ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಭೀಕರ ಅಪಘಾತವೊಂದು (Yellapur Accident) ಸಂಭವಿಸಿದೆ. ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ.
ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ತಡರಾತ್ರಿ ಘಟನೆ ನಡೆದಿದ್ದು, ಸುಮಾರು 17 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಹಾವೇರಿ (Haveri) ಜಿಲ್ಲೆಯ ಸವಣೂರಿನವರು ಎನ್ನಲಾಗಿದೆ. ಇದನ್ನೂ ಓದಿ: ಫ್ಯಾಮಿಲಿ ಪ್ಲ್ಯಾನಿಂಗ್ ಚಿಕಿತ್ಸೆಗೆ ದಾಖಲಾಗಿದ್ದ ಬಾಣಂತಿ ಅಸ್ವಸ್ಥಗೊಂಡು ಸಾವು
ತರಕಾರಿ ತುಂಬಿದ್ದ ಹಾವೇರಿಯಿಂದ ಅಂಕೋಲದ ಕಡೆ ಹೊರಟಿತ್ತು, ಲಾರಿಯಲ್ಲಿ 30 ಮಂದಿ ಕುಳಿತಿದ್ದರು. ವೇಗವಾಗಿ ಬರುತ್ತಿದ್ದ ವೇಳೆ ಲಾರಿ ಪಲ್ಟಿಯಾಗಿ ದುರಂತ ಸಂಭವಿಸಿದೆ. ಇದನ್ನೂ ಓದಿ: ಲಾಸ್ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು ನಂದಿಸಲು ಪಿಂಕ್ ಪೌಡರ್, ಸೂಪರ್ ಸ್ಕೂಪರ್ಸ್ ವಿಮಾನಗಳ ಬಳಕೆ- ವಿಶೇಷತೆ ಏನು?
ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಯಲ್ಲಾಪುರ ಪೊಲೀಸರು 9 ಜನರ ಶವಗಳನ್ನ ಹೊರತೆಗೆದಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಮಗನ ಎದುರೇ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