ಹಿಂದಿ ಕಿರುತೆರೆಯ ಖ್ಯಾತ ನಟಿ ತುನಿಷಾ ಶರ್ಮಾ (Tunisha Sharma) ಎರಡು ದಿನಗಳ ಹಿಂದೆಯಷ್ಟೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಈ ಸಾವಿಗೆ ಆಕೆಯ ಪ್ರಿಯಕರ ಶಿಜಾನ್ (Shijan) ಕಾರಣ ಎಂದು ಆರೋಪಿಸಲಾಗಿತ್ತು. ಸಿಕ್ಕಿರುವ ಡೆತ್ ನೋಟ್ ನಲ್ಲಿ ಶಿಜಾನ್ ಹೆಸರನ್ನು ಆಕೆ ಉಲ್ಲೇಖಿಸಿದ್ದರು ಎಂದು ಹೇಳಲಾಗುತ್ತಿದೆ. ಈಗಾಗಲೇ ಶಿಜಾನ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ಈ ಆತ್ಮಹತ್ಯೆ ಪ್ರಕರಣಕ್ಕೆ ಲವ್ ಜಿಹಾದ್ ಕಳಂಕ ಅಂಟಿಕೊಂಡಿದೆ.
Advertisement
ಮಹಾರಾಷ್ಟ್ರದ ಬಿಜೆಪಿ ಶಾಸಕ ರಾಮ್ ಕದಮ್ (Ram Kadam) ಈ ಕುರಿತು ಮಾತನಾಡಿದ್ದು, ಮೃತ ತುನಿಷಾ ಮತ್ತು ಶಿಜಾನ್ ನಡುವೆ ಪ್ರೇಮವಿತ್ತು. ಪರಸ್ಪರ ಗಲಾಟೆ ಮಾಡಿಕೊಂಡು ಅವರು ದೂರವಾಗಿದ್ದರು. ಆ ನೋವಿನಲ್ಲೇ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇಲ್ನೋಟಕ್ಕೆ ಇದು ಲವ್ ಜಿಹಾದ್ (Love Jihad) ಅನಿಸುತ್ತಿದೆ. ಕೂಡಲೇ ಈ ದಿಕ್ಕಿನಲ್ಲಿ ಪ್ರಕರಣವನ್ನು ತನಿಖೆ ಮಾಡಬೇಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಬಾಯ್‌ಫ್ರೆಂಡ್ ಜಾಕಿ ಭಗ್ನಾನಿ ಬರ್ತ್‌ಡೇಗೆ ನಟಿ ರಾಕುಲ್ ಲವ್ಲಿ ವಿಶ್
Advertisement
Advertisement
ಪ್ರಕರಣದ ಕುರಿತಂತೆ ತನಿಖೆ ಮಾಡುತ್ತಿರುವ ಪೊಲೀಸ್ ಅಧಿಕಾರಿಗಳು ಕೂಡ ಈಗಲೇ ಇದೊಂದು ಆತ್ಮಹತ್ಯೆ ಎಂದು ಪರಿಗಣಿಸಲಾಗಲ್ಲ. ಎಲ್ಲ ಆಯಾಮದಿಂದಲೂ ಈ ಪ್ರಕರಣವನ್ನು ತನಿಖೆ ಮಾಡಲಾಗುವುದು ಎಂದು ಹೇಳಿಕೆ ನೀಡಿದ್ದಾರೆ. ಶೂಟಿಂಗ್ ಬ್ರೇಕ್ ಟೈಮ್ ನಲ್ಲಿ ವಿಶ್ರಾಂತಿಗೆಂದು ರೂಮಿಗೆ ಹೋಗಿದ್ದ ತುನಿಷಾ ಬಾತ್ ರೂಮ್ ನಲ್ಲೇ ಶವವಾಗಿ ಪತ್ತೆಯಾಗಿದ್ದರಿಂದ ನಾನಾ ಕೋನಗಳಲ್ಲಿ ಈ ಪ್ರಕರಣವನ್ನು ತನಿಖೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
Advertisement
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಲಿ ಬಾಬಾ ದಸ್ತಾನ್ ಇ –ಕಾಬೂಲ್’ ಶೋನಲ್ಲಿ ತುನಿಷಾ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಶೋ ಶೂಟಿಂಗ್ ಗಾಗಿ ಹೋದವರು ಶವವಾಗಿ ಮನೆಗೆ ಬಂದಿದ್ದಾರೆ. ಕೇವಲ 15 ದಿನಗಳ ಹಿಂದೆಯಷ್ಟೇ ಅವರಿಗೆ ಲವ್ ಬ್ರೇಕ್ ಅಪ್ ಆಗಿತ್ತು ಎಂದು ಹೇಳಲಾಗುತ್ತಿದೆ. ಈ ಕಾರಣಕ್ಕಾಗಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದೂ ಹೇಳಲಾಗುತ್ತಿದೆ.