ಬೆಳಗಾವಿ: ಬಾಣಂತಿಯರು ಮತ್ತು ಹಸುಗೂಸುಗಳ ಸಾವಿನಲ್ಲಿ ರಾಜ್ಯ ಸರ್ಕಾರದ ಬೇಜವಾಬ್ದಾರಿತನ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿವೈ.ವಿಜಯೇಂದ್ರ (BY Vijayendra) ಆರೋಪಿಸಿದರು.ಇದನ್ನೂ ಓದಿ: ಸಿಎಂ ನಿದ್ದೆರಾಮಯ್ಯ ಆಗಿದ್ದಾರೆ, 17 ತಿಂಗಳಲ್ಲಿ 17 ಅವಾಂತರ ತೋರಿದ ಸರ್ಕಾರ – ಆರ್.ಅಶೋಕ್ ಕಿಡಿ
Advertisement
ಬೆಳಗಾವಿಯಲ್ಲಿ (Belagavi)ಇಂದು (ಡಿ.9) ಆಸ್ಪತ್ರೆಗೆ ಭೇಟಿ ಕೊಟ್ಟ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಸತ್ಯಾಂಶ ತಿಳಿಯಲು ಇಲ್ಲಿಗೆ ಬಂದಿದ್ದೇವೆ. ಆಸ್ಪತ್ರೆ ಭೇಟಿಯಲ್ಲಿ ರಾಜಕಾರಣದ ಪ್ರಶ್ನೆ ಇಲ್ಲ. ಇವತ್ತು ಬಡವರಿಗೆ ಅನ್ಯಾಯ ಆಗುತ್ತಿದೆ. ಬಾಣಂತಿಯರು, ಹಸುಗೂಸುಗಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ಸದನದಲ್ಲಿ ಚರ್ಚಿಸುತ್ತೇವೆ ಎಂದು ತಿಳಿಸಿದರು.
Advertisement
ಉಸ್ತುವಾರಿ ಸಚಿವರು, ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಈ ಸಾವುಗಳ ಕುರಿತು ತಲೆ ಕೆಡಿಸಿಕೊಂಡಿಲ್ಲ. ಈ ಬೇಜವಾಬ್ದಾರಿತನ ಏನಿದೆಯೋ? ಅದನ್ನು ಸರ್ಕಾರ ಈಗಲಾದರೂ ಎಚ್ಚೆತ್ತು ಗಮನಿಸಬೇಕು ಎಂಬ ದೃಷ್ಟಿಯಿಂದ ಇದರ ಕುರಿತು ಗಮನ ಸೆಳೆಯುತ್ತೇವೆ ಎಂದು ಹೇಳಿದರು.ಇದನ್ನೂ ಓದಿ: ತುಮಕೂರು ಸಿದ್ದಗಂಗಾ ಮಠದಲ್ಲಿ ಚಿರತೆ ಪ್ರತ್ಯಕ್ಷ