Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಸವಲಿಂಗ ಶ್ರೀಗಳ ಸಾವಿನ ಸುತ್ತ ಅನುಮಾನಗಳ ಹುತ್ತ – 3 ಪುಟಗಳ ಡೆತ್‍ನೋಟ್ ರಹಸ್ಯ ಬಯಲು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಸವಲಿಂಗ ಶ್ರೀಗಳ ಸಾವಿನ ಸುತ್ತ ಅನುಮಾನಗಳ ಹುತ್ತ – 3 ಪುಟಗಳ ಡೆತ್‍ನೋಟ್ ರಹಸ್ಯ ಬಯಲು!

Districts

ಬಸವಲಿಂಗ ಶ್ರೀಗಳ ಸಾವಿನ ಸುತ್ತ ಅನುಮಾನಗಳ ಹುತ್ತ – 3 ಪುಟಗಳ ಡೆತ್‍ನೋಟ್ ರಹಸ್ಯ ಬಯಲು!

Public TV
Last updated: October 24, 2022 6:27 pm
Public TV
Share
3 Min Read
NELAMANGALA SWAMIJI
SHARE

ರಾಮನಗರ: ರೇಷ್ಮೆನಾಡು ರಾಮನಗರದಲ್ಲಿ (Ramanagara) ಸ್ವಾಮೀಜಿಗಳ ಸರಣಿ ಆತ್ಮಹತ್ಯೆ (Suicide) ಮುಂದುವರಿದಿದೆ. ಕಳೆದ ತಿಂಗಳು ಮನನೊಂದು ಮಾಗಡಿಯ ಚಿಲುಮೆ ಮಠದ ಸ್ವಾಮಿಜೀಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮುನ್ನವೇ ಕಂಚುಗಲ್ ಬಂಡೆಮಠದ (Bande Mutt) ಸ್ವಾಮೀಜಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳದಲ್ಲಿ ಡೆತ್ ನೋಟ್ (Death Note) ಪತ್ತೆಯಾಗಿದ್ದು, ಶ್ರೀಗಳ ಆತ್ಮಹತ್ಯೆ ಸುತ್ತ ಅನುಮಾನಗಳ ಹುತ್ತ ಬೆಳೆದಿದೆ. ಮಠದ ಆವರಣದಲ್ಲಿ ಶ್ರೀಗಳ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು.

Bande Mutt Swamiji Suicide 1

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲೇ ದೊಡ್ಡ ಮಠ ಎಂಬ ಪ್ರಖ್ಯಾತಿ ಪಡೆದಿರುವ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚಿಗಷ್ಟೇ ಮಾಗಡಿಯ ಚಿಲುಮೆ ಮಠದ ಶ್ರೀ ಬಸವಲಿಂಗ ಸ್ವಾಮಿಗಳ (Basavalinga Swamiji) ದೇಹವೂ ಸಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ದುರ್ಘಟನೆ ಭಕ್ತರ ಮನಸ್ಸಿನಿಂದ ಮಾಸುವ ಮುನ್ನವೇ ಇಂದು ಬೆಳಗ್ಗೆ ಶ್ರೀಬಸವಲಿಂಗ ಸ್ವಾಮೀಜಿಯವರ ದೇಹವೂ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಇತರ ಮಠಗಳ ಶ್ರೀಗಳು ಹಾಗೂ ಭಕ್ತರಲ್ಲಿ ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ. ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು

Bande Mutt Swamiji Suicide

ಡೆತ್‍ನೋಟ್‍ನಲ್ಲಿ ಏನಿದೆ?
ಶ್ರೀಗಳು ಅತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮೂರು ಪುಟಗಳ ಡೆತ್‍ನೋಟ್ ಬರೆದಿದ್ದು, ಡೆತ್‍ನೋಟ್‍ನಲ್ಲಿ ಕೆಲವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ಯಾರ ಸಹಾಯವೂ ಇರಲಿಲ್ಲ. ಕೆಲವರಿಂದ ಬೆದರಿಕೆ ಕರೆಗಳು ಸಹ ಬಂದಿವೆ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದೇನೆ ಎಂದು ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ ಎಂದು ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಸ್ವಾಮೀಜಿ ಆತ್ಮಹತ್ಯೆ ಪ್ರಕರಣ- ಮೂರು ಪುಟಗಳ ಡೆತ್‍ನೋಟ್ ಪತ್ತೆ

