಪಡೆದು ನಮ್ಮ ಹುಡುಗರಿಗೆ ಹಂಚಿ ವಿದ್ಯಾರ್ಥಿ ನಾಯಕನಾಗಿದ್ದೆ. ಅಲ್ಲಿಂದ ನಾನು ಸುಮಾರು 10 ವಿಧಾನಸಭಾ ಚುನಾವಣೆಗಳನ್ನು ಎದುರಿಸಿದ್ದೇನೆ.

ನೀವೆಲ್ಲರೂ ದೇಶಕ್ಕೆ ಕೊಡುಗೆ ನೀಡಿದ್ದೀರಿ. ಎಸ್.ಎಂ ಕೃಷ್ಣ ಅವರ ಸರ್ಕಾರದಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಧ್ಯಕ್ಷರಾಗುವಂತೆ ನಾರಾಯಣಸ್ವಾಮಿ ಅವರಿಗೆ ಹೇಳಿದ್ದೆವು. ಅವರು ನಮ್ಮ ಮನವಿ ಒಪ್ಪಿ ಆ ಜವಾಬ್ದಾರಿ ವಹಿಸಿಕೊಂಡರು. ಆಗ ರತನ್ ಟಾಟಾ ಅವರನ್ನು ಭೇಟಿ ಮಾಡಬೇಕಾಯಿತು. ಆಗ ಅವರು ಒಂದು ಮಾತು ಹೇಳಿದರು. ನೀವು ವೇಗವಾಗಿ ಸಾಗಬೇಕಾದರೆ ಒಬ್ಬರೇ ಸಾಗಿ, ನೀವು ದೂರ ಸಾಗಬೇಕಾದರೆ ಎಲ್ಲರೊಟ್ಟಿಗೆ ಸೇರಿ ಸಾಗಿ ಎಂದು ಹೇಳಿದರು. ಇದು ಕ್ರಿಕೆಟ್‌ಗೂ ಅನ್ವಯವಾಗುತ್ತದೆ. ಎಲ್ಲಾ ಆಟಗಾರರು ಒಗ್ಗಟ್ಟಾಗಿ ಸಾಗಿದರೆ ಮಾತ್ರ ತಂಡ ತನ್ನ ಗುರಿ ಮುಟ್ಟುತ್ತದೆ.

ಆಗಿನ ಕಾಲದ ಆಟಗಾರರು ಈಗಿನ ಕಾಲದಂತೆ ಅತ್ಯುತ್ತಮ ತರಬೇತಿ ಕೇಂದ್ರಗಳನ್ನು ಹೊಂದಿರಲಿಲ್ಲ. ಆದರೂ ದೊಡ್ಡ ಮಟ್ಟಕ್ಕೆ ಬೆಳೆದು ದೇಶಕ್ಕೆ ಕೊಡುಗೆ ನೀಡಿದ್ದಾರೆ. ಪ್ರತಿಭೆ ಇದ್ದರೆ ಉನ್ನತ ಸ್ಥಾನಕ್ಕೆ ಏರುತ್ತೇವೆ. ಆದರೆ ಆ ಸ್ಥಾನವನ್ನ ಕಾಯ್ದುಕೊಳ್ಳಬೇಕಾದರೆ ವ್ಯಕ್ತಿತ್ವ ಬಹಳ ಮುಖ್ಯ. ಇದಕ್ಕೆ ಕಿರ್ಮಾನಿ ಉತ್ತಮ ಉದಾಹರಣೆ. ಇಲ್ಲಿರುವ ಆಟಗಾರರೆಲ್ಲರೂ ಉತ್ತಮ ಬಾಂಧವ್ಯ ಹೊಂದಿದ್ದೀರಿ.

ಕಪಿಲ್ ದೇವ್ ಅವರು ಹೇಳಿದಂತೆ, ಅನುಭವದ ಮುಂದೆ ಬೇರೇನೂ ಇಲ್ಲ. ಅನುಭವ ವ್ಯಕ್ತಿಯನ್ನು ಪಕ್ವವಾಗಿಸುತ್ತದೆ. ನಿಮ್ಮ ನಡುವಣ ಬಾಂಧವ್ಯ ನೀರಿನಂತೆ. ಅದಕ್ಕೆ ಬಣ್ಣ, ರುಚಿ ಇಲ್ಲ. ಆದರೂ ಅದು ಬಹಳ ಮುಖ್ಯ. ನೀವು ಯಾವುದೇ ತಲೆಮಾರಿನವರಾಗಿರಿ, ಯಾವುದೇ ವಯೋಮಾನದವರಾಗಿರಿ, ಈ ಕ್ಷೇತ್ರದಲ್ಲಿ ನಿಮ್ಮ ಕೊಡುಗೆ ಹಾಗೂ ನೆನಪು ನಮಗೆ ಮಾದರಿಯಾಗಿದೆ.

