ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ: ಡಿಸಿಎಂ ಖಡಕ್ ಎಚ್ಚರಿಕೆ

Public TV
1 Min Read
dcm

– ಲೋಪಗಳನ್ನು ಕಾರ್ಯನಿರ್ವಹಣೆ ವರದಿಯಲ್ಲಿ ನಮೂದಿಸಿ

ಬೆಂಗಳೂರು: ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಮಾರ್ಚ್ ಅಂತ್ಯದೊಳಗೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಯಾವುದೇ ಅನುದಾನ ಲ್ಯಾಪ್ಸ್ ಆಗಬಾರದು. ನ್ಯೂನತೆಗಳಾದರೆ ಸಂಬಂಧಿಸಿದ ಅಧಿಕಾರಿಗಳನ್ನು ಜವಾಬ್ದಾರನ್ನಾಗಿಸಲಾಗುವುದು ಎಂದು ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಖಡಕ್ ಎಚ್ಚರಿಕೆ ನೀಡಿದರು.

ವಿಕಾಸಸೌಧದಲ್ಲಿಂದು ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನವರಿ ಅಂತ್ಯಕ್ಕೆ 6594 ಕೋಟಿ ರೂ. ಬಿಡುಗಡೆ ಮಾಡಿದ್ದು, ಅದರಲ್ಲಿ 4675 ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರಗತಿಯು ಡಿಎಸ್‍ಎಸ್ ತಂತ್ರಾಂಶಗಳನ್ವಯ ಕೆಡಿಪಿ ಸಭೆಯ ಆರ್ಥಿಕ ಪ್ರಗತಿಯ ವಿಷಯ ಸೂಚಿಯಲ್ಲಿ ಎ (ಶೇ.,93%) ಪ್ರವರ್ಗದಲ್ಲಿದೆ.

dcm 2

ರಾಷ್ಟ್ರೀಯ ಹೆದ್ದಾರಿ ಯೋಜನೆ ಘಟಕಕ್ಕೆ 341 ಕೋಟಿ ಬಿಡುಗಡೆ ಮಾಡಿದ್ದು, 317 ಕೋಟಿ ವೆಚ್ಚ ಮಾಡಲಾಗಿದೆ. ಕೆಆರ್‌ಡಿಸಿಎಲ್‌ಗೆ 300 ಕೋಟಿ ಬಿಡುಗಡೆ ಮಾಡಲಾಗಿದ್ದು, ಶೇ.100 ರಷ್ಟು ವೆಚ್ಚ ಮಾಡಲಾಗಿದೆ. ರಾಜ್ಯ ಹೆದ್ದಾರಿ ಘಟಕದಲ್ಲಿ 333 ಕೋಟಿ ರೂ. ಬಿಡುಗಡೆಯಾಗಿದ್ದು, 333 ಕೋಟಿ ವೆಚ್ಚಮಾಡಲಾಗಿದೆ. ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ವೇಗ ಮಿತಿ ಬೋರ್ಡ್ ಗಳನ್ನು ಅಳವಡಿಸಬೇಕು. ನೂತನ ರಸ್ತೆ ಕಾಮಗಾರಿಗಳ ನಿರ್ಮಿಸುವಾಗ ಕನಿಷ್ಟ ಪ್ರಮುಖ ಸ್ಥಳಗಳಲ್ಲಿ, ಶಾಲಾ ಕಾಲೇಜು, ಅಪಘಾತ ವಲಯಗಳ ಸ್ಥಳಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕು ಎಂದು ತಿಳಿಸಿದರು.

dcm karajola

ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆ, ವಿಶೇಷ ಅಭಿವೃದ್ಧಿ ಯೋಜನೆಯಡಿ ಯಾವುದೇ ಅನುದಾನ ಉಳಿಕೆಯಾದರೆ ಶಿಸ್ತು ಕ್ರಮಕೈಗೊಳ್ಳಲಾಗುವುದು. ಮುಖ್ಯ ಇಂಜಿನಿಯರಿಂಗ್‍ಗಳು ಕಾರ್ಯನಿರ್ವಾಹಕ ಅಭಿಯಂತರರೊಂದಿಗೆ ನಿಯಮಿತವಾಗಿ ಸಭೆ ನಡೆಸಿ, ಸಮಗ್ರವಾಗಿ ಚರ್ಚಿಸಬೇಕು. ಮುಖ್ಯ ಇಂಜಿನಿಯರ್‌ಗಳು ಕಾಮಗಾರಿಗಳನ್ನು ಖುದ್ದು ಪರಿಶೀಲಿಸಿ ಪ್ರಗತಿ ಪರಿಶೀಲನೆ ನಡೆಸಬೇಕು. ಯಾವುದೇ ಲೋಪವಾದರೆ ಕಾರ್ಯನಿರ್ವಹಣೆ ವರದಿಯಲ್ಲಿ ನಮೂದಿಸಲಾಗುವುದು ಎಂದು ಸೂಚಿಸಿದರು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಶ್ರೀ ರಜನೀಶ್ ಗೋಯಲ್, ಕಾರ್ಯದರ್ಶಿ ಶ್ರೀ ಬಿ. ಗುರುಪ್ರಸಾದ್, ಮುಖ್ಯ ಇಂಜಿನಿಯರ್‌ಗಳು, ಅಧೀಕ್ಷಕ ಇಂಜಿನಿಯರ್‌ಗಳು ಹಾಜರಿದ್ದರು.

dcm 1

Share This Article
Leave a Comment

Leave a Reply

Your email address will not be published. Required fields are marked *