ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬ ತಿರುಪತಿ (Tirupati) ತಿಮ್ಮಪ್ಪನ ದರ್ಶನ ಪಡೆದು ಬಳಿಕ ನಂದಿ ಗಿರಿಧಾಮಕ್ಕೆ (Nandi Hills) ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ಒಂದೂವರೆ ತಿಂಗಳ ಬಳಿಕ ಆತನ ಶವ ಪತ್ತೆಯಾಗಿದೆ.
ಚಿಕ್ಕಬಳ್ಳಾಪುರದ (Chikkaballapur) ಜಾತವಾರ ಹೊಸಹಳ್ಳಿ ಗ್ರಾಮದ ನಾರಾಯಣಸ್ವಾಮಿ (37) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ತಿಳಿದು ಬಂದಿದೆ. ನಂದಿ ಗಿರಿಧಾಮದ 38ನೇ ತಿರುವಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ವಿಷಯ ತಿಳಿದ ಚಿಕ್ಕಬಳ್ಳಾಪುರ ವೃತ್ತ ನಿರೀಕ್ಷಕ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ವ್ಯಕ್ತಿಯ ಬ್ಯಾಗ್‍ನಲ್ಲಿ ಆಧಾರ್ ಕಾರ್ಡ್ ಲಭ್ಯವಾಗಿದ್ದರಿಂದ ಮೃತನ ಗುರುತು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸ್ನೇಹಿತನ ಮೇಲೆ ಹಲ್ಲೆ – ಪ್ರಶ್ನೆ ಮಾಡಿದಕ್ಕೆ ಕುಚಿಕುಗಳಿಂದಲ್ಲೇ ಕೊಲೆ
Advertisement
Advertisement
ಟ್ರ್ಯಾಕ್ಟರ್ ಚಾಲಕನಾಗಿದ್ದ ನಾರಾಯಣಸ್ವಾಮಿ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ. ಇನ್ನೂ ಸಾಯುವುದಕ್ಕೂ ಮುನ್ನ ತಿರುಪತಿಗೆ ತೆರಳಿ ದೇವರ ದರ್ಶನ ಪಡೆದು ಗ್ರಾಮಕ್ಕೆ ಬಂದಿದ್ದ ಎನ್ನಲಾಗಿದೆ. ಕಳೆದ ಡಿ.15ರ ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆ ತೊರೆದಿದ್ದ. ನಂತರ, ನಾನು ನಂದಿಬೆಟ್ಟದಲ್ಲಿದ್ದು ನನ್ನನ್ನ ಮರೆತುಬಿಡಿ, ನಾನು ವಿಷ ಸೇವಿಸಿ ಸಾಯುತ್ತಿದ್ದೇನೆ ಎಂದು ಮನೆಯವರಿಗೆ ವಾಯ್ಸ್ ಮೆಸೇಜ್ ಕಳಿಸಿದ್ದ ಎಂದು ತಿಳಿದು ಬಂದಿದೆ.
Advertisement
Advertisement
ಈ ಬಗ್ಗೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೃತನ ಸಂಬಂಧಿಕರು ಮಿಸ್ಸಿಂಗ್ ಪ್ರಕರಣ ದಾಖಲಿಸಿದ್ದರು. ಇದೀಗ ಒಂದೂವರೆ ತಿಂಗಳ ಬಳಿಕ ನಾರಾಯಣಸ್ವಾಮಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಈ ಸಂಬಂಧ ನಂದಿ ಗಿರಿಧಾಮ ಪೊಲೀಸ್ ( Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಇದನ್ನೂ ಓದಿ: ಕಲ್ಕಾಜಿ ದೇಗುಲದಲ್ಲಿ ವೇದಿಕೆ ಕುಸಿದುಬಿದ್ದು ಮಹಿಳೆ ಸಾವು – 17 ಮಂದಿಗೆ ಗಾಯ