ಬೆಂಗಳೂರು: ಹುಟ್ಟು ಹಬ್ಬದ ಸಲುವಾಗಿ ಕಟೌಟ್ ನಿಲ್ಲಿಸುವುದಕ್ಕೆ ಹೋಗಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಯಶ್ ಅಭಿಮಾನಿಗಳ (Yash Fans) ಕುಟುಂಬಕ್ಕೆ ರಾಜ್ಯ ಸರ್ಕಾರ (Government Of Karnataka) ಪರಿಹಾರ ಘೋಷಣೆ ಮಾಡಿದೆ.
ಈ ಸಂಬಂಧ ಮಾತನಾಡಿರುವ ಸಚಿವ ಹೆಚ್.ಕೆ ಪಾಟೀಲ್ (HK Patil), ವಿದ್ಯುತ್ ಸ್ಪರ್ಶದಿಂದ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದೇವೆ. ಗಾಯಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯಶ್ ಬರ್ತ್‍ಡೇಗೆ ಬೃಹತ್ ಕಟೌಟ್ ನಿಲ್ಲಿಸುವಾಗ ವಿದ್ಯುತ್ ಸ್ಪರ್ಶ – ಮೂವರ ದುರ್ಮರಣ
Advertisement
Advertisement
ಮುಂದುವರಿದು, ಯಶ್ ಅಭಿಮಾನಿಗಳು ಮೃತಪಟ್ಟಿರುವ ಘಟನೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ನಟ ಯಶ್ ಸಹ ನನ್ನ ಜೊತೆ ಮಾತನಾಡಿದ್ದಾರೆ. ಅಭಿಮಾನಿಗಳ ಮನೆಗೆ ಅವರಿಂದು ಭೇಟಿ ನೀಡಲಿದ್ದಾರೆ. ಎತ್ತರದಲ್ಲಿ ಫ್ಲೆಕ್ಸ್ ಹಾಕುವಾಗ ಭದ್ರತಾ ವೈಫಲ್ಯವಾಗುತ್ತಿದೆ. ಈ ರೀತಿ ಘಟನೆಗಳು ನಡೆಯದಂತೆ ಏನೆಲ್ಲಾ ಎಚ್ಚರಿಕೆ ವಹಿಸಬಹುದು ಎಂದು ಸಿಎಂ ಜೊತೆಗೆ ಚರ್ಚೆ ಮಾಡ್ತೀವಿ. ನಂತರ ಕ್ರಮವನ್ನು ಅನುಷ್ಠಾನಗೊಳಿಸುತ್ತೇವೆ ಎಂದು ವಿವರಿಸಿದ್ದಾರೆ.
Advertisement
Advertisement
ಮೃತ ಅಭಿಮಾನಿಗಳ ಮನೆಗೆ ಇಂದು ಯಶ್ ಭೇಟಿ:
ಫ್ಲೆಕ್ಸ್ ಹಾಕುವಾಗ ಮೃತಪಟ್ಟಿರುವ ಮೂವರು ಅಭಿಮಾನಿಗಳ ಕುಟುಂಬಸ್ಥರನ್ನು ಭೇಟಿ ಮಾಡಲು ಸೋಮವಾರ (ಜ.8) ಸಂಜೆಯೇ ನಟ ಯಶ್ ಗದಗ ಜಿಲ್ಲೆಗೆ ತೆರಳಲಿದ್ದಾರೆ ಎನ್ನುವ ಮಾಹಿತಿ ಇದೆ. ಅವರ ಆಪ್ತರ ಪ್ರಕಾರ, ವಿದೇಶದಿಂದ ಬರುತ್ತಿದ್ದಂತೆಯೇ ಹೆಲಿಕಾಪ್ಟರ್‌ನಲ್ಲಿ ಯಶ್ ಗದಗಕ್ಕೆ ಆಗಮಿಸಿ, ಅಲ್ಲಿಂದ ಮೃತ ಅಭಿಮಾನಿಗಳ ಮನೆಗೆ ತೆರಳಲಿದ್ದಾರೆ. 3 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ 4 ಗಂಟೆಗೆ ಬೈರೋಡ್ ಲಕ್ಷ್ಮೀಶ್ವರಕ್ಕೆ ಮೃತ ಅಭಿಮಾನಿಗಳ ಮನೆಗೆ ಭೇಟಿ ಕೊಡಲಿದ್ದಾರೆ. ಇದನ್ನೂ ಓದಿ: ವಿದ್ಯುತ್ ಸ್ಪರ್ಶ ಘಟನೆ: ಮೃತ ಅಭಿಮಾನಿಗಳ ಮನೆಗೆ ಇಂದು ಯಶ್ ಭೇಟಿ
ಏನಿದು ಘಟನೆ?
ಖ್ಯಾತ ನಟ ಯಶ್ ಅವರ ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ 3 ಯುವಕರು ಸಾವನ್ನಪ್ಪಿದ ಘಟನೆ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೃತರನ್ನು ಹನುಮಂತ ಹರಿಜನ್ (24), ಮುರಳಿ ನಡುವಿನಮನಿ (20) ಹಾಗೂ ನವೀನ್ ಗಾಜಿ (20) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಂಜುನಾಥ್, ಪ್ರಕಾಶ್ ಹಾಗೂ ಹನುಮಂತ ಎಂಬವರಿಗೆ ಗಂಭೀರ ಗಾಯಾಳಾಗಿವೆ.