ಉಡುಪಿ: ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್ (G.Parameshwar) ಅವರು ದಂಪತಿ ಸಮೇತ ಇಂದು ಬೆಳಗ್ಗೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ (Kollur Mookambika Temple) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಚಂಡಿಕಾ ಹೋಮದಲ್ಲಿ ಪಾಲ್ಗೊಂಡರು.
ಪೂಜೆಯ ಬಳಿಕ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಉಪಮುಖ್ಯಮಂತ್ರಿಗಳಿಗೆ ದೇವಿಯ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕೊಲ್ಲೂರು ದೇವಸ್ಥಾನಕ್ಕೆ ಬರುವ ಭಕ್ತರ ಅಭಿವೃದ್ಧಿಗೆ ದರ್ಶನ, ಪಾರ್ಕಿಂಗ್, ವಸತಿ ಸೇರಿದಂತೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ನೀಡುವ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ತಯಾರಿಸಲಾಗಿದ್ದು, ಮುಂದೆ ಅದನ್ನು ಕಾರ್ಯಗತಗೊಳಿಸಲು ಉದ್ದೇಶಿಸಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು. ಇದನ್ನೂ ಓದಿ: ಕಿಂಚಿತ್ ಅಮಲು ಬೆರೆಸಿದರೂ ಗುಟ್ಕಾ, ಪಾನ್ ಮಸಾಲಾ ಕಂಪ್ಲೀಟ್ ಬ್ಯಾನ್: ಡಿಕೆಶಿ ಎಚ್ಚರಿಕೆ

ಮುಜರಾಯಿ ಇಲಾಖೆಯ ದೇವಸ್ಥಾನಗಳಿಗೆ ಸಂಬಂಧಿಸಿ ಒತ್ತುವರಿಯಾಗಿರುವ ಎಲ್ಲಾ ಜಮೀನನ್ನು ತೆರವುಗೊಳಿಸಲು ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಅದೇ ರೀತಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಇದನ್ನೂ ಓದಿ: ವೆನೆಜುವೆಲಾ ಭೂಕಂಪದಲ್ಲಿ ಮಗಳನ್ನು ಕಾಪಾಡಿ ಪ್ರಾಣತ್ಯಾಗ ಮಾಡಿದ ಫುಟ್‌ಬಾಲರ್ ಪತ್ನಿ
