ಹಾಸನ: ಭಾರೀ ಮಳೆಯಿಂದ ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಮೂರುದಿನಗಳಾದರೂ ಚಾಲಕನ ಮೃತದೇಹ ಪತ್ತೆಯಾಗಿಲ್ಲ. ಆದ್ದರಿಂದ ಮೃತದೇಹ ಪತ್ತೆಯಾಗಿ ಕುಟುಂಬಸ್ಥರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಮೂರು ದಿನಗಳ ಹಿಂದೆ ಶಿರಾಡಿಘಾಟ್‍ನಲ್ಲಿ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿತ್ತು. ಆದರೆ ಇಷ್ಟು ದಿನಗಳಾದರು ಮೃತಪಟ್ಟ ಚಾಲಕ ಸಂತೋಷ್ ಮೃತದೇಹ ಪತ್ತೆಯಾಗಿಲ್ಲ. ಆದ್ದರಿಂದ ಮೃತದೇಹ ಪತ್ತೆ ಮಾಡವಲ್ಲಿ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಅಂತ ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕುಟುಂಬಸ್ಥರು ಧರಣಿ ನಡೆಸಿದ್ದು, ಕೂಡಲೇ ಮೃತದೇಹ ಪತ್ತೆಮಾಡಿ ಎಂದು ಒತ್ತಾಯಿಸಿದ್ದರು. ಬಳಿಕ ಸ್ಥಳಕ್ಕೆ ಭೇಟಿ ನೀಡಿ ರೋಹಿಣಿ ಅವರು ಕುಟುಂಬಸ್ಥರಿಗೆ ಸಮಾಧಾನ ಮಾಡಿ ಭರವಸೆ ನೀಡಿದ್ದಾರೆ.
Advertisement
Advertisement
ಟ್ಯಾಂಕರ್ ಇಂಜಿನ್ ಜೊತೆಗೆ ನೀರಿನಲ್ಲಿ ಮುಳುಗಿದ್ದು, ಅದರಲ್ಲಿ ಚಾಲಕನ ಮೃತದೇಹ 10 ಅಡಿಯ ಕೆಸರಿನಲ್ಲಿ ಸಿಲುಕಿದೆ. ಆದ್ದರಿಂದ ಪತ್ತೆ ಮಾಡುವ ಕಾರ್ಯ ವಿಳಂಬವಾಗುತ್ತಿದ್ದು, ನಿರಂತರ ಕಾರ್ಯಾಚರಣೆ ನಡೆಯುತ್ತಿದೆ. ಶೀಘ್ರವೇ ಮೃತದೇಹ ಪತ್ತೆ ಮಾಡುವುದಾಗಿ ಹಾಸನ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ.
Advertisement
ಕೊಡಗು ಭಾಗದಲ್ಲಿ ಸುರಿದ ವ್ಯಾಪಕ ಮಳೆಯಿಂದ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ಅರಕಲಗೂಡು ತಾಲೂಕಿನ ರಾಮನಾಥಪುರ ಅಕ್ಷರಶಃ ಮುಳುಗಿಹೋಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನೂರಾರು ಮನೆಗಳು ಜಲಾವೃತವಾಗಿ ಸಾವಿರಾರು ಜನರು ಸಂತ್ರಸ್ಥರಾಗಿದ್ದಾರೆ. ಕೋಟ್ಯಾಂತರ ರೂಪಾಯಿ ಮೌಲ್ಯದ ಬೆಳೆ ನೀರಿನಲ್ಲಿ ಕೊಚ್ಚಿಹೋಗಿದೆ. ಸಾವಿರಾರು ಜನರಿಗೆ ಗಂಜಿ ಕೇಂದ್ರ ತೆರೆದು ರಕ್ಷಣೆ ನೀಡಲಾಗಿದ್ದು ಭಾರೀ ಮಳೆಯಿಂದ ಶಿರಾಡಿಘಾಟ್-ಮಾಣಿ-ಮೈಸೂರು ಹೆದ್ದಾರಿ ಬಂದ್ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಿಮಾನಯಾನ ಮತ್ತಷ್ಟು ದುಬಾರಿಯಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv