ಬೆಂಗಳೂರು: ಪಡಿತರ ಚೀಟಿ (Ration Card) ಫಲಾನುಭವಿಗಳು ಇ-ಕೆವೈಸಿ ದೃಢೀಕರಿಸಲು ಅ. 20ಕ್ಕೆ ಇದ್ದ ಗಡುವನ್ನು ನ. 10ರವರೆಗೆ ವಿಸ್ತರಿಸಲಾಗಿದೆ.
ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಒಂದು ವರ್ಷಕ್ಕೂ ಮೇಲ್ಪಟ್ಟು ಇ-ಕೆವೈಸಿ ಮಾಡಿಸಿದ 1,15,87,298 ಫಲಾನುಭವಿಗಳು ಮತ್ತೊಮ್ಮೆ ಇ-ಕೆವೈಸಿ ಮಾಡಬೇಕೆಂದು ಆದೇಶಿಸಿರುವ ಹಿನ್ನೆಲೆಯಲ್ಲಿ ಕೊನೆಯ ದಿನಾಂಕವನ್ನು ನವೆಂಬರ್ 10ರ ವರೆಗೆ ವಿಸ್ತರಿಸಲಾಗಿದೆ.
ರಾಜ್ಯದಲ್ಲಿ ಒಂದು ವರ್ಷದ ಹಿಂದೆ ಇ-ಕೆವೈಸಿ ಮಾಡಿಸಿದ ಫಲಾನುಭವಿಗಳ ಜೊತೆಗೆ, ಇದುವರೆಗೆ ಒಂದು ಬಾರಿಯೂ ಇ-ಕೆವೈಸಿ ಮಾಡಿಸದ 3,82,362 ಹಾಗೂ ಐದು ವರ್ಷ ಮೇಲ್ಪಟ್ಟು ಇ-ಕೆವೈಸಿ ಮಾಡಿಸಿದ 54,27,396 ಫಲಾನುಭವಿಗಳು ಇನ್ನೂ ಇ-ಕೆವೈಸಿ ದೃಢೀಕರಿಸಬೇಕಿದೆ.
ಈ ಎಲ್ಲ ಫಲಾನುಭವಿಗಳು ʻಅನ್ನ ಸೇವೆʼ ಮೊಬೈಲ್ ಅಪ್ಲಿಕೇಶನ್ ಮೂಲಕ ಖುದ್ದಾಗಿ ಅಥವಾ ನ್ಯಾಯಬೆಲೆ ಅಂಗಡಿಗಳಲ್ಲಿ ʻAHARAʼ ತಂತ್ರಾಂಶದ ಮೂಲಕ ನವೆಂಬರ್ 10 ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ಇಲ್ಲವಾದಲ್ಲಿ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.ಇದನ್ನೂ ಓದಿ: ಗದಗ | ಮಹಾರಾಷ್ಟ್ರದಿಂದ ಗಾಂಜಾ ಪೂರೈಕೆ ಮಾಡುತ್ತಿದ್ದ ನಾಲ್ವರ ಬಂಧನ – 1.17 ಲಕ್ಷ ಮೌಲ್ಯದ ಮಾದಕವಸ್ತು ಜಪ್ತಿ
ʻಅನ್ನ ಸೇವೆʼ ಆ್ಯಪ್ ಈಗ ದೇಶಾದ್ಯಂತ ಲಭ್ಯ
ಹೊರ ರಾಜ್ಯಗಳಿಗೆ ಕೆಲಸಕ್ಕೆಂದು ಹೋಗಿರುವ ರಾಜ್ಯದ ಪಡಿತರ ಚೀಟಿದಾರಿಗೆ ಅನುಕೂಲ ಕಲ್ಪಿಸಲು, ʻಅನ್ನ ಸೇವೆʼ ಆ್ಯಪ್ನ ಲಭ್ಯತೆಯನ್ನು ಇಂದಿನಿಂದ ದೇಶಾದ್ಯಂತ ವಿಸ್ತರಿಸಲಾಗಿದೆ. ಹೊರರಾಜ್ಯಗಳಲ್ಲಿರುವ ರಾಜ್ಯದ ಪಡಿತರ ಚೀಟಿದಾರರು ಅವರಿದ್ದಲಿಂದಲೇ ಆ್ಯಪ್ ಡೌನಲೋಡ್ ಮಾಡಿಕೊಂಡು ಇ-ಕೆವೈಸಿ ಪೂರ್ಣಗೊಳಿಸುವಂತೆ ಇಲಾಖೆ ಮನವಿ ಮಾಡಿಕೊಂಡಿದೆ.
ಅನ್ನ ಸೇವೆ ಆ್ಯಪ್ನ ಅಪ್ಡೇಟ್ ಕೂಡ ಗೂಗಲ್ ಪ್ಲೇಸ್ಟೋರ್ನಲ್ಲಿ ಲಭ್ಯವಿದ್ದು ಈಗಾಗಲೇ ತಮ್ಮ ಮೊಬೈಲ್ ನಲ್ಲಿ ಆ್ಯಪ್ ಡೌನಲೋಡ್ ಮಾಡಿಕೊಂಡಿರುವವರು ಅಪ್ಡೇಟ್ ಮಾಡಿಕೊಳ್ಳಬಹುದು. ಇದನ್ನೂ ಓದಿ: ಫ್ರಾನ್ಸ್ ಆಯ್ತು ಈಗ ಪೋರ್ಚುಗಲ್ನಲ್ಲಿ ಭುಗಿಲೆದ್ದ ಬೃಹತ್ ಜನಾಕ್ರೋಶ