NELAMANGALA SWAMIJI 4

1997ರಲ್ಲಿ ಬಂಡೇ ಮಠದ ಅಧಿಕಾರ ವಹಿಸಿಕೊಂಡಿದ್ದ ಬಸವಲಿಂಗ ಸ್ವಾಮೀಜಿ ಅವರ ಮೂಲ ಹೆಸರು ಬಸವರಾಜು. ಚನ್ನಮಲ್ಲಯ್ಯ, ಪುಟ್ಟಗೌರಮ್ಮರ ಎಂಟನೇ ಪುತ್ರರಾಗಿದ್ದ ಬಸವಲಿಂಗ ಸ್ವಾಮೀಜಿ 8ನೇ ತರಗತಿಯವರೆಗೂ ಬಂಡೇಮಠದಲ್ಲೇ ವಿದ್ಯಾಭ್ಯಾಸ ಮಾಡಿದ್ದರು. ನಂತರ ಸಿದ್ದಗಂಗಾ ಮಠದಲ್ಲಿ ವಿದ್ಯಾಭ್ಯಾಸ ಪಡೆದಿದ್ದ ಶ್ರೀಗಳು ವೇದ, ಉಪನಿಷತ್, ವಿದ್ವತ್‍ನಲ್ಲಿ ಪಾರಂಗತ ಗಳಿಸಿದ್ದರು. ಸ್ವಾಮೀಜಿಗಳ ಹೆಸರಲ್ಲಿ 80 ಎಕರೆ ಜಮೀನು ಇದ್ದು, ಬಂಡೆಮಠದಲ್ಲಿ 2ವರ್ಷ ಮರಿಸ್ವಾಮಿಗಳಾಗಿ ಬಳಿಕ ಪೀಠ ಅಲಂಕರಿಸಿದ್ದರು. ಇತ್ತೀಚೆಗೆ ಬೆಳ್ಳಿ ಮಹೋತ್ಸವ ಆಚರಣೆ ಮಾಡಿಕೊಂಡಿದ್ದರು. ಅಲ್ಲದೇ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಗಣ್ಯರನ್ನು ಸೇರಿಸಿ ಮಠದಲ್ಲಿ ನೂತನ ಕಟ್ಟಡದ ಗುದ್ದಲಿ ಪೂಜೆಗೆ ಪ್ಲಾನ್ ಮಾಡಿದ್ದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಭಕ್ತವೃಂದಕ್ಕೆ ಭರಿಸಲಾಗದ ನೋವುಂಟು ಮಾಡಿದೆ.

ಅನೇಕ ಉತ್ತಮ ಕಾರ್ಯಕ್ರಮಗಳನ್ನು ಮಾಡಿ ಸಮಾಜಕ್ಕೆ ಮಾದರಿ ಮಠವಾಗಿಯೂ ಬೆಳೆದಿದ್ದ ಶ್ರೀ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಸುದ್ದಿ ಕೇಳಿ ಸಾವಿರಾರು ಭಕ್ತಾದಿಗಳು ವಿಚಲಿತರಾಗಿದ್ದಾರೆ. ಅಲ್ಲದೇ ಶ್ರೀಗಳ ನಿಧನ ಸುದ್ದಿ ಕೇಳಿ ಸಿದ್ಧಲಿಂಗಾ ಸ್ವಾಮೀಜಿ, ಸುತ್ತೂರು ಶ್ರೀಗಳು ಸೇರಿದಂತೆ ಹಲವು ಮಠಾಧೀಶರು, ಜನಪ್ರತಿನಿಗಳು ಹಾಗೂ ಗಣ್ಯರು ಮಠಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಸಾವಿರಾರು ಮಂದಿ ಭಕ್ತರು ಮಠದ ಬಳಿ ಜಮಾಯಿಸಿದ್ದ ಹಿನ್ನೆಲೆಯಲ್ಲಿ ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಹಿರಿಯ ಶ್ರೀ ಶಿವರುದ್ರ ಮಹಾಸ್ವಾಮಿ ಗದ್ದುಗೆ ಪಕ್ಕದಲ್ಲೇ ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನಡೆಯಿತು.

ಒಟ್ಟಾರೆ ಮಠದ ಕೊಠಡಿಯೊಂದರ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶ್ರೀಗಳ ಮೃತದೇಹ ಪತ್ತೆಯಾಗಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ದೀಪಾವಳಿ ಆಚರಣೆಯ ಸಿದ್ಧತೆಯಲ್ಲಿ ಮಠದ ಭಕ್ತಾದಿಗಳಿಗೆ ಬಸವಲಿಂಗ ಸ್ವಾಮೀಜಿ ಅವರ ಆತ್ಮಹತ್ಯೆ ಬರಸಿಡಿಲು ಬಡಿದಂತಾಗಿದೆ. ಡೆತ್‍ನೋಟ್‍ನಲ್ಲಿರುವ ಕೆಲವು ಮಾಹಿತಿಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಕೆಲ ವೈಯಕ್ತಿಕ ಕಾರಣಗಳಿಂದ ಬೇಸತ್ತು ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ. ಪೋಲಿಸರ ತನಿಖೆ ನಂತರವಷ್ಟೇ ಸತ್ಯಾಸತ್ಯತೆ ಬಯಲಾಗಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:basavalinga swamijideath noteKanchugal Bande Muttramanagaraಕಂಚುಗಲ್ ಬಂಡೆಮಠದ ಸ್ವಾಮೀಜಿಡೆತ್‍ನೋಟ್ಬಂಡೆ ಮಠರಾಮನಗರ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
1 hour ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
2 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
3 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
3 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
3 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?