– ಛಲವಾದಿ ಆರೋಪಕ್ಕೆ ಡಿಸಿಎಂ ತಿರುಗೇಟು
– ಶಾಂತಿಯುತ ಪ್ರತಿಭಟನೆಗೆ ಅಭ್ಯಂತರವಿಲ್ಲ
ಬೆಂಗಳೂರು: ಬಿಡದಿ ಟೌನ್‌ಶಿಪ್ ( Bidadi Township) ಯೋಜನೆಗೆ ಸಂಬಂಧಿಸಿದ ಸಮೀಕ್ಷೆ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ನಡೆದ ಪ್ರಕರಣ ಕುರಿತು ಮಾತನಾಡಿದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, (DCM Parameshwara) ಕಾನೂನಿನ ವ್ಯಾಪ್ತಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸುವುದು, ಮನವಿ ಸಲ್ಲಿಸುವುದು ಅಥವಾ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿದರು.
ರಾಜಕೀಯ ಪ್ರೇರಣೆ ಅಥವಾ ಒತ್ತಡದಿಂದ ಕಾನೂನುಬಾಹಿರವಾಗಿ ಪ್ರತಿಭಟನೆ ನಡೆಸಿರುವುದು ಸಾಬೀತಾದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಬಿಡದಿ ಟೌನ್‌ಶಿಪ್ ಯೋಜನೆ ಏಕೆ ಅಗತ್ಯ, ಸರ್ಕಾರಕ್ಕೆ ಭೂಮಿ ಏಕೆ ಬೇಕಾಗಿದೆ ಹಾಗೂ ಸ್ಥಳೀಯರ ಹಿತಾಸಕ್ತಿಯನ್ನು ಹೇಗೆ ಕಾಪಾಡಲಾಗುವುದು ಎಂಬುದರ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಸರ್ಕಾರ ಮಾಡಲಿದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಅವರು, ಆಗಸ್ಟ್‌ನಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಇದರಿಂದ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಸುಮಾರು 20 ಹುದ್ದೆಗಳ ಭರ್ತಿ ಕುರಿತು ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ವಿದೇಶ ಪ್ರವಾಸದಿಂದ ರಾಹುಲ್ ಗಾಂಧಿ ಹಿಂದಿರುಗಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಅಗತ್ಯ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದರು.ಇದನ್ನೂ ಓದಿ: ರಾಜಕೀಯ ಬೇರೆ, ಕೆಲಸ ಬೇರೆ – ಕೃಷ್ಣ ಬೈರೇಗೌಡ ಕಾರ್ಯವೈಖರಿಗೆ ಹೆಚ್‌ಡಿಡಿ ಶ್ಲಾಘನೆ
ಬಿಜೆಪಿ ಶಾಸಕ ಛಲವಾದಿ ನಾರಾಯಣಸ್ವಾಮಿ ಮಾಡಿರುವ ಹೆಚ್ಚು ಕಪ್ಪ ಕಾಣಿಕೆ ಕೊಟ್ಟವರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ಆರೋಪಕ್ಕೆ ತಿರುಗೇಟು ನೀಡಿದ ಡಿಸಿಎಂ, ಅವರು ಬಿಜೆಪಿಯಲ್ಲಿ ಏನು ಮಾಡಿದ್ದಾರೋ ಅದನ್ನೇ ಹೇಳುತ್ತಿದ್ದಾರೆ. ಅವರ ರಾಜಕೀಯ ಸಂಸ್ಕೃತಿಯನ್ನು ನಮಗೆ ಹೋಲಿಸುವುದು ಸರಿಯಲ್ಲ ಎಂದು ಹೇಳಿದರು.ಇದನ್ನೂ ಓದಿ: ಸಿದ್ದರಾಮಯ್ಯ ಇಳಿಸಲು ಹೈಕಮಾಂಡ್‌ಗೆ ಕೊಟ್ಟ ಭರವಸೆಯಂತೆ ಟೌನ್‌ಶಿಪ್ – ಡಿಕೆಶಿ ವಿರುದ್ಧ ಹೆಚ್‌ಡಿಡಿ ಸ್ಫೋಟಕ ಆರೋಪ
