ತುಮಕೂರು: ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ.ಪರಮೇಶ್ವರ್ (G Parameshwar) ಅವರು ಇಂದು ಗುಬ್ಬಿ (Gubbi) ತಾಲೂಕಿನ ಸಿ.ಎಸ್.ಪುರ ಹೋಬಳಿಯ ಯಡುವನಹಳ್ಳಿಗೆ ಭೇಟಿ ನೀಡಿ, ತುರ್ತು ಕ್ರಿಯಾ ಯೋಜನೆ ಅನುದಾನದಡಿ ಕೊರೆಸಲಾದ ಕುಡಿಯುವ ನೀರಿನ ಕೊಳವೆಬಾವಿಯನ್ನು ಪರಿಶೀಲಿಸಿದರು.
ಸಿಎಪಿ ಅನುದಾನದಡಿ ಕೊರೆದಿರುವ ಕುಡಿಯುವ ನೀರಿನ ಬೋರ್‌ವೆಲ್‌ನ್ನು ವೀಕ್ಷಿಸಿ, ಬೋರ್‌ವೆಲ್‌ನ ಪ್ರಸ್ತುತ ಸ್ಥಿತಿಗತಿ ಹಾಗೂ ನೀರಿನ ಲಭ್ಯತೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಗ್ರಾಮಸ್ಥರಿಗೆ ಕುಡಿಯುವ ನೀರು (Drinking Water) ಪೂರೈಸಲು ಕೈಗೊಂಡಿರುವ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಯಾರು ಬರಲಿ, ಬಿಡಲಿ ಕಾವೇರಿಗಾಗಿ ಬಂದ್ ಮಾಡೇ ಮಾಡ್ತೀವಿ: ವಾಟಾಳ್ ನಾಗರಾಜ್
ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಜನರಿಗೆ ಅಗತ್ಯ ಪ್ರಮಾಣದಲ್ಲಿ ಕುಡಿಯುವ ನೀರು ಲಭ್ಯವಾಗುವಂತೆ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವಂತೆ ಪರಮೇಶ್ವರ್ ಸೂಚಿಸಿದರು. ಇದನ್ನೂ ಓದಿ: Har Ghar Tiranga | ಏನಿದು ಅಭಿಯಾನ, ಭಾಗವಹಿಸುವುದು ಹೇಗೆ? ಸರ್ಟಿಫಿಕೇಟ್ ಡೌನ್‌ಲೋಡ್ ಮಾಡೋದು ಹೇಗೆ? ಸಂಪೂರ್ಣ ವಿವರ ಇಲ್ಲಿದೆ

ಈ ವೇಳೆ ಗ್ರಾಮಸ್ಥರು, ಕಸ ವಿಲೇವಾರಿ, ಆಸ್ಪತ್ರೆ ಸಮಸ್ಯೆ ಕುರಿತು ಹಾಗೂ ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಕೋರಿ ಡಿಸಿಎಂ ಅವರಿಗೆ ಮನವಿ ಸಲ್ಲಿಸಿದರು. ಶೀಘ್ರವಾಗಿ ಪರಿಶೀಲಿಸಿ ಪರಿಹಾರ ಕ್ರಮ ಕೈಗೊಳ್ಳುವಂತೆ ಡಿಸಿ ಅವರಿಗೆ ಸೂಚಿಸಿದರು. ಇದನ್ನೂ ಓದಿ: ಡಿವೈಡರ್ ಹಾರಿ ಕಾರಿಗೆ ಡಿಕ್ಕಿಯಾದ ಪಿಕಪ್ ಟ್ರಕ್ – ಭಾರತೀಯ ಮೂಲದ ಟೆಕ್ಕಿ ಸಾವು
