ಚಿಕ್ಕೋಡಿ: ಹೀರೆಕುಡಿ (Hirekudi) ನಂದಿ ಪರ್ವತ ಆಶ್ರಮದ (Nandi Parvatha Ashram) ಜೈನಮುನಿ ಹತ್ಯೆಗೆ ಸಂಬಂಧಿಸಿದಂತೆ ಶೋಧಕಾರ್ಯ ಮುಗಿದಿದ್ದು, ಖಟಕಬಾವಿ ಗದ್ದೆಯ ಕೊಳವೆಬಾವಿಯಲ್ಲಿ (Borewell) ಸ್ವಾಮೀಜಿ ಮೃತದೇಹ ಪತ್ತೆಯಾಗಿದೆ.
ಜುಲೈ 6ರಿಂದ ನಂದಿ ಪರ್ವತ ಆಶ್ರಮದ ಜೈನಮುನಿಗಳು ನಾಪತ್ತೆಯಾಗಿದ್ದು, ಸ್ವಾಮೀಜಿಯ ನಾಪತ್ತೆಯ ಕುರಿತು ಭಕ್ತರು ಚಿಕ್ಕೋಡಿ (Chikkodi) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಸ್ವಾಮೀಜಿಯನ್ನು ಹತ್ಯೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದು, ಜೈನಮುನಿಯ ಮೃತದೇಹವನ್ನು ಖಟಕಬಾವಿಯ ಗದ್ದೆಯಲ್ಲಿದ್ದ ತೆರೆದ ಕೊಳವೆಬಾವಿಗೆ ಹಾಕಿರುವುದಾಗಿ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೈನಮುನಿ ಕೊಲೆ- ಆರೋಪಿಗಳಿಂದ ತಪ್ಪೊಪ್ಪಿಗೆ
Advertisement
Advertisement
ಆರೋಪಿಗಳು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಶುಕ್ರವಾರ ರಾತ್ರಿಯಿಂದ ಖಟಕಬಾವಿಯಲ್ಲಿ ಶೋಧಕಾರ್ಯ ನಡೆಸಿದ್ದರು. ಸ್ವಾಮೀಜಿ ಮೃತದೇಹ ಪತ್ತೆಯಾಗದ ಹಿನ್ನೆಲೆ ಶನಿವಾರವೂ ಜೆಸಿಬಿ ಸಹಾಯದಿಂದ ಶೋಧ ಕಾರ್ಯ ಮುಂದುವರೆಸಿದ್ದು, ಕೊಳವೆ ಬಾವಿಯ 20 ಅಡಿ ಆಳದಲ್ಲಿ ಸ್ವಾಮೀಜಿ ಮೃತದೇಹ ಪತ್ತೆಯಾಗಿದೆ. ಸ್ವಾಮೀಜಿಗೆ ಕರೆಂಟ್ ಶಾಕ್ (Current Shock) ನೀಡಿ ಹತ್ಯೆಗೈದ ಹಂತಕರು ಅವರ ಮೃತದೇಹವನ್ನು ಪೀಸ್ ಪೀಸ್ ಮಾಡಿ ಬಟ್ಟೆಯಲ್ಲಿ ಸುತ್ತಿ ಗಂಟುಕಟ್ಟಿ ಕೊಳವೆ ಬಾವಿಯಲ್ಲಿ ಎಸೆದಿದ್ದಾರೆ. ನಿರಂತರ 10 ಗಂಟೆಗಳ ಕಾರ್ಯಾಚರಣೆಯ ಬಳಿಕ ಕೊಳವೆಬಾವಿಯಲ್ಲಿ ಸ್ವಾಮೀಜಿ ಮೃತದೇಹವಿರುವ ಗಂಟು ಪತ್ತೆಯಾಗಿದ್ದು, ಎಸ್‌ಡಿಆರ್‌ಎಫ್ ಸಿಬ್ಬಂದಿ, ಎಫ್‌ಎಸ್‌ಎಲ್ ತಂಡದ ಸಹಾಯದೊಂದಿಗೆ ಪೊಲೀಸರು ಮೃತದೇಹವನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣ – ಸ್ವಾಮೀಜಿ ನೆನೆದು ಭಕ್ತರ ಕಣ್ಣೀರು, ಆಶ್ರಮದಲ್ಲಿ ನೀರವ ಮೌನ
Advertisement
Advertisement
ಹಣಕಾಸಿನ (Money) ವಿಚಾರವಾಗಿ ಸ್ವಾಮೀಜಿಯನ್ನು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡ ಆರೋಪಿಗಳು, ಅವರ ಮೃತದೇಹವನ್ನು ಸುಮಾರು 400 ಅಡಿ ಉದ್ದದ ಕೊಳವೆ ಬಾವಿಯಲ್ಲಿ ಎಸೆದಿರುವುದಾಗಿ ಮಾಹಿತಿಯನ್ನು ನೀಡಿದ್ದರು. ಈ ಹಿನ್ನೆಲೆ 400 ಅಡಿ ಉದ್ದದ ಕೊಳವೆಬಾವಿಯಲ್ಲಿ 40 ಅಡಿಗೆ ಕೇಸಿಂಗ್ ಪೈಪ್ ಅಳವಡಿಸಿದ್ದು, ಸುಮಾರು 20 ಅಡಿ ಆಳದಲ್ಲಿ ಪತ್ತೆಯಾದ ಸ್ವಾಮೀಜಿ ಮೃತದೇಹವನ್ನು ಹೊರತೆಗೆಯಲಾಗಿದೆ. ಇದನ್ನೂ ಓದಿ: ಚಿಕ್ಕೋಡಿಯಲ್ಲಿ ನಾಪತ್ತೆಯಾಗಿದ್ದ ಜೈನಮುನಿ ಹತ್ಯೆ – ಭಕ್ತರ ದೂರಿನ ಬಳಿಕ ಪ್ರಕರಣ ಬೆಳಕಿಗೆ
Web Stories