ಬೆಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ (NEET Paper Leak) ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಜಟಾಪಟಿ ವಿಚಾರವಾಗಿ ಕೇಂದ್ರದ ನಡೆಯನ್ನು ಪ್ರಶ್ನಿಸಿ ಪ್ರಧಾನಿ ಮೋದಿಗೆ ಡಿಸಿಎಂ ಡಾ. ಜಿ.ಪರಮೇಶ್ವರ್ (Dr. G.Parameshwar) ಪತ್ರ ಬರೆದಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ನಿರ್ವಹಣೆಯ ವೈಫಲ್ಯ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆ ಹತ್ತಿಕ್ಕಲಾಗುತ್ತಿದೆ ಎಂದು ಡಿಸಿಎಂ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದೆಹಲಿ ವಿದ್ಯಾರ್ಥಿಗಳ ಪರ ನಿಂತ ಆಲಿಯಾ ಭಟ್
ಪತ್ರದಲ್ಲಿ ಕೇಂದ್ರ ಸರ್ಕಾರಕ್ಕೆ ಒತ್ತಾಯಗಳೇನು?
* ನೀಟ್ ಹಿಂತೆದುಕೊಳ್ಳಿ ಮತ್ತು ಪಾರದರ್ಶಕತೆ, ಅರ್ಹತೆಯ ಆಧಾರದ ಸಿಇಟಿಯನ್ನು ಮರುಸ್ಥಾಪಿಸಿ.
* ಕಾಲಮಿತಿಯಲ್ಲಿ ಪಾರದರ್ಶಕ ತನಿಖೆಗೆ ಕ್ರಮವಹಿಸಿ
* ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಹಾಗೂ ಹೋರಾಟದಲ್ಲಿ ಗಾಯಗೊಂಡವರಿಗೆ ಪರಿಹಾರ ಒದಗಿಸಿ.
* ಲಾಠಿಚಾರ್ಜ್ ಹಾಗೂ ಅಶ್ರುವಾಯು ದಾಳಿಗೆ ಹೊಣೆಗಾರರು ಯಾರು ಎಂಬುದನ್ನು ತಿಳಿಸಿ.
* ವಿದ್ಯಾರ್ಥಿಗಳು ಹಾಗೂ ಶಿಕ್ಷಣ ತಜ್ಞರ ಜೊತೆ ಅರ್ಥಪೂರ್ಣ ಸಂವಾದ ನಡೆಸಿ.
* ನಮ್ಮ ಶಿಕ್ಷಣ ವ್ಯವಸ್ಥೆ ಮೇಲಿನ ಸಾರ್ವಜನಿಕರ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸಿ.
ಪ್ರಶ್ನಿಸುತ್ತಿರುವ ನಮ್ಮ ಯುವಜನತೆಗೆ ಉತ್ತರ ಪಡೆಯುವ ಹಕ್ಕಿದೆ. ಬ್ಯಾರಿಕೇಡ್‌ಗಳನ್ನು ತೆಗೆಯಿರಿ, ಮಾತುಕತೆ ಮೂಲಕ ಬಗೆಹರಿಸಿ ಎಂದು ಮೋದಿಗೆ ಪರಮೇಶ್ವರ್ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ನಿವಾಸದ ಬಳಿ ಕಾಂಗ್ರೆಸ್ ಪ್ರತಿಭಟನೆ ಪ್ರಾಮಾಣಿಕತೆಯಿಂದ ಕೂಡಿಲ್ಲ- ವಾಂಗ್ಚುಕ್ ಪತ್ನಿ ವಾಗ್ದಾಳಿ

