ದೋಹಾ: ಉಸಿರುಗಟ್ಟಿ ಶಾಲಾ ವಾಹನ (School Bus) ದಲ್ಲಿಯೇ 4 ವರ್ಷದ ಬಾಲಕಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಖಾಸಗಿ ನರ್ಸರಿ ಶಾಲೆಯನ್ನು ಮುಚ್ಚಲು ಆದೇಶ ನೀಡಲಾಗಿದೆ.
ಮಿನ್ಸಾ ಮರಿಯಮ್ ಜಾಕೋಬ್ (4) ಮೃತ ದುರ್ದೈವಿ ಬಾಲಕಿ. ಈಕೆ ಕೇರಳ (Kerala) ಮೂಲದ ಅಭಿಲಾಷ್ ಜಾಕೋಬ್ ಮತ್ತು ಸೌಮ್ಯಾ ದಂಪತಿಯ ಎರಡನೇ ಮಗಳು. ಸೆಪ್ಟೆಂಬರ್ 11 ರಂದು ಮಿನ್ಸಾ ಹುಟ್ಟುಹಬ್ಬ (Birthday) ವಾಗಿದ್ದು, ಈ ದಿನವೇ ಆಕೆ ಕತಾರ್ ನ ಶಾಲಾ ಬಸ್‍ನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಈ ಸಂಬಂಧ ಇದೀಗ ಕತಾರ್ ನ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಸಚಿವಾಲಯವು ಈ ಆದೇಶ ಹೊರಡಿಸಿದೆ. ಪ್ರಾಥಮಿಕ ತನಿಖೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
Advertisement
Advertisement
ಏನಿದು ಘಟನೆ?: ವಕ್ರಾದ ಶಿಶುವಿಹಾರದಲ್ಲಿ ಓದುತ್ತಿದ್ದ ಮಿನ್ಸಾ, ಅದೇ ಶಾಲೆಯ ಬಸ್‍ನಲ್ಲಿಯೇ ಬಂಧಿಯಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾಳೆ. ಈಕೆ ಭಾನುವಾರ ಬೆಳಗ್ಗೆ ತನ್ನ ಶಾಲಾ ಬಸ್‍ನಲ್ಲಿ ಶಾಲೆಗೆ ಹೋಗಿದ್ದಳು. ಹಿಂದೆ ಕುಳಿತಿದ್ದ ಆಕೆ ದಾರಿ ಮಧ್ಯೆಯೇ ನಿದ್ದೆ ಮಾಡಿದ್ದಾಳೆ. ಆದರೆ ಆಕೆ ನಿದ್ದೆ ಮಾಡಿದ್ದನ್ನು ಬಸ್ (Bus) ಸಿಬ್ಬಂದಿ ಯಾರೂ ಗಮನಿಸಿರಲಿಲ್ಲ. ಹೀಗಾಗಿ ಮಕ್ಕಳನ್ನು ಶಾಲೆಯಲ್ಲಿ ಇಳಿಸಿದ ಸಿಬ್ಬಂದಿ, ಶಾಲಾ ವಾಹನವನ್ನು ಬಿಟ್ಟು ಹೋಗಿದ್ದಾರೆ. ಇದನ್ನೂ ಓದಿ: ಮೂರುವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಬಸ್ ಚಾಲಕನ ಮನೆ ಧ್ವಂಸ
Advertisement
Advertisement
ಮಧ್ಯಾಹ್ನ ತರಗತಿಗಳು ಮುಗಿದ ನಂತರ ಡ್ರೈವರ್ ಮತ್ತು ಕಂಡಕ್ಟರ್ ಮಕ್ಕಳನ್ನು ಅವರ ಮನೆಗೆ ಬಿಡಲು ಹಿಂದಿರುಗಿದಾಗ, ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದಳು. ಕೂಡಲೇ ಆಕೆಯನ್ನು ವಕ್ರಾ ಆಸ್ಪತ್ರೆ (Hospital) ಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಶಾಲೆಯಲ್ಲಿ ಬಸ್ ಬಿಟ್ಟು ಡ್ರೈವರ್ ಹಾಗೂ ನಿರ್ವಾಹಕ ಡೋರ್, ವಿಂಡೋಸ್ ಕ್ಲೋಸ್ ಮಾಡಿದ್ದಾರೆ. ಇದರಿಂದ ನಿದ್ದೆಗೆ ಜಾರಿದ್ದ ಬಾಲಕಿಗೆ ಉಸಿರಾಡಲು ಸಾಧ್ಯವಾಗಿಲ್ಲ.
ಕತಾರ್ ನಾದ್ಯಂತ ಗರಿಷ್ಠ ತಾಪಮಾನವು 36 ಡಿಗ್ರಿ ಸೆಲ್ಸಿಯಸ್ ಮತ್ತು 43 ಡಿಗ್ರಿ ಸೆಲ್ಸಿಯಸ್ ನಡುವೆ ಇತ್ತು ಎಂದು ಕತಾರ್ ಟ್ರಿಬ್ಯೂನ್ ವರದಿ ಮಾಡಿದೆ. ಇಂತಹ ವಾತಾವರಣದಲ್ಲಿ ಬಿಸಿಯಲ್ಲಿ ಬಾಲಕಿ 4 ಗಂಟೆಗಳ ಕಾಲ ಉಸಿರಾಡಲಾಗದೇ ಒದ್ದಾಡಿದ್ದಾಳೆ ಎನ್ನಲಾಗಿದೆ.