ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಬಳಿಕ ಮೊದಲ ಬಾರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಡಿಸಿಎಂ ಪರಮೇಶ್ವರ್ ಅವರು ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ.
ರಾಜ್ಯ ಕಾಂಗ್ರೆಸ್ ಶಾಸಕರು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಲಿ ಎಂಬ ಹೇಳಿಕೆಗಳು ಮಹತ್ವ ಪಡೆದುಕೊಳ್ಳುತ್ತಿರುವ ಸಂದರ್ಭದಲ್ಲಿಯೇ ಸಿಎಂ ಭೇಟಿ ಮಾಡಲು ಮುಂದಾಗಿರುವುದು ಮಹತ್ವ ಪಡೆದುಕೊಂಡಿದೆ.
Advertisement
Advertisement
ಸಿಎಂ ಗೃಹ ಕೃಷ್ಣದಲ್ಲಿ ಕಚೇರಿಯಲ್ಲಿ ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಈ ವೇಳೆ ಕಾಂಗ್ರೆಸ್ ಶಾಸಕರ ಹೇಳಿಕೆ ಹಾಗೂ ಉಪ ಚುನಾವಣೆ ಪ್ರಚಾರ ವಿಚಾರವಾಗಿ ಚರ್ಚೆ ನಡೆದಿದೆ ಎಂಬ ಮಾಹಿತಿ ಲಭಿಸಿದೆ. ಇದೇ ವೇಳೆ ಸಚಿವರಾದ ರೇವಣ್ಣ ಹಾಗೂ ಬಂಡೆಪ್ಪ ಕಾಶಂಪೂರ್ ಅವರು ಕೂಡ ಹಾಜರಾಗಿದ್ದರು.
Advertisement
ಸಿಎಂ ಭೇಟಿ ಬಳಿಕ ಮಾತನಾಡಿದ ಡಿಸಿಎಂ ಪರಮೇಶ್ವರ್ ಅವರು, ಚುನಾವಣೆ ಮುಗಿದ ಮೇಲೆ ಸಿಎಂ ಅವರನ್ನ ಭೇಟಿಯಾಗಿರಲಿಲ್ಲ. ಹೀಗಾಗಿ ನಾನು, ಅಧ್ಯಕ್ಷರು ಭೇಟಿ ಆಗಿ ಉಪ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇವೆ. ಅಲ್ಲದೇ ಪ್ರಚಾರಕ್ಕೆ ಸಿಎಂ ಬರಲು ಮನವಿ ಮಾಡಿದ್ದು, ಮೇ 12 ಮತ್ತು 13 ರಂದು ಪ್ರಚಾರಕ್ಕೆ ಬರುತ್ತಾರೆ. ಎರಡು ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಪಡೆಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Advertisement
ಇದೇ ವೇಳೆ ಸಿದ್ದರಾಮಯ್ಯ ಸಿಎಂ ಆಗಬೇಕು ಅನ್ನುವ ವಿಚಾರವಾಗಿ ಚರ್ಚೆ ಆಗಿಲ್ಲ. ಈ ಬಗ್ಗೆ ಕುಮಾರಸ್ವಾಮಿ ಅವರ ಹತ್ತಿರ ಮಾತನಾಡಲು ಆಗುತ್ತಾ ಎಂದು ಪರಮೇಶ್ವರ್ ಅವರು ಪ್ರಶ್ನಿಸಿದರು. ಅಲ್ಲದೇ ಶೀಘ್ರದಲ್ಲೇ ಸಮನ್ವಯ ಸಮಿತಿ ಸಭೆಯನ್ನು ಸಿದ್ದರಾಮಯ್ಯ ಅವರು ನಿರ್ಧಾರ ಮಾಡುತ್ತಾರೆ ಎಂದರು. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಬರಲು ಸಿದ್ದರಾಮಯ್ಯ ಕಾರಣ ಎಂಬ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ ಅವರನ್ನೇ ಕೇಳಿ ಎಂದರು.