ಭೋಪಾಲ್: ಐದು ವರ್ಷದ ಕಿವುಡ ಮತ್ತು ಮೂಕ ಬಾಲಕಿಯ ಮೇಲೆ ಆಕೆಯ ನೆರೆ ಮನೆಯಲ್ಲಿ (Neighbour) ವಾಸಿಸುತ್ತಿದ್ದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಘಟನೆ ಭೋಪಾಲ್‍ನಲ್ಲಿ (Bhopal) ನಡೆದಿದೆ.
ಘಟನೆಗೆ ಸಂಬಂಧಿಸಿ 56 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಐದು ವರ್ಷದ ವಿಶೇಷ ಚೇತನ (Specially Abled) ಬಾಲಕಿಗೆ ಆಟವಾಡಲು ತನ್ನ ಮನೆಗೆ ಕರೆದಿದ್ದು ಆಕೆಯ ಮೇಲೆ ಆತ ಅತ್ಯಾಚಾರವೆಸಗಿದ್ದಾನೆ. ಆ ವೇಳೆ ಬಾಲಕಿ ಕಿರುಚಿದ್ದಾಳೆ. ಬಾಲಕಿಯ ಚೀರಾಟವನ್ನು ಕೇಳಿದ ಆಕೆಯ ತಾಯಿಯು (Mother) ಆರೋಪಿ ಮನೆಗೆ ಬಂದಿದ್ದಾಳೆ. ಅಲ್ಲಿ ಬಾಲಕಿಯ ಮೇಲೆ ಆತ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನ್ನು ನೋಡಿ ಒಮ್ಮೆಲೆ ಆತಂಕಕ್ಕೆ ಒಳಗಾಗಿದ್ದಾಳೆ.
ಆದರೂ ಚೇತರಿಸಿಕೊಂಡು ತಕ್ಷಣ ತನ್ನ ಮಗುವನ್ನು ಪಾರು ಮಾಡಿದ್ದಾಳೆ. ಇದಾದ ಬಳಿಕ ಘಟನೆಗೆ ಸಂಬಂಧಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಮಗುವು ತನ್ನ ತಾಯಿಯ ಸಹಾಯ ಪಡೆದು ತನಗಾದ ತೊಂದರೆಯನ್ನು ಪೊಲೀಸರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಟಿಪ್ಪು ಪ್ರತಿಮೆ ಸ್ವಂತ ಜಾಗದಲ್ಲಿ ಕಟ್ತೀವಿ ಅಂದ್ರೂ ಬಿಡಲ್ಲ, ಬಾಬ್ರಿ ಮಸೀದಿ ರೀತಿ ಧ್ವಂಸ ಮಾಡ್ತೇವೆ – ಮುತಾಲಿಕ್
ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಪರೀಕ್ಷೆ ನಡೆಸಿದಾಗ ಆತ ಪಾನಮತ್ತನಾಗಿರುವುದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿ ಆತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ದೇವರ ಪೂಜೆಗೆ ಎರಡು ಗುಂಪುಗಳ ನಡುವೆ ಗಲಾಟೆ – ಬೀಗ ಮುರಿದು ಪೂಜೆ ಮಾಡಿದ ಪೊಲೀಸರು