ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗ (KPSC) ದಲ್ಲಿ ಹುದ್ದೆಗಾಗಿ ನಡೆದಿದೆ ಎನ್ನಲಾದ ಡೀಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಎಫ್‌ಐಆರ್‌ಗಳು ದಾಖಲಾಗಿವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ (Seemanth Kumar Singh) ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಈ ಕುರಿತು ಮಾತನಾಡಿದ ಅವರು, ಕೆಪಿಎಸ್‌ಸಿ ಯಲ್ಲಿ ಹುದ್ದೆಗಾಗಿ ನಡೆದಿದೆ ಎನ್ನಲಾದ ಡೀಲಿಂಗ್ ಪ್ರಕರಣ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ 3 ಎಫ್‌ಐಆರ್ ದಾಖಲಾಗಿದೆ. ಈ ಪೈಕಿ 2 ಎಫ್‌ಐಆರ್‌ಗಳನ್ನ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹಣ ಹೊಂದಿಸಲಾಗದೆ ಮೊಟ್ಟೆಗೆ ಕೊಕ್ – ಇದು ಸರ್ಕಾರಿ ಶಾಲೆಯ ʻಒಂದು ಮೊಟ್ಟೆಯ ಕಥೆʼ

ಉಳಿಕೆ ಒಂದು ಕೇಸ್‌ಗೆ ಕೋರ್ಟ್‌ನಲ್ಲಿ (Court) ಅನುಮತಿ ಕೇಳಲಾಗಿದೆ. ಸದ್ಯ 2 ಕೇಸ್‌ಗಳನ್ನ ಸಿಐಡಿಗೆ ವರ್ಗಾವಣೆ ಮಾಡಿ ಡಿಜಿ ಅಂಡ್ ಐಜಿಪಿ ಆದೇಶ ಮಾಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಫೇಸ್‌ಬುಕ್‌ನಿಂದ ಪ್ರಧಾನಿ ಮೋದಿ ವಿಡಿಯೋ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್ ದೈತ್ಯ ಮೆಟಾ
ಕೆಪಿಎಸ್‍ಸಿಯಲ್ಲಿ 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ 80 ಲಕ್ಷ ರೂ. ವೆರಗೆ ಲಂಚ ಪಡೆದಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಪ್ರಕರಣವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಹಾಗೂ ಕೆಪಿಎಸ್‌ಸಿ ವಿರುದ್ಧ ವಿದ್ಯಾರ್ಥಿಗಳು ಹಾಗೂ ಪಶುವೈದ್ಯಾಧಿಕಾರಿಗಳು ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ ರಾಜ್ಯ ಬಿಜೆಪಿ ಘಟಕ ಕೂಡ ಬೆಂಬಲ ನೀಡಿದೆ.
