ಹಾಸನ: ರಾತ್ರೋ ರಾತ್ರಿ ಮನೆಗೆ ನುಗ್ಗಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ.
ಮಮತಾ (23) ಹಲ್ಲೆಗೊಳಗಾದ ಮಹಿಳೆ. ಅಪರಿಚಿತ ವ್ಯಕ್ತಿಯೊಬ್ಬ ಸಕಲೇಶಪುರದ ವಿನೋಬಾ ರಸ್ತೆಯಲ್ಲಿರುವ ಮನೆಗೆ ಏಕಾಏಕಿ ನುಗ್ಗಿ ಮಮತಾ ಅವರ ಮುಖ ಮತ್ತು ಕೈಗಳನ್ನು ಮಚ್ಚಿನಿಂದ ಕೊಚ್ಚಿ ಬಳಿಕ ಪರಾರಿಯಾಗಿದ್ದಾನೆ.
ಎರಡು ವರ್ಷಗಳ ಹಿಂದೆ ಮಮತಾ ಅವರು ಮುಸ್ಲಿಂ ಯುವಕನನ್ನು ಪ್ರೀತಿಸುತ್ತಿದ್ದರು. ಈ ವಿಚಾರ ಮಮತಾ ಮನೆಯವರಿಗೆ ತಿಳಿದಾಗ ಈ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ಅಂತರ್ಜಾತಿ ವಿವಾಹ ಬೇಡ ಎಂದು ಹೇಳಿದ್ದರು. ಆದ್ರೆ ಹೆತ್ತವರ ಮಾತನನು ಕೇಳದೆ ಮಮತಾ ಮುಸ್ಲಿಂ ಯುವಕನನ್ನು ಮದುವೆಯಾಗಿದ್ದರು. ಇದೀಗ ಮುಸ್ಲಿಂ ಯುವಕನನ್ನು ಮದುವೆಯಾಗಿರುವುದಕ್ಕೆ ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿರುವ ಶಂಕೆ ವ್ಯಕ್ತವಾಗುತ್ತದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿ ದುಷ್ಕರ್ಮಿ ಈ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗಿದ್ದು, ಹಲ್ಲೆಗೆ ಕಾರಣ ತಿಳಿದು ಬಂದಿಲ್ಲ. ಘಟನೆಯಿಂದ ಗಂಭೀರ ಗಾಯಗೊಂಡಿರುವ ಮಮತಾ ಅವರನ್ನು ಕೂಡಲೇ ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಮತಾ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸಂಬಂಧ ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv