ಅನಂತಕುಮಾರ್ ಅಂತಿಮ ದರ್ಶನ – ನ್ಯಾಷನಲ್ ಕಾಲೇಜು ಮೈದಾನ ಸಿದ್ಧತೆ ವೀಕ್ಷಿಸಿದ ಡಿಸಿಎಂ

Public TV
1 Min Read
parameshwar 1 copy

ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತಿಮ ದರ್ಶನ ಪಡೆಯಲು ಆಗಮಿಸುವ ಸಾರ್ವಜನಿಕರಿಗೆ ನಾಳೆ ನಗರದ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಡಿಸಿಎಂ ಪರಮೇಶ್ವರ್ ಅವರು ಕಾರ್ಯಕ್ರಮದ ಸಿದ್ಧತೆಗಳನ್ನು ವೀಕ್ಷಿಸಿದರು.

ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಾಳೆ ಅನಂತಕುಮಾರ್ ಅವರ ಪಾರ್ಥೀವ ಶರೀರ ಸಾರ್ವಜನಿಕ ದರ್ಶನ ಲಭ್ಯವಾಗಲಿದೆ. ರಾಜ್ಯ ಸರ್ಕಾರ ಈಗಾಗಲೇ ಈ ಕುರಿತು ಸಿದ್ಧತೆಗಳನ್ನು ಆರಂಭಿಸಿದೆ. ಕಾರ್ಯಕ್ರಮದ ಕುರಿತು ಡಿಸಿಎಂ ಪರಮೇಶ್ವರ್ ಅವರಿಗೆ ಹಿರಿಯ ಪೊಲೀಸ್ ಅಧಿಕಾರಿಗಳಾದ ಹೆಚ್ಚುವರಿ ಪೊಲೀಸ್ ಆಯುಕ್ತ ಹರಿಶೇಖರನ್, ಡಿಸಿಪಿಗಳಾದ ಅಣ್ಣಾಮಲೈ ಹಾಗೂ ಸಂದೀಪ್ ಪಾಟೀಲ್ ಮಾಹಿತಿ ನೀಡಿದರು. ಈ ವೇಳೆ ಮೇಯರ್ ಗಂಗಾಂಬಿಕೆ ಕೂಡ ಪರಮೇಶ್ವರ್ ಅವರೊಂದಿಗೆ ಆಗಮಿಸಿದ್ದರು.

national college

ಈ ವೇಳೆ ಮಾತನಾಡಿದ ಡಿಸಿಎಂ ಪರಮೇಶ್ವರ್ ಅವರು, ಅನಂತಕುಮಾರ್ ಅವರ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನ ಹಿನ್ನೆಲೆ ಹಲವು ಗಣ್ಯರು ಹಾಗೂ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ನಿರೀಕ್ಷೆ ಇದೆ. ನಾಳೆ ಎರಡೂವರೆ ಗಂಟೆ ಕಾಲ ಅಂತಿಮ ದರ್ಶಕ್ಕೆ ಅವಕಾಶ ಇರಲಿದೆ. ಇಂದು ಸಂಜೆ 8.30 ಕ್ಕೆ ಪ್ರಧಾನಿ ಮೋದಿ ಅವರು ಕೂಡ ಆಗಮಿಸಲಿದ್ದು, ಉಪರಾಷ್ಟ್ರಪತಿಗಳು, ಗೃಹ ಸಚಿವರು ಮತ್ತು ಕೇಂದ್ರದ ಹಲವು ಸಚಿವರ ಆಗಮಿಸಲಿದ್ದಾರೆ. ಎಲ್ಲರಿಗೂ ವ್ಯವಸ್ಥಿತವಾಗಿ ದರ್ಶನ ಮಾಡುವ ಅವಕಾಶ ಕಲ್ಪಿಸಬೇಕೆಂಬ ಉದ್ದೇಶದಿಂದ ಸೂಕ್ತ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Share This Article
Leave a Comment

Leave a Reply

Your email address will not be published. Required fields are marked *