ಬೆಂಗಳೂರು: ದುಷ್ಕರ್ಮಿಯಿಂದ ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾಗಿದ್ದ ಶಿಕ್ಷಕಿಗೆ ರಕ್ತದಾನ ಮಾಡುವ ಮೂಲಕ ಪೊಲೀಸ್ ಇನ್ಸ್‌ಪೆಕ್ಟರ್ ಮಾನವೀಯತೆಯ ಮೆರೆದಿದ್ದಾರೆ.
ಸಿದ್ದಲಿಂಗಯ್ಯ ಗಿರಿನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದು, ಶಿಕ್ಷಕಿಗೆ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಶಿಕ್ಷಕಿ ತನುಜಾರನ್ನು ದುಷ್ಕರ್ಮಿಯೊಬ್ಬ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ. ಪರಿಣಾಮ ತನುಜಾ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರು. ಈ ವೇಳೆ ಸಿದ್ದಲಿಂಗಯ್ಯ ಗಾಯಾಳು ತನುಜಾರಿಗೆ ರಕ್ತ ಕೊಟ್ಟು ಜೀವ ಉಳಿಸಿದ್ದಾರೆ.
Advertisement
ನಡೆದಿದ್ದು ಏನು?
ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ತನುಜಾರಿಗೆ ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದನು. ಇದರಿಂದ ತನುಜ ನಡುರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಬಳಿಕ ಮಾಹಿತಿ ಸಿಕ್ಕಿದ ತಕ್ಷಣ ಸಿದ್ದಲಿಂಗಯ್ಯ ಸ್ಥಳಕ್ಕೆ ದಾವಿಸಿ ಕೂಡಲೇ ತನುಜಾರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು.
Advertisement
Advertisement
ಹೆಚ್ಚಿನ ಚಿಕಿತ್ಸೆಗೆಂದು ತನುಜಾರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆಯಿಂದ ತನುಜಾ ತೀವ್ರ ರಕ್ತಸ್ರಾವದಿಂದ ನಿತ್ರಾಣಗೊಂಡಿದ್ದರು. ಆಗ ವೈದ್ಯರು ಹೆಚ್ಚುವರಿ ರಕ್ತದ ಅವಶ್ಯಕತೆ ಇದೆ ತುರ್ತು ರಕ್ತ ಬೇಕು ಎಂದು ಸೂಚಿಸಿದ್ದರು. ತಕ್ಷಣವೇ ಸಿದ್ದಲಿಂಗಯ್ಯ ಗಾಯಾಳು ತನುಜಾರಿಗೆ ರಕ್ತ ನೀಡಿ ಪ್ರಾಣ ಉಳಿಸಿದ್ದರು.
Advertisement
ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತನುಜ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ತನುಜಾ ಹೊಸಕೆರೆಹಳ್ಳಿಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಸುತ್ತಿದ್ದರು. ಸಿದ್ದಲಿಂಗಯ್ಯ ಕೆಲಸಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿದ್ದಾರೆ. ದಕ್ಷಿಣ ವಿಭಾಗ ಡಿಸಿಪಿ ಅಣ್ಣಾಮಲೈ ಅವರು ಕೂಡ ಸಿದ್ದಲಿಂಗಯ್ಯ ಅವರಿಗೆ ಶಹಬ್ಬಾಶ್ ಗಿರಿ ನೀಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv