ಬೆಂಗಳೂರು: ತಮಿಳುನಾಡಿನ ಡಿಎಂಕೆ (DMK) ನಾಯಕ ಎಂಕೆ ಅಳಗಿರಿಯ (MK Alagiri) ಆಪ್ತ ಮಧುರೈನ ವಿಕೆ ಗುರುಸ್ವಾಮಿ ಮೂರ್ತಿ (55) ಮೇಲೆ 5 ಜನರ ಗುಂಪು ದಾಳಿ ಮಾಡಿದೆ.
ಗುರುಸ್ವಾಮಿ ಮೂರ್ತಿ ಕಾನೂನು ಸಮಸ್ಯೆ ಇರುವ ಸೈಟ್ ವಿಚಾರವಾಗಿ ಮಾತುಕತೆಗೆ ಬೆಂಗಳೂರಿಗೆ ಬಂದಿದ್ದ. ಭಾನುವಾರ ವಿಮಾನದ ಮೂಲಕ ಬಂದು ಹೋಟೆಲ್ ನಲ್ಲಿ ರೂಂ ಮಾಡಿಕೊಂಡಿದ್ದ. ಸೋಮವಾರ ಮನೆಯೊಂದನ್ನು ಹುಡುಕಿ ಸಂಜೆ ಸೈಟ್ ಬಗ್ಗೆ ಮಾತುಕತೆ ಮಾಡಲು ಹೋಟೆಲ್‌ಗೆ ಹೋಗಿದ್ದ. ಬ್ರೋಕರ್ ಜೊತೆ ಮಾತುಕತೆ ನಡೆಸುತ್ತಿದ್ದಾಗ ತಮಿಳುನಾಡು ರಿಜಿಸ್ಟ್ರೇಷನ್ ಕಾರಿನಲ್ಲಿ ಬಂದ 5 ಜನರು ಏಕಾಏಕಿ ಗುರುಸ್ವಾಮಿ ಮೂರ್ತಿ ಮೇಲೆ ಹಲ್ಲೆ ನಡೆಸಿದ್ದಾರೆ.
ತನ್ನ 20ನೇ ವಯಸ್ಸಿನಲ್ಲೇ ಗುರುಸ್ವಾಮಿ ಮೂರ್ತಿ ಕ್ರಿಮಿನಲ್ ಕೇಸ್‌ಗಳಲ್ಲಿ ಭಾಗಿಯಾಗಿದ್ದ. ಜೀವ ಬೆದರಿಕೆ ಇದ್ದ ಹಿನ್ನೆಲೆ ಆತ ಎಲ್ಲಿಯೂ ಬಹಿರಂಗವಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ಮಧುರೈನಲ್ಲಿ ಸಾಕಷ್ಟು ದ್ವೇಷ ಕಟ್ಟಿಕೊಂಡಿದ್ದ. ಹತ್ಯೆಗೆ ಸ್ಕೆಚ್ ಹಾಕಿ 5 ಜನರ ತಂಡ ಇಂದು ಬೆಂಗಳೂರಿನ ಬಾಣಸವಾಡಿಯ ಸುಖ್‌ಸಾಗರ್ ಹೋಟೆಲ್‌ನಲ್ಲಿದ್ದಾಗ ದಾಳಿ ಮಾಡಿದೆ. ಇದನ್ನೂ ಓದಿ: ಚೆನ್ನೈ ಪೊಲೀಸರಿಗೆ ಲೀಗಲ್ ನೋಟಿಸ್ – ಉದಯ್‌ನಿಧಿ ವಿರುದ್ಧ ಎಫ್‌ಐಆರ್ ದಾಖಲಿಸಲು 7 ದಿನ ಕಾಲಾವಕಾಶ
ಗುರುಸ್ವಾಮಿ ಜೊತೆಯಲ್ಲಿದ್ದವರಿಂದಲೇ ಆತನ ಬಗ್ಗೆ ಮಾಹಿತಿ ಲೀಕ್ ಮಾಡಿ, ದಾಳಿ ಮಾಡಿರುವ ಶಂಕೆ ಮೂಡಿದೆ. ಮಾರಣಾಂತಿಕವಾಗಿ ಹಲ್ಲೆಗೆ ಒಳಗಾಗಿರುವ ಗುರುಸ್ವಾಮಿಯನ್ನು ಹತ್ತಿರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹಿಂದೂ ಸಮಾಜದ ಅನಿಷ್ಟಗಳಿಗೆ ಮುಸ್ಲಿಮರ ಆಕ್ರಮಣವೇ ಕಾರಣ: ಆರ್‌ಎಸ್ಎಸ್ ಮುಖಂಡ ಕೃಷ್ಣ ಗೋಪಾಲ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]