ಇನ್ನುಕುಣಿಗಲ್ ತಾಲೂಕಿನ ನಾಗನಹಳ್ಳಿ, ಮಂಡನಪಾಳ್ಯ ಗ್ರಾಮದ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಬರ ಪರಿಸ್ಥಿತಿಯನ್ನು ಪರಿಶೀಲಿಸಿದರು. ಅಡಿಕೆ ತೋಟಗಳಿಗೆ ಭೇಟಿ ನೀಡಿದ ಅವರು, ಫಲವತ್ತಾದ ಮಣ್ಣಿನಲ್ಲಿ ಬೆಳೆದಿದ್ದ ಅಡಿಕೆ ಬೆಳೆ, ನೀರಿನ ಕೊರತೆಯಿಂದ ಒಣಗುತ್ತಿರುವುದನ್ನು ಖುದ್ದು ವೀಕ್ಷಿಸಿದರು. ಬರದಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು. ಇದನ್ನೂ ಓದಿ: ಕರ್ನಾಟಕಕ್ಕೆ ಮತ್ತೆ ಶಾಕ್ – ತಮಿಳುನಾಡಿಗೆ ದಿನಕ್ಕೆ 12 ಸಾವಿರ ಕ್ಯೂಸೆಕ್ ನೀರು ಬಿಡಿ
ಈ ಸಂದರ್ಭದಲ್ಲಿ ರೈತರು ಬರ ಪರಿಹಾರ ಒದಗಿಸುವಂತೆ ಹಾಗೂ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಮೂಲಕ ಕುಣಿಗಲ್ ತಾಲೂಕಿಗೆ ನೀರು ಹರಿಸುವಂತೆ ಉಪಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಇದನ್ನೂ ಓದಿ: ಪತ್ನಿ ಮೇಲಿನ ಅನುಮಾನಕ್ಕೆ ಜಿಲೆಟಿನ್ ಕಡ್ಡಿ ಬ್ಲಾಸ್ಟ್ – ತಂದೆ, ಮಗಳು ಸಾವು, ನಾಲ್ವರಿಗೆ ಗಂಭೀರ ಗಾಯ

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ಸರ್ಕಾರ ಈಗಾಗಲೇ 1,000 ಕೋಟಿ ರೂ. ಅನುದಾನ ಮೀಸಲಿಟ್ಟು ಕಾಮಗಾರಿಗೆ ಅನುಮೋದನೆ ನೀಡಿದೆ. ಈ ಪೈಕಿ 450 ಕೋಟಿ ಹಣವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಡಿಸಿಎಂ ತಿಳಿಸಿದರು. ಇದನ್ನೂ ಓದಿ: ಡಿಸಿಇಟಿ: ಆ.13ಕ್ಕೆ ವೃತ್ತಿಪರ ಅಭ್ಯರ್ಥಿಗಳ ದಾಖಲೆ ಪರಿಶೀಲನೆ; ಕೆಇಎ ಮಾಹಿತಿ
ಆದರೆ ತುರುವೇಕೆರೆ ಹಾಗೂ ಚಿಕ್ಕನಾಯಕನಹಳ್ಳಿ ಭಾಗದ ರೈತರು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆ ಉಂಟಾಗಿದೆ. ಈ ವಿಚಾರವನ್ನು ಮಾತುಕತೆಯ ಮೂಲಕ ಬಗೆಹರಿಸಲಾಗುವುದು ಎಂದು ಡಾ. ಜಿ.ಪರಮೇಶ್ವರ ಅವರು ರೈತರಿಗೆ ಭರವಸೆ ನೀಡಿದರು. ಇದನ್ನೂ ಓದಿ: ದೆಹಲಿಯಲ್ಲಿ 19 ಮೋಸ್ಟ್ ವಾಂಟೆಡ್ ಉಗ್ರರು? – ಸ್ವಾತಂತ್ರ್ಯೋತ್ಸವದ ಹೊತ್ತಲ್ಲೇ ಪೊಲೀಸರಿಂದ ಪೋಸ್ಟರ್ ಬಿಡುಗಡೆ