ಮೂಲವನ್ನು ಮರೆತರೆ ಫಲ ಸಿಗಲ್ಲ
ಅನೇಕ ಬಾರಿ ನಾನು ಒಂದು ಮಾತು ಹೇಳುತ್ತಿರುತ್ತೇನೆ. ನೀವು ನಿಮ್ಮ ಮೂಲ ಮರೆತರೆ ಜೀವನದಲ್ಲಿ ಫಲ ಪಡೆಯುವುದಿಲ್ಲ. ಕಪಿಲ್ ದೇವ್ ಅವರು ಹೇಳಿದಂತೆ ಅವರು ರೈತಾಪಿ ಕುಟುಂಬದಿಂದ ಬಂದವರು. ಈ ದೇಶದಲ್ಲಿ 67% ಜನ ರೈತಾಪಿ ವರ್ಗದವರು. ಅವರಿಲ್ಲದೆ ನಾವಿಲ್ಲ. ನೀವೆಲ್ಲರೂ ನಿಮ್ಮ ಮೂಲವನ್ನು ಮರೆಯದೆ ಬೆಳೆದಿದ್ದೀರಿ.

ಕಿರ್ಮಾನಿ ಅವರು ನನಗೆ ಅತ್ಯುತ್ತಮ ಸ್ನೇಹಿತರು. ಇತ್ತೀಚೆಗೆ ನಾನು, ಕಿರ್ಮಾನಿ ಹಾಗೂ ಫಾರೂಕ್ ಅಬ್ದುಲ್ಲಾ ಅವರು ಒಟ್ಟಿಗೆ ಸೇರಿದ್ದೆವು. ಅವರು ಹೃದಯ ಬಹಳ ಶುದ್ಧವಾಗಿದ್ದು, ಸದಾ ಹಸನ್ಮುಖಿ. ಅವರು ಹೀಗೆ ಸದಾ ನಗುತ್ತಿರಲಿ. ಅವರು ತಮ್ಮ 100ನೇ ವರ್ಷದ ಜನ್ಮದಿನ ಆಚರಿಸುವಂತಾಗಲಿ. ಕಿರ್ಮಾನಿ ಅವರೇ ನಿಮ್ಮ ಜತೆ ಹುಟ್ಟಿದವರು, ಬಂಧುಗಳು ಮಾತ್ರ ನಿಮ್ಮ ಕುಟುಂಬವಲ್ಲ. ಇಲ್ಲಿರುವ ನಾವೆಲ್ಲರೂ ನಿಮ್ಮ ಕುಟುಂಬದವರು. ನೀವು 88 ಟೆಸ್ಟ್ ಪಂದ್ಯಗಳನ್ನಾಡಿದ್ದೀರಿ. 100 ಪಂದ್ಯಗಳನ್ನು ಆಡಬೇಕಿತ್ತು.

ಕ್ರೀಡೆಯಲ್ಲಿ ನೀವು ಬೇರೆ ಬೇರೆ ರೀತಿಯಲ್ಲಿ ಇನ್ನಷ್ಟು ಸೇವೆ ಸಲ್ಲಿಸಿ. ನಿಮ್ಮ ಮುಂದಿನ ಬದುಕು ಮತ್ತಷ್ಟು ಯಶಸ್ವಿಯಾಗಲಿ. ನಾನು ಕಿರ್ಮಾನಿ ಅಭಿಮಾನಿ ಹಾಗೂ ಕೆಎಸ್‌ಸಿಎ ಸದಸ್ಯನಾಗಿ ಇಲ್ಲಿಗೆ ಬಂದಿದ್ದೇನೆ. ನಾನು 2,000 ರೂ. ನೀಡಿ ಕೆಎಸ್‌ಸಿಎ ಸದಸ್ಯತ್ವ ಪಡೆದಿದ್ದೆ. ಆದರೂ ಆಡಳಿತ ಮಂಡಳಿಯಲ್ಲಿ ರಾಜಕಾರಣಿಗಳು ಇಲ್ಲದಿರುವುದು ನನಗೆ ಸಂತೋಷವಿದೆ.

