ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಸೂಪರ್ ಸಿಎಂ ಅಂತಾ ಕರೆಸಿಕೊಳ್ಳವ ಎಚ್.ಡಿ.ರೇವಣ್ಣರ ರಾಜಕೀಯ ಲೆಕ್ಕಾಚಾರಕ್ಕೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರೇ ಶಾಕ್‍ಗೆ ಒಳಗಾಗಿದ್ದಾರಂತೆ. ಪರಮೇಶ್ವರ್ ಖಾತೆಯ ದೊಡ್ಡ ಯೋಜನೆಯೊಂದನ್ನು ಹೆಚ್.ಡಿ.ರೇವಣ್ಣ ಹೈಜಾಕ್ ಮಾಡಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.
ಬೆಂಗಳೂರು ಎಲಿವೇಟೆಡ್ ರಿಂಗ್ ರೋಡ್ ಎಂಬ ಮಹತ್ವದ ಯೋಜನೆಗೆ ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ 16 ಸಾವಿರ ಕೋಟಿ ಮೀಸಲಿಟ್ಟಿದ್ದರು. ಈ ಮಹತ್ವದ ಯೋಜನೆ ಡಿಸಿಎಂ ಪರಮೇಶ್ವರ್ ಹೊಂದಿರುವ ಬೆಂಗಳೂರು ನಗರಾಭಿವೃದ್ದಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯರೂಪಕ್ಕೆ ಬರಬೇಕಿದೆ. ಎಚ್.ಡಿ.ರೇವಣ್ಣ ಅವರು ತಮ್ಮ ಪ್ರಭಾವ ಬಳಸಿ ಬೆಂಗಳೂರು ನಗರಾಭಿವೃದ್ದಿ ಇಲಾಖೆ ವ್ಯಾಪ್ತಿಯ ಎಲಿವೇಟೆಡ್ ರಿಂಗ್ ರೋಡ್ ಲೋಕೋಪಯೋಗಿ ಇಲಾಖೆ ಅಧೀನಕ್ಕೆ ಬರುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
Advertisement
ಈ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ, ಪರಮೇಶ್ವರ್ ಹಾಗೂ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ನಡುವೆ ಮಾತಿನ ಚಕಮಕಿ ನಡೆದಿದೆ. ಸೋಮವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ರೇವಣ್ಣರ ನಡೆಗೆ ಸಿಎಂ ಸಮ್ಮುಖದಲ್ಲೆ ಪರಮೇಶ್ವರ್ ಅಸಮಾಧಾನ ಹೊರಹಾಕಿದ್ದಾರೆ ಎಂದು ಪಬ್ಲಿಕ್ ಟಿವಿಗೆ ಮೂಲಗಳಿಂದ ತಿಳಿದುಬಂದಿದೆ.
Advertisement
ರೇವಣ್ಣರ ವಿರುದ್ಧ ಪರಮೇಶ್ವರ್ ಅಸಮಾಧಾನ ಹೊರ ಹಾಕಿದರೂ ಸಿಎಂ ಮಾತ್ರ ಸೈಲಂಟ್ ಆಗಿದ್ದಾರೆ ಎನ್ನಲಾಗುತ್ತಿದೆ.