ಕೊಪ್ಪಳ: ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಆರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.
ಮೃತ ವಿದ್ಯಾರ್ಥಿಯನ್ನು ನಿರುಪಾದಿ ಹರಿಜನ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಛತ್ತೀಸ್‌ಗಢ: ಸರಕು ಸಾಗಣೆ ವಾಹನ ಪಲ್ಟಿಯಾಗಿ 5 ಮಂದಿ ಸಾವು
ಕೊಪ್ಪಳ (Koppal) ಜಿಲ್ಲೆಯ ಯಲಬುರ್ಗಾ (Yalaburga) ತಾಲೂಕಿನ ಗಾಣದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕ ಸೇರಿ ಆರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಕೊಪ್ಪಳ ಡಿಡಿಪಿಐ ಶ್ರೀಶೈಲ್ ಬಿರಾದಾರ್ ಆದೇಶ ಹೊರಡಿಸಿದ್ದಾರೆ.
ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದಲ್ಲಿ (Bhatkal) ಬಾವಿಗೆ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದ. ಘಟನೆಗೆ ಶಿಕ್ಷಕರ ನಿರ್ಲಕ್ಷ್ಯವೇ ಕಾರಣ ಎಂದು ಅಮಾನತು ಮಾಡಿ ಆದೇಶಿಸಿದ್ದಾರೆ.ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಸಿಗರೇಟ್‌ನಿಂದ ಮರ್ಮಾಂಗ ಸುಟ್ಟು ಸ್ನೇಹಿತನ ಹತ್ಯೆ!