ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ (Firecracker factory) ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ತಮಿಳುನಾಡಿನ ವಿರುಧ್‌ನಗರ ಜಿಲ್ಲೆಯ ಶಿವಕಾಶಿ (Sivakasi) ಬಳಿಯ ನಾರಣಾಪುರಂದಲ್ಲಿ (Naranapuram) ನಡೆದಿದೆ.
ಮರಿಯಮ್ಮಲ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ದುರಂತ – ಪೈಲಟ್ ಸೇರಿ 16 ಜನ ಸಾವು
ಈ ಸಂದರ್ಭ ದೊಡ್ಡ ಮಟ್ಟದ ಸ್ಫೋಟದ ಶಬ್ದ ಕೇಳಿ ಬಂತು. ಗಾಬರಿಯಲ್ಲಿ ಮನೆಯಿಂದ ಹೊರಗೆ ಬಂದಾಗ ಪಟಾಕಿ ಅಂಗಡಿ ಸ್ಫೋಟಗೊಂಡಿರುವುದು ಗೋಚರಿಸಿದೆ ಎಂದು ಸ್ಥಳೀಯರು ವಿವರಿಸಿದ್ದಾರೆ. ಘಟನಾ ರಕ್ಷಣಾ ತಂಡಗಳು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದೆ. ಸ್ಫೋಟದ ನಿಖರ ಕಾರಣ ತಿಳಿದುಬಂದಿಲ್ಲ.