ಬೆಂಗಳೂರು: ಟ್ರಿನಿಟಿ ವೃತ್ತ ಸಮೀಪದ ಮೆಟ್ರೋ ಸೇತುವೆಯ ವಯಾಡಕ್ಟ್ ನಲ್ಲಿ ಬಿರುಕು ಮೂಡಿದ ಹಿನ್ನೆಲೆಯಲ್ಲಿ ಡಿಸಿಎಂ ಪರಮೇಶ್ವರ್ ಅವರು ಶನಿವಾರ ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡಿ ಪರಿಶೀಲನೆ ನಡೆಸಿದರು.
ಡಾ. ಅಂಬೇಡ್ಕರ್ ಮೆಟ್ರೋ ನಿಲ್ದಾಣದಿಂದ ಹಲಸೂರು ನಿಲ್ದಾಣದವರೆಗೆ ಪ್ರಯಾಣ ಬೆಳೆಸಿ ಡಿಸಿಎಂ ದೋಷ ಕಾಣಿಸಿಕೊಂಡ ಸ್ಥಳವನ್ನು ಪರಿಶೀಲನೆ ನಡೆಸಿದರು.
Advertisement
Advertisement
ತಮ್ಮ ಪ್ರಯಾಣದ ವೇಳೆ ಮೆಟ್ರೋ ಪ್ರಯಾಣಿಕರೊಂದಿಗೆ ಮಾತನಾಡಿ ಮಾಹಿತಿ ಪಡೆದರು. ಅಲ್ಲದೇ ಮೆಟ್ರೋದಲ್ಲಿ ಯಾವುದೇ ದೋಷ ಇಲ್ಲ. ಅದ್ದರಿಂದಲೇ ನಾನು ಮೆಟ್ರೋದಲ್ಲೇ ಪ್ರಯಾಣಿಸುತ್ತಿದ್ದೇನೆ ಎಂದು ತಿಳಿಸಿದರು.
Advertisement
ಟ್ರಿನಿಟಿ ಬಳಿಯ ಮೆಟ್ರೋ ಸೇತುವೆಯ ವಯಾಡಕ್ಟ್ ವೀಕ್ಷಿಸಿ ಬೆಂಗಳೂರು ಮೆಟ್ರೋ ಯೋಜನೆಯ ನಿರ್ದೇಶಕ ವಿಜಯ್ ಕುಮಾರ್ ಅವರಿಂದ ಮಾಹಿತಿ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಮೆಟ್ರೋ ಪಿಲ್ಲರ್ ನಲ್ಲಿ ಯಾವುದೇ ದೋಷವಿಲ್ಲ. ಕಾಂಕ್ರೀಟ್ ಹಾಕುವಾಗ ಹನಿಕಾಂಬ್ (ಕಾಂಕ್ರೀಟ್ ಪದರ ಟೊಳ್ಳಾಗುವುದನ್ನು ಸಿವಿಲ್ ಎಂಜಿನಿಯರಿಂಗ್ ಭಾಷೆಯಲ್ಲಿ ಹನಿಕಾಂಬ್ ಎಂದು ಕರೆಯಲಾಗುತ್ತದೆ) ಆಗಿದೆ. ಅದ್ದರಿಂದ ಯಾವುದೇ ಆತಂಕ ಬೇಡ. ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್ ಮತ್ತು ದೆಹಲಿಯಿಂದ ಎಂಜಿನಿಯರ್ ಬಂದು ಸಲಹೆ ನೀಡಿದ್ದಾರೆ. ಇಂದು ಸಂಜೆಯಿಂದ ದುರಸ್ತಿ ಕಾರ್ಯ ಮಾಡುತ್ತಾರೆ ಎಂದು ಮಾಹಿತಿ ನೀಡಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv