ಬೆಂಗಳೂರು: ನಗರದ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ (Kannada) ಅಳವಡಿಕೆಗೆ ನಿಗದಿ ಪಡಿಸಿದ್ದ ಗಡುವನ್ನು ವಿಸ್ತರಿಸಲಾಗಿದೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar), ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದ ಕಡೆ ಶೇ.60 ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಶುಸಂಗೋಪನಾ ಇಲಾಖೆಯ 2 ಎಕರೆ ಜಮೀನು ಅಲ್ಪಸಂಖ್ಯಾತರಿಗೆ – ಸರ್ಕಾರದ ನಡೆಗೆ ವಿರೋಧ
Advertisement
ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ.
ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ…
— DK Shivakumar (@DKShivakumar) February 29, 2024
Advertisement
ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ ಮುಖ್ಯ. 2 ವಾರಗಳ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ ಎಂದಿದ್ದಾರೆ.
Advertisement
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೇವಲ 3 ಸಾವಿರ ಉದ್ದಿಮೆದಾರರು ಮಾತ್ರ 60% ನಿಯಮ ಪಾಲಿಸಬೇಕಿದೆ. ಬೆಂಗಳೂರಿನಲ್ಲಿ 55,178 ಉದ್ದಿಮೆದಾರರಿಗೆ ನೋಟಿಸ್ ನೀಡಲಾಗಿದೆ. 60% ಕನ್ನಡ ನಿಯಮ ಉಲ್ಲಂಘನೆ ಮಾಡಿರುವ 55,178 ಉದ್ದಿಮೆದಾರರಿಗೆ ನೋಟಿಸ್ ಹೋಗಿದೆ. ಇದನ್ನೂ ಓದಿ: ಚಲನಚಿತ್ರ ಅಕಾಡೆಮಿಗೆ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾ ಅಧ್ಯಕ್ಷರಾಗಿ ನೇಮಕ
Advertisement
ನೋಟಿಸ್ ನೀಡಿದ ಬಳಿಕ ಈ ಉದ್ದಿಮೆದಾರರು 60% ಕನ್ನಡ ನಾಮಫಲಕ ಅಳವಡಿಸಿದ್ದಾರೆ. ನೋಟಿಸ್ ನೀಡಿದ ಬಳಿಕವೂ 60% ನಿಯಮ ಅನುಸರಿಸದ 3,044 ಉದ್ದಿಮೆದಾರರು ಇದ್ದಾರೆ. ಅವರ ವಿರುದ್ಧ ಸರ್ಕಾರ ಶಿಸ್ತುಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದೆ.