ಬೆಂಗಳೂರು: ಗುರುವಾರ ಬೆಳ್ಳಂಬೆಳಗ್ಗೆಯಿಂದ ಸ್ಯಾಂಡಲ್‍ವುಡ್ ನಟರು ಮತ್ತು ನಿರ್ಮಾಪಕರ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಿದ್ದು, ಎಲ್ಲ ಮಾಧ್ಯಮಗಳಲ್ಲೂ ಈ ಸುದ್ದಿ ಪ್ರಸಾರವಾಗುತ್ತಿದೆ. ಆದರೆ ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಸ್ಯಾಂಡಲ್‍ವುಡ್ ಸ್ಟಾರ್ ಗಳ ಮೇಲೆ ಐಟಿ ದಾಳಿ ಆಗಿದೆ ಎಂದು ಗೊತ್ತು. ಆದರೆ ಯಾಕೆ ದಾಳಿ ಆಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ಡಿಸಿಎಂ ಪರಮೇಶ್ವರ್ ಅವರು, ಐಟಿ ಅಧಿಕಾರಿಗಳು ಸ್ಯಾಂಡಲ್‍ವುಡ್ ನಟರ ಮೇಲೆ ದಾಳಿ ಮಾಡಿದ್ದಾರೆ. ದಾಳಿಗಾಗಿ ಅಧಿಕಾರಿಗಳು ಪೊಲೀಸರ ನೆರವು ಕೇಳುತ್ತಿದ್ದಾರೆ. ಹೀಗಾಗಿ ಡಿಜಿ ಬಳಿ ಪೊಲೀಸರ ಬಳಕೆಯ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಪೊಲೀಸರ ಭದ್ರತೆ ನೆರವು ಮಾತ್ರ ಕೇಳಿದ್ದಾರೆ. ಆದರೆ ಅವರು ಯಾರ ಮೇಲೆ, ಯಾಕೆ ಅಂತ ಮಾಹಿತಿ ಕೊಡಲಿಲ್ಲ ಎಂದು ಡಿಸಿಎಂ ಹೇಳಿದ್ದಾರೆ.
ಕಳೆದ ದಿನದಿಂದ ನಟ ಸುದೀಪ್, ಯಶ್, ಪುನೀತ್ ರಾಜ್‍ಕುಮಾರ್, ಶಿವರಾಜ್‍ಕುಮಾರ್ ಸೇರಿದಂತೆ ನಿರ್ಮಾಪಕರ ಮನೆಯ ಮೇಲೆ ಐಟಿ ಅಧಿಕಾರಿಗಳು ಏಕಕಾಲಕ್ಕೆ 20ಕ್ಕೂ ಹೆಚ್ಚು ಕಡೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇತ್ತ ಸಚಿವ ಡಿ.ಕೆ. ಶಿವಕುಮಾರ್ ಅವರು ಕೂಡ ಐಟಿ ದಾಳಿಯ ಬಗ್ಗೆ ತಿಳಿದು ರಾತ್ರಿ ನಟ ಪುನೀತ್ ಮನೆ ಬಳಿ ಹೋಗಿ ಅಭಿಮಾನಿಗಳು ಜೊತೆ ಮಾತನಾಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv