Wednesday, 20th March 2019

Recent News

ಗೃಹಖಾತೆ ತಪ್ಪಿಸಿದ್ದ ಮಾಜಿ ಸಿಎಂ ವಿರುದ್ಧ ಸೇಡು ತೀರಿಸಿಕೊಂಡ್ರು ಪರಮೇಶ್ವರ್..!

ಬೆಂಗಳೂರು: ಗೃಹ ಖಾತೆ ತಪ್ಪಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಕೊನೆಗೂ ಸೇಡು ತೀರಿಸಿಕೊಂಡಿದ್ದಾರೆ ಎಂಬುದಾಗಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯೇ ಅನುಮೋದಿಸಿದ್ದ ಪಟ್ಟಿಯಲ್ಲಿ ಬದಲಾವಣೆ ಮಾಡಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶಾಕ್ ಕೊಟ್ಟಿದ್ದಾರೆ. ಈ ಮೂಲಕ ಡಿಸಿಎಂ ಅವರು ಮಾಜಿ ಸಿಎಂ ವಿರುದ್ಧದ ಸಿಟ್ಟಿಗೆ ಸೇಡು ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ನಿಗಮ ಮಂಡಳಿಯಲ್ಲಿಯೂ ಶಾಸಕ ಸುಧಾಕರ್‌ಗೆ ಕೊಕ್

ಕೈ ತಪ್ಪಿದ ನಿಗಮ ಮಂಡಳಿಯಿಂದ ಕೆಂಡಾಮಂಡಲರಾದ ಶಾಸಕರು ಸಿದ್ದರಾಮಯ್ಯಗೆ ದೂರು ನೀಡಿದ್ದರು. ಇದು 80+38 ಶಾಸಕರನ್ನು ಹೊಂದಿರೋ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಕೂಟದಲ್ಲಿ ನಡೆಯುತ್ತಿರುವ ಕುರ್ಚಿ ಕಿತ್ತಾಟದ ಸಾರಾಂಶವಾಗಿದೆ. ಸಂಪುಟ ವಿಸ್ತರಣೆ ವೇಳೆಯೇ 19 ಮಂದಿ ಶಾಸಕರಿಗೆ ನಿಗಮ ಮಂಡಳಿ, ಸಂಸದೀಯ ಕಾರ್ಯದರ್ಶಿ ಮತ್ತು ಇತರೆ ಪ್ರಮುಖ ಹುದ್ದೆಗಳನ್ನ ಹಂಚಿ ಕಾಂಗ್ರೆಸ್ ಹೈಕಮಾಂಡ್ ಅಂಕಿತ ಹಾಕಿತ್ತು. ಆದ್ರೆ ಸರ್ಕಾರದ ಕಡೆಯಿಂದ ಅಧಿಕೃತ ಆದೇಶ ಹೊರಡಿಸಬೇಕಿದ್ದ ಕುಮಾರಸ್ವಾಮಿ 14 ಹುದ್ದೆಗಳ ಹಂಚಿಕೆಗಷ್ಟೇ ಸಹಿ ಹಾಕಿದ್ದಾರೆ. ಅಷ್ಟೇ ಅಲ್ಲ ಪಟ್ಟಿಯಲ್ಲೇ ಕೆಲ ಬದಲಾವಣೆಯನ್ನೂ ಮಾಡಿ ದೋಸ್ತಿಗೆ ಶಾಕ್ ಕೊಟ್ಟಿದ್ದಾರೆ. ಇದನ್ನೂ ಓದಿ: ನಿಮ್ಮಿಂದ ಸಾಧ್ಯವಾಗದೇ ಇದ್ರೆ ನಮ್ಮ ಪಾಡಿಗೆ ನಮ್ಮನ್ನು ಬಿಟ್ಟುಬಿಡಿ- ಸಿದ್ದು, ಜಾರಕಿಹೊಳಿ ಸಭೆಯ ಇನ್‍ಸೈಡ್ ಸ್ಟೋರಿ

ಇತ್ತ ಸಿದ್ದರಾಮಯ್ಯ ಆಪ್ತ ಶಾಸಕರಾದ ಸುಧಾಕರ್, ಹ್ಯಾರಿಸ್, ಎಸ್‍ಟಿ ಸೋಮಶೇಖರ್‍ಗೆ ನಿಗಮ ಮಂಡಳಿ ಸ್ಥಾನ ತಪ್ಪಿಸಿ ಪರಮೇಶ್ವರ್ ಸೇಡು ತೀರಿಸಿಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ನಿಗಮ ಮಂಡಳಿ ನೇಮಕಕ್ಕೆ ಸಿಎಂ ಕುಮಾರಸ್ವಾಮಿ ಅಂಕಿತ, ಯಾರಿಗೆ ಯಾವ ಮಂಡಳಿ?

ಇದನ್ನೂ ಓದಿ: ಈ ಸರ್ಕಾರ ಇದ್ದರೆಷ್ಟು, ಬಿದ್ದರೆಷ್ಟು- ಮಾಜಿ ಸಿಎಂ ಬಳಿ ಕಾಂಗ್ರೆಸ್ ಶಾಸಕರ ಆಕ್ರೋಶ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply

Your email address will not be published. Required fields are marked *