ಬೆಂಗಳೂರು: ಭ್ರಷ್ಟಾಚಾರಕ್ಕೆ (Corruption) ಆಸ್ಪದ ನೀಡದಂತೆ ಡಿಸಿಗಳು (DC) ಹಾಗೂ ಸಿಇಒಗಳಿಗೆ (CEO) ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಡಿಸಿಗಳು, ಸಿಇಓಗಳ ಸಭೆಯಲ್ಲಿ ಮಾತನಾಡಿದ ಅವರು, ಡಿಸಿಗಳು, ಸಿಇಒಗಳಿಗೆ ಬದ್ಧತೆಯ ಪಾಠ ಮಾಡಿದರು. ಡಿಸಿಗಳು, ಸಿಇಒಗಳು ಸರ್ಕಾರದ ಮುಖ್ಯ ಭಾಗ. ನಿಮ್ಮ ಕಾರ್ಯವೈಖರಿ ಸರ್ಕಾರದ ಹಣೆಬರಹ ನಿರ್ಧರಿಸುತ್ತದೆ. ನೀವು ಸರಿಯಾಗಿ ಕೆಲಸ ಮಾಡದಿದ್ದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದರು. ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ, ರೆವೆನ್ಯೂ ಇನ್ಸ್ಪೆಕ್ಟರ್‌ಗಳು, ಪಿಡಿಒಗಳ ಕಾರ್ಯವೈಖರಿ ಸರ್ಕಾರದ ವರ್ಚಸ್ಸಿನ ಮೇಲೆ ಪರಿಣಾಮ ಬೀರುತ್ತದೆ. ಅದರ ಬಗ್ಗೆ ಗಮನ ಹರಿಸಿ. ವೈಯಕ್ತಿಕ ಅಜೆಂಡಾ ಇಟ್ಟುಕೊಂಡು ಕೆಲಸ ಮಾಡೋದು ಬೇಡ ಎಂದರು. ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸೋ ಕೆಲಸ ಮಾಡಿ: ಡಿಸಿ, ಸಿಇಒಗಳಿಗೆ ಸಿಎಂ ಸೂಚನೆ
Advertisement
Advertisement
ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಉತ್ತಮ ಸಹಕಾರ ನೀಡಿದ್ದೀರಿ. ಅದಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. 70% ರಷ್ಟು ಅಧಿಕಾರಿಗಳು ಜಿಲ್ಲಾ ಮತ್ತು ತಾಲೂಕು ಕೇಂದ್ರದಲ್ಲಿ ಉಳಿದುಕೊಂಡು ಕೆಲಸ ಮಾಡುತ್ತಿಲ್ಲ. ಇದರಿಂದ ಅವರು ಜನರಿಗೆ ಸರಿಯಾಗಿ ಸಿಗುತ್ತಿಲ್ಲ. ಇದರಿಂದಲೂ ಸರ್ಕಾರಕ್ಕೆ ಕೆಟ್ಟ ಹೆಸರು. ಸರ್ಕಾರದ ಕೈಪಿಡಿ ನಿಯಮಗಳನ್ನು ಪಾಲಿಸಿ. ಅಧಿಕಾರಿಗಳಿಗೆ ಸಿಇಒಗಳು ಬದ್ಧತೆ ನಿಗದಿ ಮಾಡಬೇಕು ಎಂದು ಸೂಚನೆ ನೀಡಿದರು. ಇದನ್ನೂ ಓದಿ: ಗಣೇಶ ಹಬ್ಬಕ್ಕೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ- ಡಿಸಿ, ಸಿಇಓಗಳಿಗೆ ಸಿಎಂ ಸೂಚನೆ
Advertisement
15 ದಿನದೊಳಗೆ ಅಧಿಕಾರಿಗಳು ಕೆಲಸದ ಕೇಂದ್ರ ಸ್ಥಳದಲ್ಲಿ ವಾಸ್ತವ್ಯ ಹೂಡಿರುವ ವಿಳಾಸದ ಡೈರಿ ಮಾಡಿ ಸಾರ್ವಜನಿಕರ ಗಮನಕ್ಕೆ ತರಬೇಕು. ಕೇಂದ್ರ ಸ್ಥಳದಲ್ಲಿ ಉಳಿಯಲು ಆಗದವರು ಜಾಗ ಖಾಲಿ ಮಾಡಬೇಕು. ಭ್ರಷ್ಟಾಚಾರಕ್ಕೆ ಆಸ್ಪದ ಕೊಡಬೇಡಿ. ಆರ್‌ಟಿಐ ದುರ್ಬಳಕೆಗೂ ಅವಕಾಶ ಕೊಡಬೇಡಿ. ನಿಮ್ಮ ಮೇಲೆ ಹೆಚ್ಚು ನಿರೀಕ್ಷೆ ಇದೆ. ನರೇಗಾ ಹಣ ಸದ್ಬಳಕೆ ಮಾಡಿ. ಸಮರ್ಪಕ ಬಳಕೆಗೆ ಕ್ರಿಯಾ ಯೋಜನೆ ತಯಾರಿಸಿ. ಕಾಲಮಿತಿಯೊಳಗೆ ಅನುಷ್ಠಾನಕ್ಕೆ ತನ್ನಿ ಎಂದು ಹೇಳಿದರು. ಇದನ್ನೂ ಓದಿ: ದಲಿತ ಕುಟುಂಬಕ್ಕೆ ಧಮ್ಕಿ ಆರೋಪ – ವೀಡಿಯೋ ಫೇಕ್ ಎಂದ ಡಿ ಸುಧಾಕರ್
Advertisement
ಸಿಎಸ್‌ಆರ್ ಫಂಡ್ ಸದ್ಬಳಕೆಗೆ ಶ್ರಮಿಸಿ. ಮೂರು ಗ್ರಾಮ ಪಂಚಾಯ್ತಿಗೆ ಒಂದು ಪಬ್ಲಿಕ್ ಮಾದರಿ ಶಾಲೆ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಸಿಎಸ್‌ಆರ್ ಫಂಡ್‌ನಿಂದ ಕಟ್ಟಡ ಕಟ್ಟಿಕೊಡುತ್ತಾರೆ. ಪಬ್ಲಿಕ್ ಶಾಲೆಗಳ ಆಡಳಿತ ಮಂಡಳಿ ದತ್ತು ತೆಗೆದುಕೊಂಡು ಬೋಧನೆಗೆ ವ್ಯವಸ್ಥೆ ಮಾಡಿಕೊಡಲಿವೆ. ರಾಜ್ಯದ ಕೆಲವು ಉದ್ಯಮಗಳು ಸಿಎಸ್‌ಆರ್ ಫಂಡ್ ಅನ್ನು ಬೇರೆ ರಾಜ್ಯಗಳಿಗೆ ತೆಗೆದುಕೊಂಡು ಹೋಗುತ್ತಿವೆ. ಅದನ್ನು ತಡೆದು ನಮ್ಮಲ್ಲೇ ಬಳಕೆ ಮಾಡಲು ನೀವೆಲ್ಲರೂ ನಿಗಾ ವಹಿಸಬೇಕು ಎಂದರು. ಇದನ್ನೂ ಓದಿ: ಅನಿಷ್ಟ ಸರ್ಕಾರದ ವಿರುದ್ಧ ಹೋರಾಟಕ್ಕೆ ಮೈತ್ರಿ ಅನಿವಾರ್ಯ: ಬೊಮ್ಮಾಯಿ
Web Stories