ಚಿಕ್ಕಬಳ್ಳಾಪುರ: ಹಾಡಹಗಲೇ ರೈತ ಮುಖಂಡ(Farmer leader) ಹಾಗೂ ಆತನ ರಕ್ಷಣೆಗೆ ಧಾವಿಸಿದ ಬಾಮೈದನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭಕ್ತರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪ್ರತೀಶ್ ಹಾಗೂ ಈತನ ಬಾಮೈದ ಶಿವರಾಜಕುಮಾರ್ ಹಲ್ಲೆಗೆ ಒಳಗಾದವರು. ಇದೇ ಗ್ರಾಮದ ಉದಯ್ ಕಿರಣ್, ಗೋವಿಂದ, ಹಾಗೂ ಹೇಮಂತ್ ಎಂಬುವವರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಅಂದಹಾಗೆ ರೈತ ಸಂಘದಲ್ಲಿ ಸಕ್ರಿಯನಾಗಿರುವ ಪ್ರತೀಶ್, ಇಂದು ಬೆಳಗ್ಗೆ ವಾಕಿಂಗ್ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ಉದಯ್ ಕಿರಣ್ ಎಂಬಾತ ಚಾಕು ಹಿಡಿದು ಕೊಲೆ ಮಾಡುವ ಬೆದರಿಕೆ ಹಾಕಿ ಮನಸ್ಸೋ ಇಚ್ಛೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಇದನ್ನೂ ಓದಿ: ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಇಲ್ಲದ್ದಕ್ಕೆ ಎಲೆಕ್ಟ್ರಿಕ್ ಸ್ಕೂಟರ್‌ಗೆ ದಂಡ
Advertisement
Advertisement
ಘಟನೆಯಲ್ಲಿ ಪರಾರಿಯಾಗಿ ಮನೆಯಲ್ಲಿ ಅವಿತುಕೊಳ್ಳಲು ಹೋದ ಪ್ರತಿಷ್ ಹಿಂಬಾಲಿಸಿ ಹೋದ ಉದಯ್ ಕಿರಣ್ (Uday Kiran) ಹಾಗೂ ಆತನ ಕಡೆಯವರು ಅಡ್ಡ ಬಂದ ಪ್ರತೀಶ್ ಬಾಮೈದ ಶಿವರಾಜ್ ಕುಮಾರ್ ಮೇಲೂ ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಶಿಡ್ಲಘಟ್ಟ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು.
Advertisement
Advertisement
ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಿಂದಲೂ ಚಿಕಿತ್ಸೆ ಸಾಧ್ಯವಾಗದೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ (Victoria Hospital) ಗೆ ರವಾನಿಸಲಾಗಿದೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹಳೆಯ ದ್ವೇಷ ಹಾಗೂ ಜಮೀನು ವಿವಾದದ ಹಿನ್ನೆಲೆಯಲ್ಲಿ ಘಟನೆ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದ್ದು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.