– ಜೂನ್ ಅಂತ್ಯಕ್ಕೆ ಹೈಟೆಕ್ ಬಸ್ ನಿಲ್ದಾಣ ಪೂರ್ಣಗೊಳಿಸಲು ಸೂಚನೆ
ಬೆಳಗಾವಿ: ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಒಂಬತ್ತು ನೂತನ ಬಸ್ಸುಗಳನ್ನು ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳಿಸಿದ್ದಾರೆ.
ನಗರದ ಕೇಂದ್ರ ಬಸ್ ನಿಲ್ದಾಣ ಆವರಣದಲ್ಲಿ ನೂತನ ಬಸ್ಸುಗಳಿಗೆ ಪೂಜೆ ನೆರವೇರಿಸುವ ಮೂಲಕ ಬಸ್ ಸಂಚಾರಕ್ಕೆ ಡಿಸಿಎಂ ಚಾಲನೆ ನೀಡಿದರು. ಬಸ್ ನಿಲ್ದಾಣ ಕಾಮಗಾರಿಯ ಪರಿವೀಕ್ಷಣೆ ಕೈಗೊಂಡ ಲಕ್ಷ್ಮಣ ಸವದಿ ಅವರು ಜೂನ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
Advertisement
Advertisement
ರೈಲ್ವೇ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆ.ಎಸ್ ಈಶ್ವರಪ್ಪ, ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ್ ಕವಟಗಿಮಠ, ಶಾಸಕರಾದ ಅನಿಲ್ ಬೆನಕೆ, ಅಭಯ್ ಪಾಟೀಲ್, ಮಹಾಂತೇಶ ದೊಡಗೌಡ, ಮಹೇಶ್ ಕುಮಠಳ್ಳಿ ಮತ್ತಿತರರು ಉಪಸ್ಥಿತರಿದ್ದರು. ವಾಯವ್ಯ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್ ಮುಂಜಿ ಅವರು ಸಚಿವರಿಗೆ ಬಸ್ ನಿಲ್ದಾಣದ ಕಾಮಗಾರಿ ಕುರಿತು ಮಾಹಿತಿ ನೀಡಿದರು.
Advertisement
ಬಸ್ಸಿನಲ್ಲಿ ಡಿಸಿಎಂ ಪ್ರಯಾಣ:
ಕಾರ್ಯಕ್ರಮದ ಬಳಿಕ ಲಕ್ಷ್ಮಣ ಸವದಿ ಅವರು ನೂತನ ಮಲ್ಟಿಎಕ್ಸೆಲ್ ಬಸ್ಸಿನಲ್ಲಿ ಸುವರ್ಣ ವಿಧಾನಸೌಧಕ್ಕೆ ಪ್ರಯಾಣಿಸಿದರು. ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಲಾಗಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನಾ ಸಮಾರಂಭಕ್ಕೆ ಎಲ್ಲಾ ಅತಿಥಿಗಳು ಬಸ್ಸಿನಲ್ಲೇ ಪ್ರಯಾಣಿಸಿದರು. ಸುರೇಶ್ ಅಂಗಡಿ, ಕೆ.ಎಸ್ ಈಶ್ವರಪ್ಪ, ಮಹಾಂತೇಶ್ ಕವಟಗಿಮಠ ಸೇರಿದಂತೆ ಎಲ್ಲಾ ಶಾಸಕರು ಲಕ್ಷ್ಮಣ ಸವದಿ ಅವರಿಗೆ ಸಾಥ್ ನೀಡಿದರು.