75 ವಸಂತಗಳನ್ನು ಪೂರೈಸಿರುವ ನಿಮಗೆ ದೇವರು ಹೆಚ್ಚಿನ ಆಯಸ್ಸು ನೀಡುತ್ತಾನೋ ಇಲ್ಲವೋ ಗೊತ್ತಿಲ್ಲ. ಕಿರ್ಮಾನಿ ಅವರ ನೆಪದಲ್ಲಿ ಕ್ರಿಕೆಟ್ ಲೋಕದ ದಿಗ್ಗಜರು ಒಂದೇ ಕಡೆ ಸೇರಿರುವುದನ್ನು ನೋಡುವುದಕ್ಕೆ ಸಂತಸವಾಗುತ್ತಿದೆ.

TAGGED:bengaluruchinnaswamy stadiumDK Shivakumarkapil devSyed Kirmaniಕಪಿಲ್ ದೇವ್ಚಿನ್ನಸ್ವಾಮಿ ಕ್ರೀಡಾಂಗಣಡಿ.ಕೆ.ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Nora Fatehi
ಸಾವು ರಪ್ಪನೆ ಕಣ್ಮುಂದೆ ಬಂದು ಹೋಯ್ತು – ಕಾರು ಅಪಘಾತದ ಬಳಿಕ ನೋರಾ ಫತೇಹಿ ರಿಯಾಕ್ಷನ್‌
Bollywood Cinema Latest Main Post
nora fatehi gets into an accident suffered a concussion after a drunk driver rammed into her car
ನೋರಾ ಫತೇಹಿ ಕಾರಿಗೆ ಡಿಕ್ಕಿ – ಅಪಾಯದಿಂದ ನಟಿ ಪಾರು
Cinema Latest South cinema
Rashmika Mandanna and Vijay Deverakondas Wedding AI Photos
ಶ್ರೀವಲ್ಲಿ ಮದ್ವೇಲಿ ಪ್ರಭಾಸ್, ಪ್ರಿನ್ಸ್; ವೈರಲ್ ಹಿಂದಿನ ಅಸಲಿಯತ್ತೇನು?
Cinema Latest South cinema Top Stories
Prabhas 2
ದಿ ಸ್ಕ್ರಿಪ್ಟ್ ಕ್ರಾಫ್ಟ್ ಕಿರುಚಿತ್ರೋತ್ಸವಕ್ಕೆ ಪ್ರಭಾಸ್ ಚಾಲನೆ
Cinema Latest South cinema

You Might Also Like

RANJAN
Bengaluru City

ಮಕ್ಕಳ ಮೇಲೆ ಕ್ರೌರ್ಯ – ರಂಜನ್‌ಗೆ ನಿಜವಾಗಿಯೂ ಮಾನಸಿಕ ಸಮಸ್ಯೆ ಇದೀಯಾ?

Public TV
By Public TV
4 minutes ago
Hebbal
Bengaluru City

ವಾಹನ ಸವಾರರಿಗೆ ಗುಡ್‌ನ್ಯೂಸ್‌ – ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ರ‍್ಯಾಂಪ್‌ ಓಪನ್

Public TV
By Public TV
12 minutes ago
RCB Win 05
Bengaluru City

2026ರ ಐಪಿಎಲ್‌ ಬೆಂಗಳೂರಿನಲ್ಲೇ ನಡೆಯುತ್ತಾ? – ಪರಮೇಶ್ವರ್‌ ಹೇಳಿದ್ದೇನು?

Public TV
By Public TV
1 hour ago
Rajgoal Nagar
Bengaluru City

ಸಹಾಯ ಪಡೆದವಳನ್ನ ಮಂಚಕ್ಕೆ ಕರೆದ ಆನ್‌ಲೈನ್‌ ಗೆಳೆಯ – ಮಹಿಳೆ ಆತ್ಮಹತ್ಯೆಗೆ ಯತ್ನ

Public TV
By Public TV
1 hour ago
Rajanna DK Shivakumar
Bengaluru City

ಡಿಕೆಶಿ ಏನೇ ಮಾಡಿದ್ರೂ ನನ್ನ ಸ್ಟ್ಯಾಂಡ್‌ ಬದಲಾಗಲ್ಲ, ನಾನು ಸಿದ್ದರಾಮಯ್ಯ ಪರವೇ: ಕೆ.ಎನ್‌ ರಾಜಣ್ಣ

Public TV
By Public TV
2 hours ago
two arrested for illegally transporting cattle to kerala
Crime

ಅಕ್ರಮವಾಗಿ ಕೇರಳಕ್ಕೆ ಜಾನುವಾರು ಸಾಗಾಟ – ಇಬ್ಬರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?